ಐಪಿಎಲ್ ಮುಗಿದ ಬೆನ್ನಲ್ಲೇ ನಿಶ್ಚಿತಾರ್ಥ ಮಾಡಿಕೊಂಡ ಕಿಂಗ್ಸ್ ಇಲೆವೆನ್ ಪಂಜಾಬ್ ಆಟಗಾರ

ನವದೆಹಲಿ: ಯುಎಇಯಲ್ಲಿ ಐಪಿಎಲ್ 13ನೇ ಆವೃತ್ತಿಯಲ್ಲಿ ಆಡಿದ ಬೆನ್ನಲ್ಲೇ ಹಲವು ಕ್ರಿಕೆಟಿಗರು ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಗಳಿಗೆ ಸಜ್ಜಾಗುತ್ತಿದ್ದರೆ, ಇನ್ನು ಕೆಲ ಕ್ರಿಕೆಟಿಗರು ವೈಯಕ್ತಿಕ ಬದುಕಿನತ್ತ ಗಮನಹರಿಸಿದ್ದಾರೆ. ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡಿದ್ದ ವೆಸ್ಟ್ ಇಂಡೀಸ್‌ನ ಎಡಗೈ ಬ್ಯಾಟ್ಸ್‌ಮನ್ ನಿಕೋಲಸ್ ಪೂರನ್ ಅವರಲ್ಲೊಬ್ಬರು. ದೀರ್ಘಕಾಲದ ಗೆಳತಿ ಅಲಿಸ್ಸಾ ಮಿಗುಯೆಲ್ ಜತೆಗೆ ಪೂರನ್ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಜೀವನದ ಹೊಸ ಇನಿಂಗ್ಸ್‌ಗೆ ಸಜ್ಜಾಗಿದ್ದಾರೆ. ಕಳೆದ 2 ತಿಂಗಳಿನಿಂದ ಅರಬ್ ರಾಷ್ಟ್ರದ ಬಯೋ-ಬಬಲ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಜತೆಗೆ … Continue reading ಐಪಿಎಲ್ ಮುಗಿದ ಬೆನ್ನಲ್ಲೇ ನಿಶ್ಚಿತಾರ್ಥ ಮಾಡಿಕೊಂಡ ಕಿಂಗ್ಸ್ ಇಲೆವೆನ್ ಪಂಜಾಬ್ ಆಟಗಾರ