More

    ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ಅಮಿತ್​ ಷಾ ಘೋಷಣೆ

    ದಾವಣಗೆರೆ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆಗೆ ಹೋಗಿ ಅಧಿಕಾರಕ್ಕೆ ಬರುತ್ತೇವೆ ಎಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್​ ಷಾ ಹೇಳಿದ್ದಾರೆ.

    ದಾವಣಗೆರೆಯಲ್ಲಿ ಗಾಂಧಿ ಭವನ, ಪೊಲೀಸ್‌ ಪಬ್ಲಿಕ್‌ ಶಾಲೆ, ಜಿಎಂ ಸೆಂಟ್ರಲ್‌ ಲೈಬ್ರರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅಮಿತ್​ ಷಾ ಅವರು, ನಿಕಟಪೂರ್ವ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ರೈತಪರರು, ಗ್ರಾಮೀಣ ಜನರ ಪರ ಆಡಳಿತ ನಡೆಸಿದ್ದರು. ಕರೊನಾ ವಿರುದ್ಧದ ಹೋರಾಟದಲ್ಲಿ ಉತ್ತಮ ಕೆಲಸ ಮಾಡಿದರು ಎಂದು ಶ್ಲಾಘಿಸಿದರು.

    ಇದನ್ನೂ ಓದಿ: ಕರೊನಾ ಲಸಿಕೆ ಹಾಕಿಸಿಕೊಳ್ಳದಿದ್ದರೆ ಪಿಂಚಣಿ-ಪಡಿತರವಿಲ್ಲ; ಈ ಕುರಿತ ಸತ್ಯಾಂಶವೇನು?

    ಯಡಿಯೂರಪ್ಪ ಸ್ವಯಂನಿರ್ಧಾರದಿಂದ ಸಿಎಂ ಸ್ಥಾನ ತ್ಯಾಗ ಮಾಡಿ, ಹೊಸ ಮುಖ್ಯಮಂತ್ರಿಗೆ ಅವಕಾಶ ನೀಡಿದರು. ನಂತರ, ಬೊಮ್ಮಾಯಿ ಸಿಎಂ ಆಗಿ ಆಯ್ಕೆಯಾದ್ರು. ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಅವರ ಒಂದೊಂದು ಕಾರ್ಯಕ್ರಮಗಳ ಬಗ್ಗೆ ಉತ್ತಮ ಜನಾಭಿಪ್ರಾಯ ವ್ಯಕ್ತವಾಗುತ್ತಿದೆ. ಬೊಮ್ಮಾಯಿ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿದ್ದು ಉತ್ತಮ ಆಯ್ಕೆ ಎಂಬುದು ಜನಾಭಿಪ್ರಾಯವಾಗಿದೆ ಎಂದರು.

    ಬಿಎಸ್‌ವೈ ಹಾಗೂ ಬೊಮ್ಮಾಯಿ ನೇತೃತ್ವದಲ್ಲಿ 2023 ರ ಚುನಾವಣೆ ನಡೆಯಲಿದೆ. ಸರ್ಕಾರ ರಚನೆಗೆ ಬೇಕಾದಷ್ಟು ಬಹುಮತ ಬಿಜೆಪಿ ಪಡೆಯಲಿ ಎಂದು ಹಾರೈಸುತ್ತೇನೆ. ಕರೊನಾ ತುರ್ತು ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಮರ್ಥವಾಗಿ ಎದುರಿಸುತ್ತಿದ್ದೇವೆ, ಕರ್ನಾಟಕ ಸರ್ಕಾರ ಕೂಡ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿದೆ. ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ‌ ಮುಂದಿನ‌ ದಿನಗಳಲ್ಲಿ‌ ಕರ್ನಾಟಕದಲ್ಲಿ ಬಿಜೆಪಿ‌ ಸರ್ಕಾರ ಸ್ವತಂತ್ರವಾಗಿ ಅಧಿಕಾರಕ್ಕೆ‌ ಬರಲಿದೆ ಎಂದು ಅಮಿತ್​ ಷಾ ಹೇಳಿದರು.

    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಡ್ರಗ್​​ಪೆಡ್ಲರ್ ಬೆಂಗಳೂರು ಪೊಲೀಸ್ ವಶಕ್ಕೆ

    ಶಾಲೆಗಳನ್ನು ತೆರೆಯಬಹುದೇ? ಮಕ್ಕಳಿಗೆ ಲಸಿಕೆ ಸಿಗೋದು ಯಾವಾಗ? ಏಮ್ಸ್​ ನಿರ್ದೇಶಕರು ಏನು ಹೇಳಿದ್ದಾರೆ ಓದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts