

ನವದೆಹಲಿ: ಎನ್ಐಎ ಅಧಿಕಾರಿಗಳಿಂದ ಐದು ರಾಜ್ಯದ ಹದಿನಾಲ್ಕು ಕಡೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಪಿಎಫ್ಐ ಸಂಘಟನೆಗಳು ಉಗ್ರಚಟುವಟಿಕೆ ಹಾಗೂ ಇನ್ನಿತರ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿರುವ ಶಂಕೆ ಹಿನ್ನಲೆ ದಾಳಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: ಸರ್ಕಾರಿ ಕಾನೂನು ಕಾಲೇಜು ಆರಂಭಕ್ಕೆ ಪ್ರಸ್ತವಾನೆ
ಭಾರತದಲ್ಲಿ 2047ರ ಒಳಗೆ ಪಿಎಫ್ಐ ಸೇನೆ ಸ್ಥಾಪಿಸಲು ಮುಂದಾಗಿದ್ದ ಶಂಕೆಯ ಹಿನ್ನಲೆ ದಾಳಿ ಮಾಡಲಾಗಿದ್ದು, ಯುವಕರಿಗೆ ಅತಿ ಹೆಚ್ಚು ಪ್ರೋತ್ಸಾಹಿಸಿ, ಶಸ್ತ್ರಾಸ್ತ್ರ ತರಬೇತಿ ನೀಡಿರುವ ಬಗ್ಗೆ ತನಿಖೆಯಲ್ಲಿ ಮಾಹಿತಿ ಪತ್ತೆಯಾಗಿದೆ. ಶಸ್ತ್ರಾಸ್ತ್ರ ತರಬೇತಿ, ಐರನ್ ರಾಡ್ಸ್, ಕತ್ತಿಗಳ ತರಬೇತಿ ಕೂಡ ನಡೆಸಿದ್ದ ಬಗ್ಗೆ ಶೀಘ್ರ ಕೇಳಿಬಂದ ಹಿನ್ನಲೆ ಕೆಲ ಪಿಎಫ್ಐ ಏಜೆಂಟ್ಗಳನ್ನು ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ.
ಐದು ರಾಜ್ಯಗಳಾದ ಕರ್ನಾಟಕ, ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳ ಮತ್ತು ಬಿಹಾರದ ಇತರ ಸ್ಥಳಗಳಲ್ಲಿ ಎನ್ಐಎ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಳಿ ಮಾಡಲಾಗಿದ್ದು, ದೋಷಾರೋಪಣೆ ಮಾಡುವ ಡಿಜಿಟಲ್ ಸಾಧನಗಳು ಮತ್ತು ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ,(ಏಜೆನ್ಸೀಸ್).