ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಮತ್ತಷ್ಟು ಬಿರುಸು; ನಾಳೆ ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್..

Rain
Published on

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ಎರಡು ದಿನ ಇನ್ನಷ್ಟು ಬಿರುಸುಗೊಳ್ಳಲಿದೆ.

ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ದಕ್ಷಿಣ ಒಳನಾಡಿನ ತುಮಕೂರು, ಮಂಡ್ಯ ಮತ್ತು ಮೈಸೂರಿನಲ್ಲಿ ಅ.13, 14ರಂದು ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಬೆಂಗಳೂರು, ಬೆಂ. ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮುಂದಿನ 48 ಗಂಟೆ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಚಿತ್ರದುರ್ಗ, ಗದಗ, ಹಾವೇರಿ, ಧಾರವಾಡ, ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿಯಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಂಗಳವಾರವೂ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net