More

    ಶುಕ್ರವಾರ ಬಿಜೆಪಿ ಪ್ರತಿಪಕ್ಷ ನಾಯಕನ ನೇಮಕ

    ಬೆಂಗಳೂರು: ಇಂದು ರಾಜ್ಯ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನೇಮಕವಾದ ಬೆನ್ನಲ್ಲೇ ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಅವರು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಪ್ರತಿಪಕ್ಷ ನಾಯಕನ ಸ್ಥಾನ ಖಾಲಿ ಇದ್ದಿದ್ದು, ಆಡಳಿತ ಪಕ್ಷದ ಕಟು ಟೀಕೆಗೆ ಗುರಿಯಾಗಿತ್ತು. ಅದಕ್ಕೆ ಪೂರ್ಣ ವಿರಾಮ ನೀಡುವ ನಿಟ್ಟಿನಲ್ಲಿ ಮುಂದಿನ ಶುಕ್ರವಾರ ಪತ್ರಿಪಕ್ಷ ನಾಯಕನನ್ನು ಆಯ್ಕೆ ಮಾಡುವುದಾಗಿ ತಿಳಿಸಿದ್ದಾರೆ.

    ರಾಜ್ಯಾಧ್ಯಕ್ಷರಾಗಿ ನೇಮಕವಾದ ಬಳಿಕ ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಪಕ್ಷದಲ್ಲಿ ಉನ್ನತ ಸ್ಥಾನ ನೀಡಿದ್ದಕ್ಕಾಗಿ ಮೊದಲು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್​ ಷಾ ಮತ್ತು ಜೆಪಿ ನಡ್ಡಾರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

    ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ
    ಯಡಿಯೂರಪ್ಪ ಅವರ ಮಗ ಎಂದು ಹೇಳಲು ನನಗೆ ಹಮ್ಮೆ ಇದೆ. ಆದರೆ, ಬಿಎಸ್​ವೈ ಪುತ್ರ ಎಂಬ ಕಾರಣಕ್ಕೆ ನನಗೆ ರಾಜ್ಯಾಧ್ಯಕ್ಷ ಸ್ಥಾನವನ್ನು ನೀಡಿಲ್ಲ. ಪಕ್ಷ ಸಂಘಟನೆಗೆ ಸೂಕ್ತ ಎಂಬ ಕಾರಣಕ್ಕೆ ನನಗೆ ಈ ಸ್ಥಾನವನ್ನು ನೀಡಿದ್ದಾರೆ. ನನ್ನ ಮೇಲೆ ಪಕ್ಷ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ. ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ. ವಿ. ಸೋಮಣ್ಣ ಅವರನ್ನು ಸೇರಿದಂತೆ ರಾಜ್ಯದ ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. 2024ರ ಲೋಕಸಭಾ ಚುನಾವಣೆ ತುಂಬಾ ಸವಾಲಿನಿಂದ ಕೂಡಿದ್ದು, ಹೆಚ್ಚು ಸ್ಥಾನಗಳನ್ನು ಗೆದ್ದು ಪ್ರಧಾನಿ ಮೋದಿ ಕೈ ಬಲಪಡಿಸುತ್ತೇವೆ ಎಂದು ಹೇಳಿದರು.

    ಶಾಸಕಾಂಗ ಪಕ್ಷದ ಸಭೆ
    ಮುಂದಿನ ವಾರ ದೆಹಲಿಯಿಂದ ರಾಜ್ಯಕ್ಕೆ ಬಿಜೆಪಿ ವೀಕ್ಷಕರು ಆಗಮಿಸಲಿದ್ದಾರೆ. ಅವರ ಸಮ್ಮುಖದಲ್ಲೇ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುವುದು. ಮುಂದಿನ ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ಕರೆದು, ಎಲ್ಲ ಶಾಸಕರ ಜತೆ ಚರ್ಚೆ ನಡೆಸಿ, ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ವಿಜಯೇಂದ್ರ ಹೇಳಿದರು.

    ಪ್ರತಿಪಕ್ಷ ನಾಯಕನ ರೇಸ್​ನಲ್ಲಿ ಯಾರೆಲ್ಲಾ ಇದ್ದಾರೆ?
    ರಾಜ್ಯಾಧ್ಯಕ್ಷ ಸ್ಥಾನ ಲಿಂಗಾಯತ ಸಮುದಾಯದ ಯುವ ನಾಯಕ ವಿಜಯೇಂದ್ರ ಪಾಲಾಗಿರುವುದರಿಂದ ಬೇರೆ ಸಮುದಾಯಗಳ ಪ್ರಬಲ ನಾಯಕರ ಮೇಲೆ ಬಿಜೆಪಿ ಹೈಕಮಾಂಡ್​ ಒಲವು ತೋರುವ ಸಾಧ್ಯತೆ ಇದೆ ಹೆಚ್ಚಿದೆ. ಒಕ್ಕಲಿಗರ ಕೋಟಾದಲ್ಲಿ ಆರ್​.ಅಶೋಕ್​ ಅಥವಾ ಅಶ್ವತ್ಥ ನಾರಾಯಣ ಆಯ್ಕೆಯಾದರೂ ಅಚ್ಚರಿಪಡಬೇಕಿಲ್ಲ. ಒಕ್ಕಲಿಗರಿಗೆ ನೀಡದೇ ಹಿಂದುಳಿದ ವರ್ಗಕ್ಕೆ ಮಣೆಹಾಕಿದರೆ ವಿಪಕ್ಷ ಸ್ಥಾನ ಸುನೀಲ್​ ಕುಮಾರ್​ ಅವರ ಪಾಲಾಗಬಹುದು. ಇವರ್ಯಾರು ಬೇಡ ಹೊಸ ಮುಖಗಳಿಗೆ ಆದ್ಯತೆ ನೀಡೋಣ ಅಂತ ಅರವಿಂದ್​ ಬೆಲ್ಲದ್​ರಂತಹ ಲಿಂಗಾಯತ ನಾಯಕನಿಗೂ ನೀಡಬಹುದು ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಣೆ ಮಾಡಲಾಗುತ್ತಿದೆ. ಆದರೆ, ವಿಪಕ್ಷ ನಾಯಕ ಯಾರಾಗಲಿದ್ದಾರೆ ಎಂಬ ಕುತೂಹಲ ಮಾತ್ರ ಹೆಚ್ಚಾಗಿದ್ದು, ದೀಪಾವಳಿಗೂ ಮುನ್ನ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಚುರುಕು ಪಡೆದುಕೊಂಡಿದೆ.

    ಚುನಾವಣೆ ಸೋಲಿನ ಪಾಠ
    ಅಂದಹಾಗೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿನ ಹೀನಾಯ ಸೋಲಿನಿಂದ ಪಾಠ ಕಲಿತಿರುವ ಬಿಜೆಪಿ ಹೈಕಮಾಂಡ್​, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇದೇ ತಪ್ಪು ಮರುಕಳಿಸಬಾರದು ಅಂತ ಅಳೆದು ತೂಗಿ, ತುಂಬಾ ಲೆಕ್ಕಾಚಾರ ಮಾಡಿ ಲಿಂಗಾಯತ ಸಮುದಾಯದ ಯುವ ನಾಯಕ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟವನ್ನು ನೀಡಿದಂತಿದೆ. ಯಡಿಯೂರಪ್ಪರನ್ನು ಕಡಗಣಿಸಿದ್ದೇ ಬಿಜೆಪಿಯ ಹೀನಾಯ ಸೋಲಿಗೆ ಕಾರಣ ಎಂಬ ಚರ್ಚೆಗಳು ವ್ಯಾಪಕವಾಗಿ ಕೇಳಿಬಂದಿತ್ತು. ಅಲ್ಲದೆ, ಬಹುತೇಕ ಲಿಂಗಾಯತ ಮತಗಳು ಕಾಂಗ್ರೆಸ್​ ಪಾಲಾಗಿದ್ದವು. ಇದರಿಂದ ಎಚ್ಚೆತ್ತಿರುವ ಬಿಜೆಪಿ ಹೈಕಮಾಂಡ್​ ಬಿವೈ ವಿಜಯೇಂದ್ರರಿಗೆ ಮಣೆ ಹಾಕಿದೆ ಎಂಬ ಅಭಿಪ್ರಾಯ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

    ಇದಕ್ಕೂ ಮುನ್ನ ರಾಜ್ಯಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸಿಟಿ ರವಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೆಸರುಗಳು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಆದರೆ, ಅವರೆಲ್ಲರನ್ನು ಹಿಂದಿಕ್ಕಿ ಯುವ ನಾಯಕ ಬಿವೈ ವಿಜಯೇಂದ್ರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಬಿಜೆಪಿ ಹೈಕಮಾಂಡ್ ಮತ್ತೆ ಮಾಜಿ ಸಿಎಂ ಯಡಿಯೂರಪ್ಪ ಶಕ್ತಿ ಏನೆಂಬುದನ್ನು ಅರಿತಂದಿದೆ.

    ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ: ಬಿ.ಎಲ್​. ಸಂತೋಷ್​ ಏನಂದ್ರು ಗೊತ್ತಾ?

    ಯಾಕಾಗಲ್ಲ ಈಗಲೂ ಸಾಧ್ಯವಿದೆ! ಸಮೀಸ್​ ತಲುಪಲು ತಮ್ಮದೇ ರಣತಂತ್ರ ವಿವರಿಸಿದ ಪಾಕ್​ ಕ್ಯಾಪ್ಟನ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts