More

    ರಾಜ್ಯದಲ್ಲಿ ಮೂರು ದಿನ ಮಳೆ: ಹಲವು ಜಿಲ್ಲೆಗಳಲ್ಲಿ ಸೆಖೆ ಅನುಭವ

    ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ. ಶುಕ್ರವಾರ ಹಲವು ಭಾಗಗಳಲ್ಲಿ ಸಾಧಾರಣ ಮಳೆ ಬಿದ್ದಿದೆ.

    ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಮತ್ತು ರಾಮನಗರದಲ್ಲಿ ಮಾ.25ರಿಂದ ಮಾ.27ರವರೆಗೆ, ಬೀದರ್ ಮತ್ತು ಕಲಬುರಗಿಯಲ್ಲಿ ಮಾ.26ರಿಂದ ಮುಂದಿನ ಎರಡು ದಿನ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ.

    ಇದನ್ನೂ ಓದಿ: ಗಂಡ ಸತ್ತ ದುಃಖ ಮರೆಯುವುದರೊಳಗೆ ಅಡಕೆ ಮರ ಕಡಿದರು!

    ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಳಿತವಾಗಿದೆ. ವಿಜಯಪುರ, ರಾಯಚೂರು, ಹಂಪೆ, ಬೀದರ್, ಬೆಂಗಳೂರು, ಬದಾಮಿ ಸೇರಿ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಸರಾಸರಿ 3-4 ಡಿಗ್ಸಿ ಸೆಲ್ಸಿಯಸ್ ಉಷ್ಣಾಂಶ ಕುಸಿತವಾಗಿದೆ. ಅದೇರೀತಿ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ, ಧಾರವಾಡ, ಹೊನ್ನಾವರ, ಕಾರವಾರದಲ್ಲಿ ಕನಿಷ್ಠ ತಾಪಮಾನದಲ್ಲಿ ಸರಾಸರಿ 3-4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇಳಿಕೆಯಾಗಿದೆ. ತಾಪಮಾನ ಏರಿಳಿದಿಂದ ಬಿಸಿಲು ಧಗೆ ಹೆಚ್ಚಾಗುತ್ತಿದ್ದು, ಹಲವು ಭಾಗಗಳಲ್ಲಿ ಸೆಖೆಯ ಅನುಭವವಾಗುತ್ತಿದೆ.

    ಜುಲೈನಲ್ಲಿ ಧನುಷ್​ ಜತೆ ಮದುವೆ! ನಟಿ ಮೀನಾ ಕೊಟ್ಟ ಪ್ರತಿಕ್ರಿಯೆ ಹೀಗಿದೆ….

    ಭಗವಾನ್ ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ, ಎಲ್ಲರಿಗೂ ದೇವರಾಗಿದ್ದಾನೆ: ಫಾರೂಕ್ ಅಬ್ದುಲ್ಲಾ

    ಹುಡುಗಿ ಕೂರಿಸಿಕೊಂಡು ಬೇಕಾಬಿಟ್ಟಿ ಬೈಕ್​ ಚಲಾಯಿಸ್ತೀರಾ? ಹಾಗಿದ್ರೆ ಹುಷಾರ್​! ಈ ಸ್ಟೋರಿ ಓದಲೇಬೇಕು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts