More

  ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ; ದಾಳಿಯ ಪ್ರಮುಖ ಸಂಚುಕೋರನನ್ನು ಬಂಧಿಸಿದ NIA

  ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಘಟನೆಯ ಪ್ರಮುಖ ಸಂಚುಕೋರರನ್ನು ವಶಕ್ಕೆ ಪಡೆದಿದ್ದಾರೆ. ಮೂರು ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರನನ್ನು ಬಂಧಿಸಲಾಗಿದೆ.

  ಬಂಧಿತನನ್ನು ಮುಝಮ್ಮಿಲ್ ಶರೀಫ್ ಎಂದು ಗುರುತಿಸಲಾಗಿದ್ದು, ಈತನಿಗಾಗಿ ಎನ್​ಎಐ ಅಧಿಕಾರಿಗಳು ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದರು. ಈತ ಬ್ಲಾಸ್ಟ್​ಗೆ ಬಳಸಿದ್ದ ಬಾಂಬ್​ ತಯಾರಿಸಲು ಪ್ರಮುಖ ಪಾತ್ರ ವಹಿಸಿದ್ದ. ಅಲ್ಲದೇ ಮುಸಾವೀರ್​ ಹುಸೇನ್​ಗೆ ತುಂಬಾ ಆಪ್ತನಾಗಿದ್ದ ಎಂದು ತಿಳಿದು ಬಂದಿದೆ.

  ಇದನ್ನೂ ಓದಿ: ನಾಯಕನಾಗಿ ಅನಪೇಕ್ಷಿತ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ

  ಈ ಕುರಿತು ಪ್ರಕಟಣೆ ಹೊರಡಿಸಿರುವ ಎನ್​ಎಐ, ಮಾರ್ಚ್‌ 01ರಂದು ನಡೆದಿದ್ದ ಬಾಂಬ್‌ ಸ್ಫೋಟ ಪ್ರಕರಣದ ಸಂಚಿನಲ್ಲಿ ಮುಜಾಮಿಲ್ ಶರೀಫ್ ಭಾಗಿಯಾಗಿದ್ದ. ಬಾಂಬ್ ಇರಿಸಿದ್ದಾನೆ ಎನ್ನಲಾದ ಮುಸಾವೀರ್ ಹುಸೇನ್ ಶಾಜೀಬ್‌ ಹಾಗೂ ಅಬ್ದುಲ್ ಮಥೀನ್ ತಾಹಾಗೆ ಸಹಕಾರ ನೀಡಿದ್ದ. 18 ಪ್ರಮುಖ ಸ್ಥಳಗಳ ಮೇಲೆ ದಾಳಿ ಮಾಡಿ ಪುರಾವೆಗಳನ್ನು ಸಂಗ್ರಹಿಸಲಾಗಿದೆ.

  ಮುಜಾಮಿಲ್ ಶರೀ‌ಫ್, ಪ್ರಮುಖ ಶಂಕಿತರಿಗೆ ಸಹಾಯ ಮಾಡಿರುವುದು ಇದುವರೆಗಿನ ತನಿಖೆಯಿಂದ ಗೊತ್ತಾಗಿದೆ. ಹೀಗಾಗಿ, ಈತನನ್ನು ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗುವುದು ಎಂದು ಎನ್​ಎಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts