25.1 C
Bangalore
Friday, December 6, 2019

ನಾನು ಆಕಾಂಕ್ಷಿಯಲ್ಲ, ದೇವೇಗೌಡರ ಕುಟುಂಬದವರೇ ಸ್ಪರ್ಧೆ ಮಾಡಬೇಕೆಂಬ ಒತ್ತಾಯ ಸರಿಯಲ್ಲ: ನಿಖಿಲ್​ ಕುಮಾರಸ್ವಾಮಿ

Latest News

ಚಿನ್ನಾಭರಣ ಪ್ರದರ್ಶನ, ಮಾರಾಟ

ವಿಜಯಪುರ: ಇಲ್ಲಿನ ಅಥಣಿ ರಸ್ತೆಯಲ್ಲಿರುವ ಲೀ ಗ್ರ್ಯೆಂಡಿ ಹೋಟೆಲ್‌ನಲ್ಲಿ ರಿಲಾಯನ್ಸ್ ಜ್ಯುವೆಲ್ಸ್ ವತಿಯಿಂದ ಡಿ. 6ರಿಂದ ನಾಲ್ಕು ದಿನಗಳ ಕಾಲ ಚಿನ್ನ ಮತ್ತು...

ವಿದ್ಯಾರ್ಥಿಗಳು ಸಮಾಜಮುಖಿ ಜೀವನ ನಡೆಸಿ

ಹುನಗುಂದ: ಮಕ್ಕಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸ್ವಾಸ್ಥೃ ಸಮಾಜ ಪರಿಕಲ್ಪನೆಯೊಂದಿಗೆ ಸಮಾಜಮುಖಿ ಜೀವನ ನಡೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸಮನ್ವಯಾಧಿಕಾರಿ ಗುರುರಾಜ್...

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಬೆಂಗಳೂರು: ಕೆ.ಆರ್​.ಪೇಟೆ ಜೆಡಿಎಸ್​ ಶಾಸಕ ನಾರಾಯಣಗೌಡ ಅನರ್ಹಗೊಂಡ ಬಳಿಕ ಉಪಸಮರದ ಸದ್ದು ಜೋರಾಗಿ ಕೇಳುತ್ತಿದ್ದು, ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಜೆಡಿಎಸ್​ ಯುವಘಟಕದ ಮುಖ್ಯಸ್ಥ ನಿಖಿಲ್​ ಕುಮಾರಸ್ವಾಮಿ ತಿಳಿಸಿದ್ದಾರೆ.

ಉಪಚುನಾವಣೆಯಲ್ಲಿ ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕೆಂಬ ಕಾರ್ಯಕರ್ತರ ಒತ್ತಾಯ ಹಿನ್ನೆಲೆಯಲ್ಲಿ ಯುವಘಟಕದ ಮುಖಂಡರು ಮತ್ತು ಕಾರ್ಯಕರ್ತರ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು. ಚುನಾವಣೆಗೆ ಮತ್ತೆ ಮತ್ತೆ ನನ್ನ ಹೆಸರೇಕೆ ಕೇಳಿಬರುತ್ತಿದೆ ಎಂಬುದು ನನಗೆ ಗೊತ್ತಿಲ್ಲ. ನಾನೇ ಕಾರ್ಯಕರ್ತರ ಸಭೆಯನ್ನು ಕರೆದು ಆಕಾಂಕ್ಷಿಗಳ ಪಟ್ಟಿ ತಯಾರಿಸುತ್ತೇನೆ. ಬಳಿಕ ಆ ಪಟ್ಟಿಯನ್ನು ವರಿಷ್ಠರಿಗೆ ನೀಡುತ್ತೇನೆ ಎಂದು ಹೇಳಿದರು.

ಕಾರ್ಯಕರ್ತರನ್ನು ಕಣಕ್ಕಿಳಿಸಬೇಕೆಂಬುದು ನನ್ನ ಅಭಿಪ್ರಾಯ
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಈಗಾಗಲೇ ಸೋತಿದ್ದೇನೆ. ಆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದೇನೆ. ಜನರ ವಿಶ್ವಾಸಗಳಿಸುವ ಪ್ರಯತ್ನ ಮಾಡುತ್ತಿದ್ದೇನೆ. ಕೆ.ಆರ್.ಪೇಟೆ ಉಪ ಚುನಾವಣೆಗೆ ನಾನು ಆಕಾಂಕ್ಷಿ ಅಲ್ಲ. ಕಾರ್ಯಕರ್ತರು ಒತ್ತಾಯ ಮಾಡುತ್ತಾರೆ. ಆದರೆ, ದೇವೇಗೌಡರ ಕುಟುಂಬದವರೇ ಸ್ಪರ್ಧೆ ಮಾಡಬೇಕೆಂಬ ಬಗ್ಗೆ ಒತ್ತಾಯ ಮಾಡುವುದು ಸರಿಯಲ್ಲ. ಕಾರ್ಯಕರ್ತರು, ಆಕಾಂಕ್ಷಿಗಳು ತುಂಬಾ ಜನ ಇದ್ದಾರೆ. ಜೆಡಿಎಸ್ ಭದ್ರಕೋಟೆ ಕೆ.ಆರ್. ಪೇಟೆಯಲ್ಲಿ ಕಾರ್ಯಕರ್ತರನ್ನು ಕಣಕ್ಕಿಳಿಸಬೇಕೆಂಬುದು ನನ್ನ ಅಭಿಪ್ರಾಯ ಎಂದು ತಿಳಿಸಿದರು.

ಪಾದಯಾತ್ರೆ ಮಾಡುತ್ತೇನೆ ಎಂಬುದು ಊಹಾಪೋಹ
ಯುವಕರನ್ನು ಸಂಘಟಿಸುವುದು. ಸದಸ್ಯತ್ವ ಅಭಿಯಾನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. 17 ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ನಾನು ಪಾದಯಾತ್ರೆ ಮಾಡುತ್ತೇನೆ ಎಂಬುದು ಊಹಾಪೋಹ. ಯಾವ ವಿಚಾರವಾಗಿ ಪಾದಯಾತ್ರೆ ಮಾಡುತ್ತೇವೆ ಎಂಬುದು ಮುಖ್ಯ. ಸುಮ್ಮಸುಮ್ಮನೆ ಪಾದಯಾತ್ರೆ ಮಾಡಲು ಆಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಜಿಟಿಡಿ ಮನವೊಲಿಸುತ್ತೇನೆ
ನಮ್ಮ ತಂದೆ ಭಾವನಾತ್ಮಕ ಜೀವಿ. 14 ತಿಂಗಳ ತಮ್ಮ ಆಡಳಿತದಲ್ಲಿ ಭ್ರಷ್ಟಾಚಾರ ರಹಿತವಾಗಿ ಸರ್ಕಾರ ನಡೆಸಿದ್ದಾರೆ. ರಾಜಕೀಯ ಘಟನೆಗಳು ಮುಗಿದ ಅಧ್ಯಾಯ. ಆ ಬಗ್ಗೆ ಮತ್ತೆ ಚರ್ಚೆ ಮಾಡುವುದು ಸರಿಯಲ್ಲ. ಜಿ.ಟಿ.ದೇವೇಗೌಡರು ಸಹ ರಾಜಕೀಯ ನಿವೃತ್ತಿ ಬಗ್ಗೆ ಹೇಳಿದ್ದಾರೆ. ಅವರು ನಮ್ಮ ತಂದೆಯ ಸಮಾನ. ಜಿ.ಟಿ. ಹರೀಶ್ ನನ್ನ ಸಹೋದರ, ಮೈಸೂರಿನಲ್ಲಿ ಅವರಿಬ್ಬರ ಕೊಡುಗೆ ಇದೆ. ಅವರಿಬ್ಬರ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ. ಅವರು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರ ಮನವೊಲಿಸುತ್ತೇನೆ ಎಂದು ಹೇಳಿದರು.

ಪ್ರಾಮಾಣಿಕ ಕಾರ್ಯಕರ್ತರ ಸಭೆ ಇದೆ
ದೇವೇಗೌಡರು ಈ ವಯಸ್ಸಿನಲ್ಲೂ ಪಕ್ಷ ಸಂಘಟನೆಗೆ ಸಾಕಷ್ಟು ದುಡಿಯುತ್ತಿದ್ದಾರೆ. ಅವರು ನಮಗೆಲ್ಲಾ ಆದರ್ಶ ವ್ಯಕ್ತಿ. 7ನೇ ತಾರೀಖು ಅರಮನೆ ಮೈದಾನದಲ್ಲಿ ಪ್ರಾಮಾಣಿಕ ಕಾರ್ಯಕರ್ತರ ಸಭೆ ಇದೆ. ದೇವೇಗೌಡರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸರ್ಕಾರ ಇಲ್ಲದ ಸಂದರ್ಭದಲ್ಲಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ತರುವುದು ಅತ್ಯಂತ ಅವಶ್ಯಕತೆ ಇದೆ ಎಂದರು. (ದಿಗ್ವಿಜಯ ನ್ಯೂಸ್​)

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...