ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ; ದೇವೆಗೌಡರಿಂದ ಬಿ ಫಾರ್ಮ್ ಪಡೆಯುತ್ತಲೇ ಕಣ್ಣೀರು!

Nikhil Kumaraswamy
Published on

ಬೆಂಗಳೂರು: ರಾಮನಗರ ಜೆಡಿಎಸ್‌ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬಿ ಫಾರ್ಮ್ ಪಡೆದುಕೊಳ್ಳುವ ವೇಳೆ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ತಂದೆ ಎಚ್​.ಡಿ.ಕುಮಾರಸ್ವಾಮಿ, ತಾಯಿ ಅನಿತಾ ಕುಮಾರಸ್ವಾಮಿ ಅವರ ಜತೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಮಾಜಿ ಪ್ರಧಾನಿ ದೇವೇಗೌಡ ಅವರಿಂದ ಬಿ ಫಾರ್ಮ್ ಪಡೆದುಕೊಂಡರು.

ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ತಾಲ್ಲೂಕು ಕಚೇರಿ ಮುಂಭಾಗ ಜೆಡಿಎಸ್ ಹಾಗೂ ಕಾಂಗ್ರೇಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲು ಆಗಮಿಸಿದ ವೇಳೆ ಡಿಕೆ... ಡಿಕೆ... ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.

ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಬೆಳಗ್ಗೆ 10 ಗಂಟೆಗೆ ರಾಮನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ನಿಖಿಲ್ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚರ್ಚ್ ಹಾಗೂ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಬೃಹತ್ ಮೆರವಣಿಗೆ ತೆರಳಿ ಮಧ್ಯಾಹ್ನ 12:30ಕ್ಕೆ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ನಿಖಿಲ್ ಕುಮಾರಸ್ವಾಮಿ ನಾಮಪತ್ರದ ಬಳಿಕ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ಮಧ್ಯಾಹ್ನ1 ಗಂಟೆಗೆ ಕೆಂಗಲ್ ಆಂಜನೇಯ ಸ್ವಾಮಿ ದೇವಾಯದಲ್ಲಿ ಪೂಜೆ ಸಲ್ಲಿಸಿ, ಚನ್ನಪಟ್ಟಣದ ದರ್ಗಾ ಹಾಗೂ ಚರ್ಚ್​ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಶೇರು ಹೋಟೆಲ್ ವೃತ್ತದಿಂದ ತಾಲೂಕು ಕಚೇರಿ ವರೆಗೆ ಬೃಹತ್ ಮೆರವಣಿಗೆಯಲ್ಲಿ ಸಾಗಿ, ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net