More

    ಚುನಾವಣೆಗೆ ಎರಡೂವರೆ ವರ್ಷ ಬಾಕಿ ಇರುವಾಗಲೇ ನಾಗಮಂಗಲದ ಜೆಡಿಎಸ್​ ಅಭ್ಯರ್ಥಿ ಘೋಷಿಸಿದ ನಿಖಿಲ್!

    ಮಂಡ್ಯ: ವಿಧಾನಸಭಾ ಚುನಾವಣೆಗೆ ಎರಡೂವರೆ ವರ್ಷ ಬಾಕಿ ಇರುವಾಗಲೇ ನಾಗಮಂಗಲದ ಮುಂದಿನ ಜೆಡಿಎಸ್​ ಅಭ್ಯರ್ಥಿಯನ್ನು ಪಕ್ಷದ​ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

    ನಾಗಮಂಗಲ ಕ್ಷೇತ್ರದಲ್ಲಿ ಮುಂದಿನ ಬಾರಿಯೂ ಜೆಡಿಎಸ್ ಅಭ್ಯರ್ಥಿಯಾಗಿ ಸುರೇಶ್ ಗೌಡ ಕಣಕ್ಕಿಳಿಯಲಿದ್ದಾರೆ. ಕ್ಷೇತ್ರದಲ್ಲಿ ಭಿನ್ನಮತ ಸೃಷ್ಟಿಯಾಗಿರುವ ಹೊತ್ತಲ್ಲೇ ನಿಖಿಲ್​ ಟಿಕೆಟ್ ಘೋಷಣೆ ಮಾಡಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

    ನಾಗಮಂಗಲ ಕ್ಷೇತ್ರದ ಹಾಲಿ-ಮಾಜಿ ಶಾಸಕರಾದ ಸುರೇಶ್​ ಗೌಡ -ಎಲ್.ಆರ್.ಶಿವರಾಮೇಗೌಡ ನಡುವೆ ಭಿನ್ನಮತ ಸ್ಫೋಟಗೊಂಡಿದೆ. ಮುಂದಿನ ಚುನಾವಣೆಯ ಅಭ್ಯರ್ಥಿ ನಾನೇ ಎಂದು ಶಿವರಾಮೇಗೌಡರು ಹೇಳಿದ್ದರು. ಬಳಿಕ ಸುರೇಶ್​ ಗೌಡ, ಶಿವರಾಮೇಗೌಡರ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದರು.

    ಇದೀಗ ಸ್ಪಷ್ಟನೆ ನೀಡಿರುವ ನಿಖಿಲ್​, ಹಾಲಿ ಶಾಸಕ ಸುರೇಶ್ ಗೌಡ್ರೇ ಮತ್ತೆ ಜೆಡಿಎಸ್ ಅಭ್ಯರ್ಥಿ. ಇದು ಪಕ್ಷದ ವರಿಷ್ಠರ ತೀರ್ಮಾನ ಮತ್ತು ಕಾರ್ಯಕರ್ತರ ತೀರ್ಮಾನ. ಸುರೇಶ್ ಗೌಡ್ರು ಅಭ್ಯರ್ಥಿ ಎಂಬುವುದರಲ್ಲಿ ಸಂಶಯ ಬೇಡ. ಗೊಂದಲ ಸೃಷ್ಟಿಯಾಗಲು ನಾವು ಬಿಡುವುದಿಲ್ಲ ಎಂದು ನಾಗಮಂಗಲದಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿದರು.

    ಇದನ್ನೂ ಓದಿ: ಇನ್ನೇನು ಮೃತದೇಹ ಶವಗಾರದಲ್ಲಿಡಬೇಕು ಅಷ್ಟರಲ್ಲಿ ದಿಢೀರನೆ ಎದ್ದು ಕುಳಿತು ಕಣ್ಣೀರಿಟ್ಟ ಸತ್ತ ವ್ಯಕ್ತಿ!

    ಯಾವೊತ್ತೋ ರಾಜಕಾರಣಕ್ಕೆ ನುಗ್ಗುತ್ತಿದೆ
    ನಾನು ಶಾಸಕನಾಗಬೇಕೆಂದು ಹುಚ್ಚು ಹಿಡಿಸಿಕೊಂಡಿದ್ದರೆ, ಯಾವೊತ್ತೊ ರಾಜಕಾರಣಕ್ಕೆ ನುಗ್ಗುತ್ತಿದೆ. ಎಷ್ಟೋ ಜನ ನಮ್ಮ ತಂದೆ ಹೆಸರಲ್ಲಿ ಶಾಸಕರಾಗಿದ್ದಾರೆ. ನಾನು 10 ವರ್ಷದ ಹಿಂದೆಯೇ ಶಾಸಕನಾಗಿಬಿಡ್ತಿದ್ದನೇನೋ? ಸಿನಿಮಾ ರಂಗದಲ್ಲಿ ನನ್ನನ್ನು ನಾನು ತೊಡಗಿಸಿಕೊಂಡಿದ್ದೇನೆ. ನನಗೆ ಒಂದು ಪ್ಯಾಷನ್ ಇತ್ತು, ಅದನ್ನು ಮುಂದುವರಿಸುತ್ತೇನೆ ಎಂದು ಹೇಳಿದರು.

    ಮುಂದಿನ ದಿನಗಳಲ್ಲಿ ಜನ ತೀರ್ಮಾನ ಮಾಡ್ತಾರೆ
    ಪಕ್ಷ ಯುವ ಘಟಕದ ಸ್ಥಾನ ನೀಡಿದೆ. ರಾಮನಗರ ಜಿಲ್ಲೆ ಮತ್ತು ಮಂಡ್ಯ ಜಿಲ್ಲೆಯ ಯುವಕರು ನಾನು ಬರಬೇಕೆಂದು ಬಯಸುತ್ತಾರೆ. ಇದೊಂದು ಉದ್ದೇಶ ಬಿಟ್ಟರೆ, ಅಲ್ಲಿ ನಿಲ್ಲಬೇಕು, ಇಲ್ಲಿ ನಿಲ್ಲಬೇಕೆಂಬ ಉದ್ದೇಶ ಇಲ್ಲ. ಮುಂದಿನ ದಿನಗಳಲ್ಲಿ ಜನ ತೀರ್ಮಾನ ಮಾಡ್ತಾರೆ. ಅದಕ್ಕೆ ನಾನು ಬದ್ಧನಾಗಿ ಕೆಲಸ ಮಾಡ್ತೇನೆ ಎಂದರು.

    ಯಡಿಯೂರಪ್ಪರ ಮಕ್ಕಳು ರಾಜಕಾರಣ ಮಾಡ್ತಿಲ್ವಾ?
    ಕುಟುಂಬ ರಾಜಕಾರಣ ಕುರಿತು ಮಾತನಾಡಿದ ನಿಖಿಲ್​, ಯಡಿಯೂರಪ್ಪರ ಮಕ್ಕಳು ರಾಜಕಾರಣ ಮಾಡ್ತಿಲ್ವಾ? ಸಿದ್ದರಾಮಯ್ಯ ಮಕ್ಕಳು ರಾಜಕಾರಣದಲ್ಲಿಲ್ವ? ಅವರಿಗೂ ಪ್ರಶ್ನೆ ಮಾಡಬೇಕಾಗುತ್ತೆ? ಎಂದು ಗದರಿದರು. ನಾವು ಜನಗಳ ಜತೆ ಬೇರಿತೀವಿ, ಇರ್ತಿವಿ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್​)

    ಸೇತುವೆ ಮೇಲೆ ಕಾರು ಪಾರ್ಕ್​ ಮಾಡಿ ನದಿಗೆ ಜಿಗಿದು ಕೃಷಿ ಅಧಿಕಾರಿ ಆತ್ಮಹತ್ಯೆ..!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts