More

    ರಾಜ್ಯದಲ್ಲಿ ಮೂರು ದಿನ ಮಳೆ: ಹವಾಮಾನ ಇಲಾಖೆ ಮೂನ್ಸೂಚನೆ

    ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

    ಉಡುಪಿ, ಕನ್ನಡ, ಉತ್ತರ ಕನ್ನಡ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಾ. 22ರಿಂದ ಮಾ.24ರವರೆಗೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಮತ್ತು ಶಿವಮೊಗ್ಗದಲ್ಲಿ ಮಾ.22ರಂದು ಗುಡುಗು ಮಿಂಚು ಸಹಿತ ಸಾಧಾರಣ ವರ್ಷಧಾರೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

    ರಾಜ್ಯದಲ್ಲಿ ಕೆಲವೆಡೆ ಈಗಾಗಲೇ ಹಗುರ ಮಳೆ ಸುರಿಯುತ್ತಿದೆ. ಮುಂದಿನ ಮುರ್ನಾಲ್ಕು ದಿನ ಕರಾವಳಿ, ಮಲೆನಾಡು ಮತ್ತು ದಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ. ಉಳಿದೆಡೆ ಒಣಹವೆ ಮುಂದುವರಿಯಲಿದೆ. ಬಿಸಿಲು ಹೆಚ್ಚಳವಾದಂತೆ ಅಲ್ಲೆಲ್ಲಿ ಮಳೆಯೂ ಬರಲಿದೆ. ಕೆಲ ಜಿಲ್ಲೆಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಉಷ್ಣಾಂಶವೂ ಏರಿಳಿತವಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.ಗುರುವಾರ ಕಲಬುರಗಿ 37.6, ಹಂಪೆ 36.9, ಬದಾಮಿ 36.4, ವಿಜಯಪುರ 35.2 ಡಿ.ಸೆ. ಉಷ್ಣಾಂಶ ದಾಖಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts