ಚದುರಂಗ ಸ್ಪರ್ಧೆಯಲ್ಲಿ ನಿಖಿಲ್ ರಾಷ್ಟ್ರಮಟ್ಟಕ್ಕೆ

nikhil
ನಿಖಿಲ್ ವಿಕ್ರಮ್ ಕೆ.ಎಸ್.
Published on

ಕಾರ್ಕಳ: ಕಾರವಾರ ಪದವಿ ಪೂರ್ವ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಮತ್ತು ಶಿರಸಿ ಮಾರಿಕಾಂಬಾ ಸರ್ಕಾರಿ ಪಪೂ ಕಾಲೇಜು ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಖಿಲ್ ವಿಕ್ರಮ್ ಕೆ.ಎಸ್. ದ್ವಿತೀಯ ಸ್ಥಾನ ಗಳಿಸಿ ಕೊಲ್ಕತ್ತದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಇವರು ಡಾ.ಕೆ.ಶ್ರೀಧರ ಪ್ರಸಾದ್ ಕಡೂರ್ ಮತ್ತು ವೀಣಾ ಎಸ್.ಪ್ರಸಾದ್ ದಂಪತಿ ಪುತ್ರ. ವಿದ್ಯಾರ್ಥಿಯನ್ನು ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಬೋಧಕ, ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net