More

    ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಪ್ರತ್ಯೇಕ ಎಫ್​ಐಆರ್ ದಾಖಲಿಸಿಕೊಂಡ ಎನ್​ಐಎ

    ಬೆಂಗಳೂರು: ರಾಮಮೂರ್ತಿನಗರದಲ್ಲಿ ಬಾಂಗ್ಲಾದೇಶದ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಹೆಚ್ಚಿನ ತನಿಖೆಗಾಗಿ ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ) ಪ್ರತ್ಯೇಕ ಎಫ್​​ಐಆರ್ ದಾಖಲಿಸಿಕೊಂಡಿದೆ.

    ಮೇ 27ರಂದು ರಾಮಮೂರ್ತಿನಗರದಲ್ಲಿ ನಡೆದಿದ್ದ ಬಾಂಗ್ಲಾ ಯುವತಿಯ ಮೇಲೆ ನಡೆದ ಗ್ಯಾಂಗ್‌ ರೇಪ್ ಪ್ರಕರಣದಲ್ಲಿ ಪೂರ್ವ ವಿಭಾಗ ಪೊಲೀಸರು 13 ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ತನಿಖೆ ವೇಳೆ ಬಾಂಗ್ಲಾದೇಶದಿಂದ ಮಾನವ ಕಳ್ಳಸಾಗಾಣೆ ಕೃತ್ಯ ಬೆಳಕಿಗೆ ಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಗೃಹ ಸಚಿವಾಲಯ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಎನ್‌ಐಎಗೆ ವಹಿಸಿದೆ.

    ಸೋಮವಾರ ಎನ್‌ಐಎ ಅಧಿಕಾರಿಗಳು, 13 ಮಂದಿ ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲಿಸಿ ತನಿಖೆ ಶುರು ಮಾಡಿದ್ದಾರೆ. ದೇಶ ದೇಶಗಳ ನಡುವಿನ ಮಾನವ ಕಳ್ಳ ಸಾಗಾಣೆಯಾದ ಕಾರಣ ಇದರ ಹಿಂದೆ ಮತ್ತಷ್ಟು ಮಂದಿ ಕೈವಾಡ ಇರುವ ಸಾಧ್ಯತೆಗಳಿವೆ. ಅಲ್ಲದೆ, ಅಕ್ರಮ ವಲಸಿಗರು ದೇಶದ ಭದ್ರತೆಗೆ ಧಕ್ಕೆ ತರಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ರಮ ಬಾಂಗ್ಲಾದೇಶಿಗರನ್ನು ಪತ್ತೆ ಮತ್ತು ಮಾನವ ಕಳ್ಳ ಸಾಗಾಣೆ ಕುರಿತು ಹೆಚ್ಚಿನ ತನಿಖೆ ಕೈಗೊಂಡಿರುವುದಾಗಿ ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

    ರಾಜಕಾರಣಿಗಳೇ ಈತನ ಟಾರ್ಗೆಟ್, ಬಲೆ ಬೀಸಿದ್ದು ಒಬ್ಬಿಬ್ಬರಿಗಲ್ಲ!; ಶಾಸಕರ ಹೆಸರಿನಲ್ಲಿ ಶಾಸಕಿಗೇ ವಂಚಿಸಿ ಕೊನೆಗೂ ಸಿಕ್ಕಿಬಿದ್ದ..

    ಎಸ್​ಎಸ್​ಎಲ್​ಸಿಯಲ್ಲಿ ಅಂಕ ಕಡಿಮೆ ಬರಬಹುದೇನೋ ಎಂಬ ಭಯದಿಂದ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

    ಎಸ್ಎಸ್​​ಎಲ್​ಸಿ ಪರೀಕ್ಷೆ: ಮೊದಲ ದಿನ ರಾಜ್ಯದ ಎಲ್ಲೆಲ್ಲಿ, ಏನೇನಾಯ್ತು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts