ಅಮರಾವತಿ: ಕಳೆದ ಎರಡು ದಿನಗಳಿಂದ ಆಂಧ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಇತ್ತೀಚೆಗಷ್ಟೆ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಭಾರತೀಯ ಹವಾಮಾನ ಇಲಾಖೆ ಆಂಧ್ರದ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಇದನ್ನು ಓದಿ: ಟ್ರೈನಿ ವೈದ್ಯೆ ಹತ್ಯೆ ಕೇಸ್; ಮರಣೋತ್ತರ ಪರೀಕ್ಷೆ ದಾಖಲೆ ಮಿಸ್ಸಿಂಗ್.. ಸಿಬಿಐಗೆ ಸುಪ್ರೀಂ ಸೂಚಿಸಿದ್ದೇನು ಗೊತ್ತಾ?
ಮುಂದಿನ ಎರಡು ದಿನಗಳ ಕಾಲ ಶ್ರೀಕಾಕುಳಂ, ಮಾನ್ಯಂ ಮತ್ತು ವಿಜಯನಗರಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ವಿಶಾಖಪಟ್ಟಣಂ, ಅಲ್ಲೂರಿ, ಅನಕಾಪಲ್ಲಿ, ಕಾಕಿನಾಡ ಮತ್ತು ಯಾನಂಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ತಜ್ಞ ಕೆವಿಎಸ್ ಶ್ರೀನಿವಾಸ್ ತಿಳಿಸಿರುವುದಾಗಿ ಎಎನ್ಐ ವರದಿ ಮಾಡಿದೆ.
ಭಾರೀ ಮಳೆಯಿಂದಾಗಿ ಗುರುವಾರದವರೆಗೆ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ರಾಜ್ಯದ ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ. ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುವ ಸಂಭವವಿದ್ದು, ಜನರು ಎಚ್ಚರದಿಂದ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ನೆರೆಯ ರಾಜ್ಯ ತೆಲಂಗಾಣ ಕೂಡ ಪ್ರವಾಹದಿಂದ ತೀವ್ರವಾಗಿ ನಲುಗಿದೆ. ಪ್ರವಾಹದ ಪರಿಣಾಮದಿಂದ ಜನರನ್ನು ರಕ್ಷಿಸಲು ಕೇಂದ್ರ ಸರ್ಕಾರವು 3,448 ಕೋಟಿ ರೂಪಾಯಿಯ ತಕ್ಷಣದ ನೆರವನ್ನು ಎರಡೂ ರಾಜ್ಯಗಳಿಗೆ ನೀಡಲಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದರು. (ಏಜೆನ್ಸೀಸ್)
ಬಜರಂಗ್ ಪುನಿಯಾಗೆ ಕೊಲೆ ಬೆದರಿಕೆ; ಸಂದೇಶದಲ್ಲಿ ಉಲ್ಲೇಖಿಸಿರುವ ವಿಚಾರ ಹೀಗಿದೆ…