More

    ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ! ಯಾವ್ಯಾವ ಭಾಗದಲ್ಲಿ? ಇಲ್ಲಿದೆ ಮಾಹಿತಿ…

    ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಇದೇ ಪರಿಸ್ಥಿತಿ ಇನ್ನೂ ನಾಲ್ಕು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ಹಾಸನದಲ್ಲಿ ಮುಂದಿನ 24 ಗಂಟೆ ವ್ಯಾಪಕ ಮಳೆಯಾಗಲಿದ್ದು, ಅಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಡಗು, ಕೋಲಾರ, ರಾಮನಗರ ಮತ್ತು ತುಮಕೂರಿನಲ್ಲಿ ಅ. 11ಕ್ಕೆ ಅನ್ವಯವಾಗುವಂತೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇದ್ದರೆ, ಅ. 12ರಿಂದ 2 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಅ. 11ರಂದು ಯೆಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಈ ಮಧ್ಯೆ, ಶನಿವಾರ ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕು ಕಡಕೋಳ ಗ್ರಾಮದಲ್ಲಿ ದಂಪತಿ ಹಾಗೂ ಮಗಳಿಗೆ ಸಿಡಿಲು ಬಡಿದಿದ್ದು ತಾಯಿ -ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕುಟುಂಬ ಮಳೆಯಿಂದ ರಕ್ಷಿಸಿಕೊಳ್ಳಲು ಮರದ ಕೆಳಗೆ ನಿಂತಿದ್ದಾಗ ಅವಘಡ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಲ್ಲಿ ಸಿಡಿಲಿಗೆ ಒಬ್ಬ ವ್ಯಕ್ತಿ ಬಲಿಯಾಗಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts