More

    ಎನ್‌ಐಸಿ ತಂತ್ರಾಂಶ ಆಧರಿಸಿ ಸಿಬ್ಬಂದಿ ನಿಯೋಜನೆ

    ಲಿಂಗಸುಗೂರು: ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಪಿಆರ್‌ಒ ಮತ್ತು ಎಪಿಆರ್‌ಒಗಳಿಗೆ ಚುನಾವಣಾ ಕೈಪಿಡಿ ನೀಡುವ ಜತೆಗೆ ಪ್ರಥಮ ಹಂತದ ತರಬೇತಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ತಿಳಿಸಿದರು.

    ಪಟ್ಟಣದ ವೀರಶೈವ ವಿದ್ಯಾವರ್ಧಕ ಸಂಘದ ಕಾಲೇಜಿನಲ್ಲಿ ಲೋಕಸಭೆ ಚುನಾವಣೆಗೆ ನಿಯೋಜನೆಗೊಂಡಿರುವ ಎಆರ್‌ಒ ಮತ್ತು ಎಪಿಆರ್‌ಗಳಿಗೆ ನೀಡುತ್ತಿರುವ ತರಬೇತಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದರು. ಮತಗಟ್ಟೆಗಳಲ್ಲಿ ಯಾವುದೇ ದೋಷಗಳಾಗದಂತೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವ ಹಿತದೃಷ್ಟಿಯಿಂದ ತರಬೇತಿ ನೀಡಲಾಗುತ್ತಿದೆ ಎಂದರು.

    ಲಿಂಗಸುಗೂರಿನ ವೀರಶೈವ ವಿದ್ಯಾವರ್ಧಕ ಸಂಘದ ಕಾಲೇಜಿನಲ್ಲಿ 491 ಪಿಆರ್‌ಒ ಮತ್ತು 491 ಎಪಿಆರ್‌ಒಗಳಿಗೆ ತರಬೇತಿ ನೀಡಲಾಗುತ್ತಿದೆ. ಇವಿಎಂಗಳ ಭೌತಿಕ ಮತ್ತು ಪ್ರಾಯೋಗಿಕ ತರಬೇತಿ ನೀಡಲಾಗುವುದು. ಸಿಬ್ಬಂದಿ ಸೇವಾ ಅವಧಿ ಅಥವಾ ವೇತನ ಪರಿಗಣಿಸಿ ಎನ್‌ಐಸಿ ಸಾಫ್ಟ್‌ವೇರ್ ಆಧರಿಸಿ ಪಿಆರ್‌ಒ ಮತ್ತು ಎಪಿಆರ್‌ಗಳ ನಿಯೋಜನೆ ಮಾಡಲಾಗಿದೆ. ಕ್ಲಿಷ್ಟಕರ ಸಂದರ್ಭವಿದ್ದರೆ ಬದಲಾವಣೆ ಮಾಡಲಾಗುವುದು ತಿಳಿಸಿದರು.

    ರಾಯಚೂರು ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದೆ. ಏ.12 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, 19 ಅಂತಿಮ ದಿನವಾಗಿದೆ. ಜೂ.4 ರಂದು ಮತ ಎಣಿಕೆ ನಡೆಯಲಿದೆ ಎಂದು ಡಿಸಿ ಚಂದ್ರಶೇಖರ ನಾಯಕ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts