ಎನ್​ಎಚ್​ಎಐದಲ್ಲಿ ಡೆಪ್ಯೂಟಿ ಮ್ಯಾನೇಜರ್ ಆಗುವ ಅವಕಾಶ

ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 48 ಹುದ್ದೆಗಳಿವೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಜಿಎಟಿಇ 2020ರಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಗಳಿಸಿದ ಸ್ಕೋರ್​​ಗಳನ್ನು ಪರಿಗಣಿಸಲಾಗುತ್ತದೆ. ಅಂಗೀಕೃತ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್ ಪದವಿ ಪೂರೈಸಿದ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯುಳ್ಳ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಿವಿಧ ಮೀಸಲಾತಿ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಸೂಕ್ತ ವಯೋ ಸಡಿಲಿಕೆ ಇರುತ್ತದೆ. ಜೂನ್ 15 ರವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. … Continue reading ಎನ್​ಎಚ್​ಎಐದಲ್ಲಿ ಡೆಪ್ಯೂಟಿ ಮ್ಯಾನೇಜರ್ ಆಗುವ ಅವಕಾಶ