Friday, 16th November 2018  

Vijayavani

ಕೋರ್​​ ಕಮಿಟಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಫೈಟ್- ಶೋಭಾಗೆ ಸ್ಥಾನ ನೀಡಲು ಹೆಗಡೆ ಜತೆ ಬಿಎಸ್​ವೈ ಪೈಪೋಟಿ        ಮೈಸೂರು ಪಾಲಿಕೆ ಮೇಯರ್​, ಉಪ ಮೇಯರ್​ ಸ್ಥಾನಕ್ಕಿಂದು ಚುನಾವಣೆ: ಮೇಯರ್​ ಗಾದಿಗಾಗಿ ದೋಸ್ತಿಗಳ ಫೈಟ್​        ಅಯ್ಯಪ್ಪನ ದರ್ಶನಕ್ಕಾಗಿ ಕೇರಳದ ಕೊಚ್ಚಿಗೆ ಬಂದಿಳಿದ ಹೋರಾಟಗಾರ್ತಿ ತೃಪ್ತಿ ದೇಸಾಯಿಗೆ ಪ್ರತಿಭಟನೆ ಬಿಸಿ        ಗಜ ಚಂಡಮಾರುತ ಅಬ್ಬರ: ತಮಿಳುನಾಡಿನ ಕರಾವಳಿವಳಿಯಲ್ಲಿ ಜನ ತತ್ತರ, ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಮಳೆ ಸಾಧ್ಯತೆ        ಕಬ್ಬಿಗೆ ಸಮರ್ಪಕ ಬೆಲೆ ನೀಡುವಂತೆ ಆಗ್ರಹಿಸಿ ಮುಧೋಳದಲ್ಲಿ ರೈತರ ಬೃಹತ್​ ಹೋರಾಟ       
Breaking News

ನಿಮಿಷಾಂಬ ದೇವಾಲಯದ ಹುಂಡಿ ಎಣಿಕೆ

Friday, 15.06.2018, 5:28 AM       No Comments

ಶ್ರೀರಂಗಪಟ್ಟಣ: ಪಟ್ಟಣದ ಹೊರ ವಲಯದಲ್ಲಿರುವ ಗಂಜಾಂನ ಪ್ರಸಿದ್ಧ ನಿಮಿಷಾಂಬಾ ದೇವಾಲಯದ ಹುಂಡಿ ಎಣಿಕೆ ಕಾರ್ಯ ಗುರುವಾರ ನಡೆಯಿತು.
ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ, ದೇವಾಲಯದ ಆಡಳಿತ ಮಂಡಳಿಯ ಸಿಬ್ಬಂದಿ ಹಾಗೂ ವಿವಿಧ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಕಾರ್ಯಕರ್ತರು ದೇವಾಲಯದಲ್ಲಿನ ಒಟ್ಟು 18 ಹುಂಡಿಗಳನ್ನು ತೆರೆದು ಹಣ ಎಣಿಕೆ ನಡೆಸಿದರು. ಹುಂಡಿಗಳಲ್ಲಿ ಸಂಗ್ರಹಿಸಲ್ಪಟ್ಟ ಒಟ್ಟು 35,57, 804 ರೂ. ಲಕ್ಷ ನಗದು, 5 ಅರಬ್ ದೇಶದ ದೀಯರಮ್ಸ್ ನೋಟು, 93.600 ಮಿಲಿ ಗ್ರಾಂ ಚಿನ್ನ ಹಾಗೂ 248 ಗ್ರಾಂ ಬೆಳ್ಳಿಯನ್ನು ಭಕ್ತರು ದೇವಿಯ ಹುಂಡಿಗೆ ಅರ್ಪಿಸಿದ್ದಾರೆ. ಹಿಂದೆ ಅಮಾನ್ಯಗೊಂಡಿರುವ 1000 ಮುಖಬೆಲೆಯ 2 ನೋಟು, 500 ಮುಖಬೆಲೆಯ 6 ನೋಟುಗಳನ್ನು ಭಕ್ತರು ಹಾಕಿದ್ದಾರೆ. 3 ತಿಂಗಳ ಹಿಂದೆ ಹುಂಡಿಗಳ ಎಣಿಕೆ ಕಾರ್ಯ ನಡೆಸಲಾಗಿತ್ತು ಎಂದು ದೇವಾಲಯದ ಪ್ರಧಾನ ಅರ್ಚಕ ಸೂರ್ಯನಾರಾಯಣಭಟ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back To Top