21 C
Bengaluru
Wednesday, January 22, 2020

ಸರ್ಕಾರಕ್ಕೆ 75 ಕೋಟಿ ರೂ. ದಂಡ

Latest News

ನೇಪಾಳ ದುರಂತ| ಮೂವರು ಮಕ್ಕಳ ಹುಟ್ಟುಹಬ್ಬಕ್ಕೆ ತೆರಳಿದ್ದ ಕೇರಳ ಕುಟುಂಬ ಮರಳಿದ್ದು ಶವವಾಗಿ

ಕೊಚ್ಚಿ: ನೇಪಾಳ ಪ್ರವಾಸಕ್ಕೆಂದು ತೆರಳಿ ಹೋಟೆಲ್​ವೊಂದರಲ್ಲಿ ದುರಂತ ಸಾವಿಗೀಡಾದ ಕೇರಳ ಮೂಲ ಕುಟುಂಬದ ಕರುಣಾಜನಕ ಕತೆಯಿದು. ಮೃತ ತಿರುವನಂತಪುರ ನಿವಾಸಿ ಪ್ರವೀಣ್​ ಮತ್ತು ಸರಣ್ಯ...

ಸರ್ಕಾರಿ ಆಸ್ಪತ್ರೆಗಳಲ್ಲಿರುವ ಉಪಕರಣಗಳಿಗೆ ಉಸಿರು ತುಂಬಿ!

ದಾವಣಗೆರೆ: ರಾಜ್ಯದಲ್ಲಿ ಸರಿಸುಮಾರು 3 ಸಾವಿರ ಸರ್ಕಾರಿ ಆಸ್ಪತ್ರೆಗಳಿದ್ದು, ನಿರ್ವಹಣೆ ಕೊರತೆ ಕಾರಣ ಬಹುತೇಕ ಆಸ್ಪತ್ರೆಗಳಲ್ಲಿನ ಉಪಕರಣಗಳು ಜೀವ ಕಳೆದುಕೊಂಡಿವೆ. ಹೀಗಾಗಿ ಸಾವಿರಾರು ರೋಗಿಗಳು...

ಕುಮಾರಸ್ವಾಮಿ ದುಷ್ಕರ್ಮಿಗಳಿಗೆ ಬೆಂಬಲ ಕೊಡುತ್ತಿದ್ದಾರೆ ಎನ್ನುವ ಭಾವನೆ ಮೂಡುತ್ತಿದೆ: ಸಚಿವ ಕೆ.ಎಸ್. ಈಶ್ವರಪ್ಪ ಕಿಡಿ

ಹಾಸನ: ಮಂಗಳೂರು ಬಾಂಬ್ ಪತ್ತೆ ಪ್ರಕರಣದ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸಿರುವ ಅನುಮಾನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಮೀಣಾಭಿವೃದ್ಧಿ ಸಚಿವ...

ಮಂಗಳೂರು ಬಾಂಬ್​ ಪತ್ತೆ ಪ್ರಕರಣ: ಪೊಲೀಸ್​ ವಿಚಾರಣೆ ವೇಳೆ ಆರೋಪಿ ಆದಿತ್ಯರಾವ್ ಹೇಳಿದ್ದೇನು?​

ಬೆಂಗಳೂರು: ಸಮಾಜದ ವ್ಯವಸ್ಥೆಗೆ ಬೇಸತ್ತು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದಾಗಿ ಆರೋಪಿ ಆದಿತ್ಯರಾವ್​ ಪೊಲೀಸ್​ ವಿಚಾರಣೆ ವೇಳೆ ಬಹಿರಂಗಪಡಿಸಿದ್ದಾನೆ. ವಿಐಪಿ ಗೆಸ್ಟ್ ಹೌಸ್​ನಲ್ಲಿ...

ನೇಪಾಳದ ಹೋಟೆಲ್​ನಲ್ಲಿ ಶವವಾಗಿ ಪತ್ತೆಯಾಗಿದ್ದ 8 ಕೇರಳ ಪ್ರವಾಸಿಗರ ಸಾವಿಗೆ ಕಾರಣವೇನು?: ಕುಟುಂಬದವರಿಗೆ ಮೃತದೇಹ ಹಸ್ತಾಂತರ

ಕಾಠ್ಮಂಡು: ನೇಪಾಳದ ಹೋಟೆಲ್​ವೊಂದರಲ್ಲಿ ಕೇರಳ ಮೂಲದ 8 ಪ್ರವಾಸಿಗರು ಶವವಾಗಿ ಪತ್ತೆಯಾಗಿರುವ ಘಟನೆ ಮಂಗಳವಾರ ನಡೆದಿದೆ. ರೂಮಿನೊಳಗೆ ಇಡಲಾಗಿದ್ದ ಔಟ್​ಡೋರ್​ ಹೀಟರ್​ನ ವಿಷಕಾರಿ ಕಾರ್ಬನ್​...

ನವದೆಹಲಿ: ಬೆಂಗಳೂರಿನ ಬೆಳ್ಳಂದೂರು, ಅಗರ ಮತ್ತು ವರ್ತರು ಕೆರೆಗಳ ಮಾಲಿನ್ಯ ತಡೆಯಲು ಸಂಪೂರ್ಣ ವಿಫಲವಾಗಿರುವ ಹಿನ್ನೆಲೆಯಲ್ಲಿ 75 ಕೋಟಿ ರೂ. ದಂಡ ಕಟ್ಟುವಂತೆ ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್​ಜಿಟಿ) ಖಡಕ್ ಆದೇಶ ನೀಡಿದೆ.

ದೈನಂದಿನ ಜೀವನದ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತಿರುವ ಬೆಂಗಳೂರು ಕೆರೆಗಳ ಅಭಿವೃದ್ಧಿ, ಸಂರಕ್ಷಣೆ ಬಗ್ಗೆ ಹಲವು ಆದೇಶಗಳನ್ನು ನೀಡಿದ್ದರೂ, ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಸಮರ್ಪಕ ಕ್ರಮಗಳನ್ನು ಜಾರಿಗೆ ತರಲು ವಿಫಲವಾಗಿವೆ. ಮುಂದೆಯೂ ಇದೇ ಧೋರಣೆ ಮುಂದುವರಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳೇ ಇದಕ್ಕೆ ಹೊಣೆ ಹೊತ್ತುಕೊಳ್ಳಬೇಕಾದೀತು ಎಂದು ಗಂಭೀರ ಎಚ್ಚರಿಕೆ ನೀಡಿರುವ ನ್ಯಾ. ಆದರ್ಶ್ ಕುಮಾರ್ ಗೋಯೆಲ್ ನೇತೃತ್ವದ ನಾಲ್ವರು ಸದಸ್ಯರ ನ್ಯಾಯಪೀಠ, ರಾಜ್ಯ ಸರ್ಕಾರ ರೂ.50 ಕೋಟಿ ರೂ. ದಂಡದ ಹಣವನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹಾಗೂ ಬಿಬಿಎಂಪಿ 25 ಕೋಟಿ ರೂ ಪೈಕಿ 10 ಕೋಟಿಯನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೀಡಬೇಕು ಎಂದು ಸೂಚಿಸಿದೆ.

ನ್ಯಾಯಾಧಿಕರಣದ ಆದೇಶದಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಕೆರೆಗಳ ಸಂರಕ್ಷಣೆ- ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ರೂಪಿಸಬೇಕು. ಅನುಷ್ಠಾನದ ಮೇಲ್ವಿಚಾರಣೆಯನ್ನು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ನೇತೃತ್ವದ ಸಮಿತಿ ನೋಡಿಕೊಳ್ಳಬೇಕು ಎಂದೂ ನ್ಯಾಯಾಧಿಕರಣ ನಿರ್ದೇಶನ ನೀಡಿದೆ. ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಸೈನ್ಸ್​ನ ಪ್ರೊಫೆಸರ್ ರಾಮಚಂದ್ರನ್ ಮತ್ತು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತಜ್ಞರೊಬ್ಬರು ಈ ಸಮಿತಿಯ ಇತರ ಇಬ್ಬರು ಸದಸ್ಯರಾಗಿರಲಿದ್ದಾರೆ.

ಸ್ವಯಂಪ್ರೇರಿತ ದೂರು

ಬೆಳ್ಳಂದೂರು ಕೆರೆಯಲ್ಲಿ ಎರಡು ಬಾರಿ ಬೆಂಕಿ ಹೊತ್ತಿಕೊಂಡಿದ್ದರ ಬಗ್ಗೆ ಮಾಧ್ಯಮ ಆಧರಿಸಿ ನ್ಯಾಯಾ ಧಿಕರಣ ಸ್ವಯಂಪ್ರೇರಿತ ದೂರು ದಾಖಲಿಸಿ ಕೊಂಡು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನೊಟೀಸ್ ಜಾರಿ ಮಾಡಿತ್ತು. ತದನಂತರ ನಮ್ಮ ಬೆಂಗಳೂರು ಫೌಂಡೇಷನ್ ಮತ್ತು ರಾಜ್ಯಸಭೆ ಸದಸ್ಯ ಕುಪೇಂದ್ರ ರೆಡ್ಡಿ ಕೂಡ ಪ್ರಕರಣದಲ್ಲಿ ತಮ್ಮನ್ನು ಪ್ರತಿವಾದಿಗಳಾಗಿ ಮಾಡಬೇಕು ಎಂದು ಕೇಳಿಕೊಂಡಿದ್ದರು.

ಎನ್​ಬಿಎಫ್ ಹೋರಾಟಕ್ಕೆ ಜಯ

ಬೆಳ್ಳಂದೂರು ಕೆರೆ ಮಾಲಿನ್ಯ ಸಂಬಂಧ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರಕ್ಕೆ ದಂಡ ವಿಧಿಸಿರುವ ರಾಷ್ಟ್ರೀಯ ಹಸಿರು ನ್ಯಾಯಪೀಠ (ಎನ್​ಜಿಟಿ) ಆದೇಶವನ್ನು ನಮ್ಮ ಬೆಂಗಳೂರು ಪ್ರತಿಷ್ಠಾನ (ಎನ್​ಬಿಎಫ್) ಸ್ವಾಗತಿಸಿದೆ. ರಾಜ್ಯ ಸರ್ಕಾರದ ಅಧಿಕಾರಿಗಳು, ಸ್ಥಳೀಯ ಸಂಸ್ಥೆ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯ್ಕೆ ಎನ್​ಜಿಟಿ ಚಾಟಿ ಬೀಸಿದೆ. ನಮ್ಮ ಬೆಂಗಳೂರು ಪ್ರತಿಷ್ಠಾನ ಕಳೆದ 10 ವರ್ಷಗಳಿಂದ ನಿರಂತರವಾಗಿ ನಗರದ ಕೆರೆ, ರಾಜಕಾಲುವೆ, ಅಕ್ರಮ ಕಟ್ಟಡಗಳ ಒತ್ತುವರಿ ಸೇರಿ 25ಕ್ಕೂ ಹೆಚ್ಚಿನ ಪಿಐಎಲ್ ದಾಖಲಿಸಿ ನಡೆಸಿದ ಹೋರಾಟ ಸಾರ್ಥಕವಾಗಿದೆ ಎಂದು ಪ್ರತಿಷ್ಠಾನದ ಸಿಇಒ ಎನ್.ಆರ್. ಸುರೇಶ್ ತಿಳಿಸಿದ್ದಾರೆ.

ಜಲಮಾಲಿನ್ಯ ಅಪರಾಧ

ಜಲಮಾಲಿನ್ಯ ಕ್ರಿಮಿನಲ್ ಅಪರಾಧ. ಬೆಂಗಳೂರಿನ ಕೆರೆಗಳು ಮತ್ತು ರಾಜಕಾಲುವೆ ಪ್ರದೇಶಗಳ ಅತಿಕ್ರಮಕ್ಕೆ ಕಡಿವಾಣ ಹಾಕುವಲ್ಲಿ ಸರ್ಕಾರ ಮತ್ತು ಸ್ಥಳೀಯಾಡಳಿತ ಸಂಪೂರ್ಣ ವಿಫಲವಾಗಿದೆ. ನಗರಗಳ ಘನತ್ಯಾಜ್ಯ ನಿರ್ವಹಣೆ ಸ್ಥಳೀಯಾಡಳಿತದ ಜವಾಬ್ದಾರಿ ಎಂದು ಸಂವಿಧಾನದಲ್ಲೂ ದಾಖಲಾಗಿದೆ. ಹೀಗಿದ್ದರೂ, ಸರ್ಕಾರ ಮತ್ತು ಬಿಬಿಎಂಪಿ ಎಚ್ಚೆತ್ತುಕೊಳ್ಳದೆ ಕ್ರಮ ಕೈಗೊಳ್ಳಲಿಲ್ಲ ಎಂದು ಎನ್​ಜಿಟಿ ಆಕ್ರೋಶ ಹೊರಹಾಕಿದೆ.

ಬೆಂಗಳೂರು ಕೆರೆ, ಪರಿಸರ ಪುನರುಜ್ಜೀವನಕ್ಕೆ ಅಡಿಪಾಯ ಹಾಕುವ ಮಹತ್ವದ, ಐತಿಹಾಸಿಕ ತೀರ್ಪು ಇದು. ಇನ್ನಾದರೂ ಆಡಳಿತ ವ್ಯವಸ್ಥೆ ರಾಜಧಾನಿಯ ಜಲ ಸಂರಕ್ಷಣೆಗೆ ಹೊಣೆಗಾರಿಕೆಯಿಂದ ಕೆಲಸ ಮಾಡಬಹುದು ಎಂಬ ಆಶಾಭಾವ ಬಂದಿದೆ.

| ಸಜನ್ ಪೂವಯ್ಯ ನಮ್ಮ ಬೆಂಗಳೂರು ಫೌಂಡೇಷನ್ ಪರ ವಕೀಲ

ಕಾನೂನು, ನ್ಯಾಯಾಂಗದ ಆದೇಶಗಳಿಂದ ಮಾತ್ರ ಕೆರೆ-ಪರಿಸರಗಳ ಸಂರಕ್ಷಣೆ ಸಾಧ್ಯವಾಗದು. ಕಾನೂನು ಹೋರಾಟ ಇದರ ಒಂದು ಭಾಗವಷ್ಟೇ. ಸರ್ಕಾರದ ಜತೆಗೆ ಸಾರ್ವಜನಿಕರೂ ತಮ್ಮ ಜವಾಬ್ದಾರಿಗಳನ್ನು ಅರಿತು, ಆರೋಗ್ಯಕರ ಪರಿಸರ ನಿರ್ವಣಕ್ಕೆ ಕೈಜೋಡಿಸಬೇಕು.

| ರಾಮ್್ರಸಾದ್ ಕುಪೇಂದ್ರ ರೆಡ್ಡಿ ಪರ ವಕೀಲ

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...