ಭಾರತದಲ್ಲಿ ಭಯೋತ್ಪಾದನೆಗೆ ಐಸಿಸ್ ಸಂಚು: ಕರ್ನಾಟಕ, ಮಹಾರಾಷ್ಟ್ರದ 44 ಕಡೆ ಎನ್​ಐಎ ದಾಳಿ -13 ಶಂಕಿತರ ಬಂಧನ

nia
Published on

ನವದೆಹಲಿ: ಭಾರತದ ನೆಲದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಹರಡುವ ಉದ್ದೇಶದಿಂದ ಸಂಚು ರೂಪಿಸಿದ್ದ ಐಸಿಸ್​ ಭಯೋತ್ಪಾದಕರ ಪಿತೂರಿಯನ್ನು ಭಯೋತ್ಪಾದನಾ ನಿಗ್ರಹ ಸಂಸ್ಥೆ ಎನ್​ಐಎ ತಡೆದಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದ 41 ಸ್ಥಳಗಳ ಮೇಲೆ ಶನಿವಾರ ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ ಎನ್​ಐಎ ಅಧಿಕಾರಿಗಳು 13 ಮಂದಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಸೋಲದೇವನಹಳ್ಳಿಯ ಫಾರ್ಮ್‌ಹೌಸ್‌ನಲ್ಲಿ ನಟಿ ಲೀಲಾವತಿ ಅಂತ್ಯಕ್ರಿಯೆ – ಸಹಸ್ರಾರು ಮಂದಿಯಿಂದ ಪಾರ್ಥೀವ ಶರೀರದ ದರ್ಶನ
ಅಂತರರಾಷ್ಟ್ರೀಯ ಸಂಪರ್ಕಗಳೊಂದಿಗೆ ಐಸಿಸ್ ಉಗ್ರರು ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಪಿತೂರಿ ಮಾಡುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ತಿಳಿಸಿದ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳಲ್ಲಿ ಎನ್​ಐಎ ಅಧಿಕಾರಿಗಳು ಏಕ ಕಾಲಕ್ಕೆ ದಾಳಿ ನಡೆಸಿದ್ದು, 13 ಶಂಕಿತ ಉಗ್ರರನ್ನು ವಶಕ್ಕೆ ಪಡೆಯಲಾಗಿದೆ. ಗಣರಾಜ್ಯೋತ್ಸವ ಸೇರಿ ಇತರೆ ಕಾರ್ಯಕ್ರಮಗಳಲ್ಲಿ ದುಷ್ಕೃತ್ಯಗಳನ್ನು ನಡೆಸಲು ಸಂಚು ರೂಪಿಸುತ್ತಿದ್ದುದು ತಿಳಿಯುತ್ತಿದ್ದಂತೆ ಭಯೋತ್ಪಾದಕ ಸಂಘಟನೆಯ ಯೋಜನೆಗಳನ್ನು ವಿಫಲಗೊಳಿಸಲು ಎನ್ಐಎ ವ್ಯಾಪಕ ತನಿಖೆ ನಡೆಸುತ್ತಿದ್ದು, ಅದರ ಭಾಗವಾಗಿ ದಾಳಿಗಳನ್ನು ನಡೆಸಲಾಗಿದೆ.

ಐಸಿಸ್ ಭಯೋತ್ಪಾದನೆ ಸಂಚಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಪುಣೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಶನಿವಾರ 13 ಜನರನ್ನು ಬಂಧಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ಜಾಗತಿಕ ಭಯೋತ್ಪಾದಕ ಗುಂಪು ಐಸಿಸ್ ದೇಶಾದ್ಯಂತ ಭಯೋತ್ಪಾದಕ ದಾಳಿಗಳನ್ನು ನಡೆಸಲು ಸಂಚು ರೂಪಿಸಿದ್ದಿದ್ದುದು, ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ ಬಳಿಕ ಪತ್ತೆಯಾಗಿದೆ ಎನ್ನಲಾಗಿದೆ. ಕರ್ನಾಟಕದ ಒಂದು, ಪುಣೆಯ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಾಂದರ್‌ನಲ್ಲಿ ಒಂದು ಕಡೆ ಎನ್​ಐಎ ಅಧಿಕಾರಿಗಳು ಶೋಧಿಸಿದ್ದಾರೆ ಎನ್ನಲಾಗಿದೆ.

ಕರ್ನಾಟಕದ ಮತ್ತು ಮಹಾರಾಷ್ಟ್ರ ಪೊಲೀಸರೊಂದಿಗೆ ಎನ್​ಐಎ ಅಧಿಕಾರಿಗಳು ಈ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಲ್-ಖೈದಾ, ಐಸಿಸ್ ಸೇರಿ ನಿಷೇಧಿತ ಭಯೋತ್ಪಾದಕ ಸಂಘಟನೆಗಳು ಹಿಂಸಾತ್ಮಕ ಚಟುವಟಿಕೆಗಳನ್ನು ಹೆಚ್ಚಿಸಲು ಪಿತೂರಿ ನಡೆಸಿದ್ದರು. ಇಸ್ಲಾಮಿಕ್​ ಸ್ಟೇಟ್​ ಸ್ಥಾಪನೆ ಸಿದ್ಧಾಂತವನ್ನು ಈ ಭಯೋತ್ಪಾದಕ ಗ್ಯಾಂಗ್ ಹರಡುವುದು, ಭಾರತ ಸೇರಿ ವಿಶ್ವದಾದ್ಯಂತ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವುದು ಐಸಿಸ್‌ನ ಮುಖ್ಯ ಉದ್ದೇಶವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net