More

    ನಿಖಿಲ್ ಮದುವೆಗೆ ನೀಡಿದ್ದ ವಾಹನ ಪಾಸ್​ಗಳೆಷ್ಟು?

    ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಮದುವೆಗೆ ವಿತರಿಸಿದ್ದ ವಾಹನ ಪಾಸ್​ಗಳ ವಿವರ ಒದಗಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಮತ್ತೊಮ್ಮೆ ನಿರ್ದೇಶಿಸಿದೆ. ಗೀತಾ ಮಿಶ್ರಾ ಸಲ್ಲಿಸಿರುವ ಅರ್ಜಿಯನ್ನು ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

    ಇದನ್ನೂ ಓದಿ: ನಿಖಿಲ್ ಮದುವೆಗೆ ನೀಡಿದ ಪಾಸ್ ಕುರಿತು ಇನ್ನೂ ಏಕೆ ವರದಿ ಸಲ್ಲಿಸಿಲ್ಲ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ

    ಮದುವೆ ಕಾರ್ಯಕ್ರಮಕ್ಕೆ ಎಷ್ಟು ವಾಹನ ಪಾಸ್ ನೀಡಲಾಗಿತ್ತು ಎಂಬ ಬಗ್ಗೆ ಮಾಹಿತಿ ನೀಡುವಂತೆ ಮೇ 5ರಂದೇ ಸರ್ಕಾರಕ್ಕೆ ಸೂಚಿಸಲಾಗಿತ್ತು. ಈವರೆಗೆ ಮಾಹಿತಿ ಕೊಟ್ಟಿಲ್ಲ. ಹಾಗಾದರೆ, ಕಾರ್ಯಕ್ರಮಕ್ಕೆ ವಾಹನ ಪಾಸ್ ನೀಡಲಾಗಿದೆಯೇ, ಇಲ್ಲವೇ, ಕೊಟ್ಟಿದ್ದರೆ ಎಷ್ಟು ಪಾಸ್ ಕೊಡಲಾಗಿತ್ತು ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ವಿವರ ನೀಡುವಂತೆ ಸರ್ಕಾರಕ್ಕೆ ಮತ್ತೊಮ್ಮೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಮೇ 18ಕ್ಕೆ ಮುಂದೂಡಿತು.

    ಇದನ್ನೂ ಓದಿ: ನಿಖಿಲ್​ ಮದುವೆಯಲ್ಲಾಗಿದ್ಯಾ ಲಾಕ್​ಡೌನ್​ ನಿಯಮ ಉಲ್ಲಂಘನೆ? ಹೈಕೋರ್ಟ್​ಗೆ ವರದಿ ನೀಡಿದ ರಾಜ್ಯ ಸರ್ಕಾರ…

    ಇದಕ್ಕೂ ಮೊದಲು ಅರ್ಜಿದಾರರ ಪರ ವಕೀಲ ಮೋಹನ್ ವಾದ ಮಂಡಿಸಿ, ಮದುವೆಗೆ ಐದಾರು ಜಿಲ್ಲೆಗಳಿಂದ ಜನ ಆಗಮಿಸಿರುವ ಸಾಧ್ಯತೆಯಿದೆ. ಆದ್ದರಿಂದ, ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿತ್ತು ಎಂಬ ಬಗ್ಗೆ ಸರ್ಕಾರದಿಂದ ಮಾಹಿತಿ ಪಡೆಯಬೇಕು ಎಂದು ಕೋರಿದರು.

    ಹೈಕೋರ್ಟ್ ಮೆಟ್ಟಿಲೇರಿತು ನಿಖಿಲ್ ವಿವಾಹ: ಸಾಮಾಜಿಕ ಅಂತರ ಕಾಯ್ದುಕೊಂಡ ಬಗ್ಗೆ ವರದಿ ನೀಡುವಂತೆ ನ್ಯಾಯಾಧೀಶರ ಸೂಚನೆ

    54 ವರ್ಷದ ಮಹಿಳೆಗೆ ಅವಳಿ ಮಕ್ಕಳು, ಪತಿಗೆ 64 ವರ್ಷ- ದಂಪತಿಯ ಬದುಕೇ ಒಂದು ಕರುಣಾಜನಕ ಕಥೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts