More

    Wanted | ಸುಳಿವು ನೀಡಿದ್ರೆ 5 ಲಕ್ಷ ರೂ. ಬಹುಮಾನ; ಈತ ಹಿಂದೂ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿ

    ಬೆಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ರುದ್ರೇಶ್ ಹತ್ಯೆಯ ಪ್ರಮುಖ ಆರೋಪಿ ಮೊಹಮ್ಮದ್ ಗೌಸ್ ನಯಾಝೀ (41) ಬಗ್ಗೆ ಮಾಹಿತಿ ನೀಡಿದರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಘೋಷಿಸಿದೆ.

    ಈತನಿಗೆ ಎನ್‌ಐಎ ತಂಡ ಎಲ್ಲೆಡೆ ತೀವ್ರ ಹುಡುಕಾಟ ನಡೆಸುತ್ತಿದ್ದು, ಈತನ ಮಾಹಿತಿ ನೀಡಿದವರಿಗೆ ಇದೀಗ ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ. 2016ರ ಅ.16ರಂದು ಬೆಳಿಗ್ಗೆ 9ಕ್ಕೆ ಶಿವಾಜಿನಗರದ ಕಾಮರಾಜ ರಸ್ತೆಯ ಶ್ರೀನಿವಾಸ ಮೆಡಿಕಲ್ ಸ್ಟೋರ್ ಎದುರು ಸ್ನೇಹಿತರೊಂದಿಗೆ ನಿಂತಿದ್ದ ರುದ್ರೇಶ್ ಅವರನ್ನು 2 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಹಂತಕರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

    ಇದನ್ನೂ ಓದಿ: ನಂದಿನಿ-ಅಮುಲ್ ಸಂಘರ್ಷ: ಕೆಎಂಎಫ್​ನಿಂದ ಹೊರಬಿತ್ತು ಮಹತ್ವದ ಸ್ಪಷ್ಟನೆ

    ಎನ್‌ಐಎ ಅಧಿಕಾರಿಗಳು ಈ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಬೆಂಗಳೂರಿನ ಆರ್‌ಟಿ ನಗರದ ಎರಡನೇ ಬ್ಲಾಕ್ ನಿವಾಸಿ ಮೊಹಮ್ಮದ್ ಗೌಸ್ ನಯಾಝೀ ಅಲಿಯಾಸ್ ಗೌಸ್ ಭಾಯ್ ಎಂಬಾತನಿಗೆ ಹಲವು ವರ್ಷಗಳಿಂದ ಎನ್‌ಐಎ ಅಧಿಕಾರಿಗಳು ಎಲ್ಲೆಡೆ ಶೋಧ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಆತನ ಸುಳಿವೂ ಸಿಕ್ಕಿಲ್ಲ ಎಂದು ತಿಳಿದು ಬಂದಿದೆ.

    ಇದನ್ನೂ ಓದಿ: ಚಿಕಿತ್ಸೆಗೆಂದು ಉಡುಪಿಯಿಂದ ಬೆಂಗಳೂರಿಗೆ ಬಂದವನ ಎರಡೂ ಕಾಲು ಪೂರ್ತಿ ಜಖಂ!

    ಹೀಗಾಗಿ ಮೊಹಮ್ಮದ್ ಗೌಸ್ ನಯಾಝೀ ಬಗ್ಗೆ ಮಾಹಿತಿ ನೀಡಿದವರಿಗೆ ೫ ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿದೆ. ಜತೆಗೆ ಆತನ ಸುಳಿವು ಸಿಕ್ಕಿದರೆ ಎನ್‌ಐಎ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ. ಈ ಹಿಂದೆ ಆತ ಪಿಎಫ್‌ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಎಂದು ತಿಳಿದು ಬಂದಿದೆ. ಇನ್ನು ಈ ಪ್ರಕರಣದಲ್ಲಿ ಶಾಮೀಲಾಗಿದ್ದರು ಎನ್ನಲಾದ ಆರೋಪಿಗಳೆಲ್ಲರೂ ಜೈಲಿನಲ್ಲಿದ್ದಾರೆ. ಆದರೆ, ಮೊಹಮ್ಮದ್ ಗೌಸ್ ಇನ್ನೂ ತಲೆಮರೆಸಿಕೊಂಡಿದ್ದು, ಆತ ಇಂತಹ ಹಲವು ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

    Wanted | ಸುಳಿವು ನೀಡಿದ್ರೆ 5 ಲಕ್ಷ ರೂ. ಬಹುಮಾನ; ಈತ ಹಿಂದೂ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿ

    ಅಪರಿಚಿತರ ಬಳಿ ಲಿಫ್ಟ್ ಕೇಳಿಯೇ ಏಕಾಂಗಿಯಾಗಿ ಇಡೀ ರಾಜ್ಯ ಸುತ್ತಲಾರಂಭಿಸಿದ್ದಾಳೆ ಈ ಯುವತಿ: ಉದ್ದೇಶವಾದರೂ ಏನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts