ಚನ್ನಪಟ್ಟಣದಿಂದ Nikhil Kumaraswamy ಸ್ಫರ್ಧೆ ಫಿಕ್ಸ್

Nikhil Kumaraswamy
Published on

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್​ನಿಂದ ಸಿ.ಪಿ. ಯೋಗೇಶ್ವರ್​ (CP Yogeshwar) ನಾಮಪತ್ರ ಸಲ್ಲಿಸಿದ್ದು, ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಇನ್ನಷ್ಟೇ ಘೋಷಣೆಯಾಗಬೇಕಿದೆ. ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ (Nikhil Kumaraswamy) ಹೆಸರು ಅಂತಿಮಗೊಂಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.

ನಿಖಿಲ್​ ಕುಮಾರಸ್ವಾಮಿಗೆ (Nikhil Kumaraswamy) ಟಿಕೆಟ್​ ಕೊಡುವಂತೆ ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರು ಹಾಗೂ ಮುಖಂಡರು ರಾಜ್ಯ ಕಚೇರೊ ಜೆಪಿ ಭವನದ ಎದುರು ಗುರುವಾರ (ಅಕ್ಟೋಬರ್​ 24) ಪ್ರತಿಭಟನೆ ನಡೆಸಿದರು. ಇದಲ್ಲದೆ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಮುತ್ತಿಗೆ ಹಾಕಿದ ಕಾರ್ಯಕರ್ತರು ನಿಖಿಲ್​ ಹೆಸರು ಘೋಷಿಸುವಂತೆ ಪಟ್ಟಿ ಹಿಡಿದರು. ಈ ಹಿನ್ನೆಲೆಯಲ್ಲಿ ನಡೆದ ಜೆಡಿಎಸ್ ಪ್ರಮುಖರ ಸಭೆಯಲ್ಲಿ ನಿಖಿಲ್ ಹೆಸರನ್ನು ಅಂತಿಮಗೊಳಿಸಲಾಯಿತು.

ಜೆಡಿಎಸ್​ ಕಚೇರಿಯಲ್ಲಿ ನಡೆದ ಪ್ರಮುಖರ ಸಭೆ ಬಳಿಕ ಮಾಜಿ ಸಿಎಂ ಬಿಎಸ್​ವೈ (BSY) ಮನೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ  ಇನ್ನೊಮ್ಮೆ ಚರ್ಚಿಸಿ ನಿಖಿಲ್​ (Nikhil Kumaraswamy) ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ವರದಿಯಾಗಿದೆ. ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ  ನಿಖಿಲ್​ ಕುಮಾರಸ್ವಾಮಿ ಅವರು ಚನ್ನಪಟ್ಟಣದ ಮೈತ್ರಿ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರರ ಸಲ್ಲಿಸಲಿದ್ದಾರೆ. ಇವರಿಗೆ ಮೈತ್ರಿ ನಾಯಕರು ಸಾಥ್​ ನೀಡಲಿದ್ದಾರೆ.

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ (CP Yogeshwar) ಕಾಂಗ್ರೆಸ್ ನಿಂದ‌ ಅಖಾಡಕ್ಕೆ ಇಳಿದರೆ, ಇತ್ತ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ (NDA Candidate Nikhil Kumaraswamy) ಅಖಡಕ್ಕೆ ಇಳಿಯುವುದು ಪಕ್ಕಾ ಆಗಿದ್ದು, ಕದನ ಕಣ ಕುತೂಹಲ ಕೆರಳಿಸಿದೆ. ನಿಖಿಲ್ ಕುಮಾರಸ್ವಾಮಿ ಈ ಹಿಂದೆ ಎರಡು ಚುನಾವಣೆಯಲ್ಲಿ ಸೋಲನ್ನು ಕಂಡರೂ ಈ ಬಾರಿ ಮತ್ತೆ ಅವರನ್ನು ಅಖಾಡಕ್ಕೆ ಇಳಿಸಲು ನಿರ್ಧಾರ ಮಾಡಲಾಗಿದೆ. ಕ್ಷೇತ್ರದಲ್ಲಿ ಪಕ್ಷ ಉಳಿಸುವ ನಿಟ್ಟಿನಲ್ಲಿ ನಿಖಿಲ್ ಅವರನ್ನು ಕಣಕ್ಕೆ ಇಳಿಸಬೇಕು ಎಂಬ ಬೇಡಿಕೆ ಸಭೆಯಲ್ಲೂ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನಿಖಿಲ್ ಕೂಡಾ ಸ್ಪರ್ಧೆಗೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net