More

    ಸೋಂಕಿತರ ಮರಣ ಪ್ರಮಾಣ ತಗ್ಗಿಸಿ

    ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಿಸಲು ಸೂಕ್ತ ಚಿಕಿತ್ಸೆಯ ಜತೆಗೆ ಅಗತ್ಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿ ಮಾತನಾಡಿ, ಸೋಂಕು ನಿಯಂತ್ರಿಸಲು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಸಲಹೆ ನೀಡಿದರು.

    ಮಾಸ್ಕ ಕಡ್ಡಾಯ: ಮಾಸ್ಕ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಿ, ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ದೈಹಿಕ ಅಂತರ ಪಾಲನೆಗೆ ಮೊದಲ ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು. ಅಲ್ಲದೆ, ಕೋವಿಡ್-19 ತಪಾಸಣೆಗೆ ಸಂಬಂಧಿಸಿದ ಅಡೆತಡೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅವರು, ಮುಂಬರುವ
    ದಿನಗಳಲ್ಲಿ ಕೇಂದ್ರ ಸರ್ಕಾರ ನೀಡಲಿರುವ ಹೊಸ ಮಾರ್ಗಸೂಚಿ ಆಧರಿಸಿ, ಇನ್ನಷ್ಟು ಚಟುವಟಿಕೆ ಆರಂಭಗೊಳ್ಳಲಿದೆ. ಹೀಗಾಗಿ ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲೆಯಲ್ಲಿ ಕರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಸದ್ಯಕ್ಕೆ ಸೋಂಕು ಹಾಗೂ ಮರಣ ಪ್ರಮಾಣದಲ್ಲಿ ಕ್ರಮೇಣ ಇಳಿಕೆ ಕಂಡುಬರುತ್ತಿದೆ. ಸರ್ಕಾರಿ ಮಾರ್ಗಸೂಚಿಗಳ ಅನುಷ್ಠಾನಕ್ಕೆ ಇನ್ನಷ್ಟು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

    ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಐಜಿಪಿ ರಾಘವೇಂದ್ರ ಸುಹಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ವಿ. ದರ್ಶನ, ಎಸ್ಪಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎನ್.ತುಕ್ಕಾರ, ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ, ಬೆಳಗಾವಿ ಉಪ ವಿಭಾಗಾಧಿಕಾರಿ ಅಶೋಕ ತೇಲಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts