More

    ಬೆಂಗಳೂರಿನಲ್ಲಿ ಸರಣಿ ಬಾಂಬ್‌ ಸ್ಫೋಟಕ್ಕೆ ಸಂಚು; ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ ಎನ್​ಐಎ

    ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸರಣಿ ಬಾಂಬ್‌ ಸ್ಫೋಟ ಮಾಡಲು ಸಂಚು ರೂಪಿಸಿದ್ದ 6 ಜನ ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಬೆಂಗಳೂರಿನ ಕೆಲವು ಕಡೆ ಸ್ಫೋಟಗೊಳಿಸಲು ತಯಾರಿ ಮಾಡಿಕೊಂಡಿದ್ದ ವಿಚಾರ ತನಿಖೆಯಿಂದ ಬಯಲಾಗಿದೆ.

    ನಡೆದಿದ್ದೇನು?: ಕಳೆದ ಜುಲೈನಲ್ಲಿ ಆರ್‌ಟಿ ನಗರದ ಮನೆ ಮೇಲೆ ದಾಳಿ ಮಾಡಿದ ಬೆಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಜೀವಂತ ಗ್ರೆನೇಡ್‌ ಪತ್ತೆಯಾಗಿತ್ತು. ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದರು ಎಂಬ ವಿಚಾರ ತನಿಖೆಯಿಂದ ಬಯಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ನಂತರ ತನಿಖಾಧಿಕಾರಿಗಳು ಬಾಂಬ್ ನಿಷ್ಟ್ರೀಯ ದಳ ಮತ್ತು FSL ಅಧಿಕಾರಿಗಳ ಜೊತೆಯಲ್ಲಿ ಕಾರ್ಯಾಚರಣೆ ನಡೆಸಿ ಸಜೀವ ಗ್ರೇನೆಡ್‌ಗಳನ್ನ ಪತ್ತೆಮಾಡಿ ವಶಪಡಿಸಿಕೊಳ್ಳಲಾಗಿತ್ತು. ಗ್ರೆನೇಡ್ ಮೇಲಿದ್ದ ಮೇಡ್ ಇನ್ ವಿವರವನ್ನೇ ಆರೋಪಿಗಳು ಅಳಿಸಿ ಹಾಕಿದ್ದರು. ಈ ಎಲ್ಲಾ ಅಂಶಗಳನ್ನು ಒಳಗೊಂಡು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ.

    ಸೆರೆ ಸಿಕ್ಕ ಶಂಕಿತರ ಉಗ್ರರ ಹಿಂದೆ ಬ್ಯಾಕ್ ಬೋನ್ ಆಗಿದ್ದ ಮಾಸ್ಟರ್ ಮೈಂಡ್ ಜುನೈದ್ ವಿದೇಶದಲ್ಲಿದ್ದುಕೊಂಡೇ ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾದವರನ್ನು ಸಾಕುತ್ತಿದ್ದ, ಬೆಂಗಳೂರಿನಲ್ಲಿದ್ದವರಿಗೆ ಲಕ್ಷ ಲಕ್ಷ ರೂ. ಫಂಡಿಂಗ್ ಮಾಡ್ತಿದ್ದ. ಜೊತೆಗೆ ಏನೇನು ಮಾಡಬೇಕು ಅಂತಾ ಟ್ರೈನಿಂಗ್ ಕೊಡ್ತಿದ್ದ. ಅದಕ್ಕಾಗಿ ಬೆಂಗಳೂರಿನಲ್ಲಿ ಎಲ್ಲೆಲ್ಲಿ ಕೃತ್ಯ ಎಸಬೇಕು ಅನ್ನೋದರ ನೀಲನಕ್ಷೆಯನ್ನೂ (ಬ್ಲೂ ಪ್ರಿಂಟ್) ಸಿದ್ಧ ಮಾಡಿಕೊಂಡಿದ್ದರು. ಜುನೈದ್ ಕೊಡುವ ಮಾರ್ಗದರ್ಶನದಂತೆ ಸಿಲಿಕಾನ್ ಸಿಟಿಯಲ್ಲಿ ಶಂಕಿತರು ಸ್ಫೋಟಕ್ಕೆ ಸಂಚು ರೂಪಿಸುತ್ತಿದ್ದರು ಎಂದು ತಿಳಿದು ಬಂದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts