ಶೀಘ್ರದಲ್ಲಿಯೇ 600 ಕೋಟಿ ರೂ. ವೆಚ್ಚದ ಅನುಭವ ಮಂಟಪ ಲೋಕಾರ್ಪಣೆ ಮಾಡ್ತೇವೆ: CM ಸಿದ್ದರಾಮಯ್ಯ ಭರವಸೆ

blank

ಮೈಸೂರು: ನಮ್ಮ ಸರ್ಕಾರ ಆರಂಭಿಸಿರುವ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ(CM) ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ”ಬಸವ ಜಯಂತಿ-2025 ನಮ್ಮ ನಡೆ ಅನುಭವ ಮಂಟಪದ ಕಡೆ” ಕಾರ್ಯಕ್ರಮ ಉದ್ಘಾಟಿಸಿ ಮಾನಾಡಿದರು. ಸಕಲ ವೃತ್ತಿಗಳೂ ಪವಿತ್ರ ಎನ್ನುವ ಮಹಾನ್ ಮಾನವೀಯ ಸಂದೇಶವನ್ನು ಜಗತ್ತಿಗೆ ನೀಡಿದ ಬಸವಣ್ಣನವರು ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವ ವಿಖ್ಯಾತ ಆರ್ಥಿಕ ತಜ್ಞರೂ ಆಗಿದ್ದರು. ಕಾಯಕ ಮತ್ತು ದಾಸೋಹದ ಶ್ರಮ ಸಂಸ್ಕೃತಿಯ ಮಹತ್ವವನ್ನು ಬಸವಣ್ಣ ಇಡೀ ವಿಶ್ವಕ್ಕೆ ನೀಡಿದರು ಎಂದು ವಿವರಿಸಿದರು.

ಇದನ್ನೂ ಓದಿ:ನಿಮ್ಮ ಮೂತ್ರದಲ್ಲಿ ಈ 5 ಲಕ್ಷಣಗಳನ್ನು ಕಂಡುಬಂದ್ರೆ ನಿಮ್ಮ ಲಿವರ್​​ ಡ್ಯಾಮೇಜ್​ ಆಗುತ್ತಿದೆ ಎಂದರ್ಥ! | Liver

ಬಸವಾದಿ ಶರಣರಿಂದ ಆದ ಜಾತಿ ವ್ಯವಸ್ಥೆ ವಿರುದ್ದದ ಸಾಮಾಜಿಕ ಕ್ರಾಂತಿ ಪ್ರಪಂಚದ ಬೇರೆ ಎಲ್ಲೂ ನಡೆದಿಲ್ಲ. ಸಮ ಸಮಾಜ ಮತ್ತು ಜಾತ್ಯತೀತ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ಬಸವಾದಿ ಶರಣರು ನುಡಿದಂತೆ ನಡೆದರು. ಜಾತಿ, ವರ್ಗ ರಹಿತ ಮಾನವೀಯ ಸಮಾಜ ಅವರ ತುಡಿತವಾಗಿತ್ತು. ಬಸವಾದಿ ಶರಣರ ಅನುಭಾವವೇ ವಚನಗಳಾಗಿವೆ. ವಚನ‌ ಎಂದರೆ ಮಾತು. ಕನ್ನಡ ಸಾಹಿತ್ಯದಲ್ಲಿ ವಚನ ಮತ್ತು ದಾಸ ಸಾಹಿತ್ಯ ದೊಡ್ಡ ಮೈಲಿಗಲ್ಲು. ಅಕ್ಷರ ಸಂಸ್ಕೃತಿಯಿಂದ ವಂಚಿತರನ್ನಾಗಿ ಮಾಡಲಾಗಿದ್ದವರಿಗೆ ವಚನ ಸಾಹಿತ್ಯ ಆಡು ಮಾತಿನ ಮೂಲಕ ತಲುಪಿತು ಎಂದರು.

ಇದನ್ನೂ ಓದಿ:ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಒಂದು ತಿಂಗಳ ಮಗುವನ್ನೇ ಬಾವಿಗೆಸೆದ ತಾಯಿ | Siddipet

ನನ್ನ ಅಪ್ಪ, ಅಮ್ಮ ಇಬ್ಬರೂ ಶಿಕ್ಷಣದಿಂದ ವಂಚಿತರಾಗಿದ್ದರು. ರಾಜಪ್ಪ ಮೇಸ್ಟ್ರು ಕಾರಣದಿಂದ ನಾನು ನೇರವಾಗಿ ಐದನೇ ತರಗತಿಗೆ ದಾಖಲಾಗಿ ಶಿಕ್ಷಣ ಪಡೆದು ಎರಡು ಬಾರಿ ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರ ಕಾರಣದಿಂದ ನನಗೆ ಶಿಕ್ಷಣ ಸಿಕ್ಕರೆ, ಸಂವಿಧಾನದ ಕಾರಣದಿಂದ ನಾನು ಮುಖ್ಯಮಂತ್ರಿಯಾದೆ ಎಂದು ವಿವರಿಸಿದರು. ಬಸವ ಬಳಗಗಳ ಒಕ್ಕೂಟದ ಬೇಡಿಕೆಯಂತೆ ಬಸವ ಭವನ ನಿರ್ಮಿಸಲು ಹೆಚ್ಚಿನ‌ ಅನುದಾನವನ್ನು ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಛಲವಾದಿ ಮೇಲೆ ಹಲ್ಲೆ ಯತ್ನ ಖಂಡಿಸಿ ಬಿಜೆಪಿ ಚಳವಳಿ | Talk fight between BJP-Cong

ಕರ್ನಾಟಕಕ್ಕೆ ಮತ್ತೆ ಕಾಲಿಟ್ಟ ಮಹಾಮಾರಿ ಕೊರೊನಾ ಸೋಂಕು: ಸಾರ್ವಜನಿಕರು ಪಾಲಿಸಬೇಕಾದ Coronavirus ಮಾರ್ಗಸೂಚಿ..

Share This Article

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…