ನಿಖಿಲ್ ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ!

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಿಖಿಲ್ ಕುಮಾರಸ್ವಾಮಿ ಅವರು ಈ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಅಪ್ಪಾಜಿಗೌಡ ಭವಿಷ್ಯ ನುಡಿದಿದ್ದಾರೆ.

ದೇವಲಾಪುರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, 1996ರಲ್ಲಿ ಎಚ್‌ ಡಿ ಕುಮಾರಸ್ವಾಮಿ ಗೆದ್ದು ಲೋಕಸಭೆ ಪ್ರವೇಶಿಸಿದ್ದರು. ನಿಖಿಲ್​ರನ್ನು ಗೆಲ್ಲಿಸಿ ಈ ಬಾರಿ ಲೋಕಸಭೆಗೆ ಕಳುಹಿಸಿಕೊಡಿ. ಲೋಕಸಭೆಗೆ ಹೋದ ಬಳಿಕ ಕುಮಾರಸ್ವಾಮಿ ಸಿಎಂ ಆದರು. ಅದರಂತೆ ನಿಖಿಲ್ ಕೂಡ ಮುಂದೊಂದು ದಿನ ರಾಜ್ಯದ ಸಿಎಂ ಆಗುತ್ತಾರೆ ಎಂದು ತಿಳಿಸಿದರು.

ಅಭಿವೃದ್ಧಿಗಾಗಿ ನಿಖಿಲ್ ಕುಮಾರಸ್ವಾಮಿಯನ್ನು ಗೆಲ್ಲಿಸಿಕೊಡಿ ಎಂದು ನಿಖಿಲ್‌ ಕುಮಾರಸ್ವಾಮಿ ಅವರ ಪರವಾಗಿ ನಾಗಮಂಗಲ ತಾಲೂಕಿನ ದೇವಲಾಪುರದಲ್ಲಿ ಚುನಾವಣಾ ಪ್ರಚಾರ ಮಾಡಿದರು. (ದಿಗ್ವಿಜಯ ನ್ಯೂಸ್)

3 Replies to “ನಿಖಿಲ್ ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ!”

  1. Nikhil has the capacity some people give bad image about him and one thing I want to clear Nikhil has changed his nature there is a huge difference in him compared to old now he has become matured he keep his words. I have the hope that he can be great leader in future

  2. ಬಕೆಟ್ ಹಿಡಿಯಬೇಕು…….ಆದರೆ ಈ ಮಟ್ಟದಲ್ಲಿ ಹಿಡಿಯಬಾರದು…

Leave a Reply

Your email address will not be published. Required fields are marked *