More

    ಗ್ಯಾಸ್​​ ಟ್ಯಾಂಕರ್​-ಆಟೋ ನಡುವೆ ಭೀಕರ ಅಪಘಾತ; 9 ಮಂದಿ ಮೃತ್ಯು

    ಲಖನೌ: ಆಟೋ-ಗ್ಯಾಸ್​ ಟ್ಯಾಂಕರ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಗು, ಇಬ್ಬರು ಮಹಿಳೆಯರು ಸೇರಿದಂತೆ 9 ಮಂದಿ ಮೃತಪಟ್ಟು, 7ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಪ್ರತಾಪ್​ಗಢ ಜಿಲ್ಲೆಯಲ್ಲಿ ನಡೆದಿದೆ.

    ಘಟನೆಯೂ ವಾರಣಾಸಿ-ಲಕನೌ ಹೆದ್ದಾರಿಯಲ್ಲಿ ನಡೆದಿದ್ದು, ಒನ್​ವೇನಲ್ಲಿ ವೇಗವಾಗಿ ಬರುತ್ತಿದ್ದ ಗ್ಯಾಸ್​ಟ್ಯಾಂಕರ್​ ಚಾಲಕನ ನಿಯಮತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡದು ಬಳಿಕ ಪಲ್ಟಿಯಾದ ಪರಿಣಾಮ 9 ಮಂದಿ ಮೃತಪಟ್ಟಿದ್ದಾರೆ.

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಜೇತ್ವಾರಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಭೈರವಪುರ ನಿವಾಸಿ ಆಟೋ ಚಾಲಕ ಸತೀಶ್​ ಗೌತಮ್​(26) ತನ್ನ ವಾಹನದಲ್ಲಿ 15 ಪ್ರಯಾಣಿಕರನ್ನು ಹೊತ್ತು ಮೋಹನ್​ಗಂಜ್​ ಕಡೆ ತೆರಳುತ್ತಿದ್ದ. ಈ ವೇಳೆ ಗ್ಯಾಸ್​ ಟ್ಯಾಂಕರ್​ ಒಂದು ಒನ್​​ವೇನಲ್ಲಿ ವೇಗವಾಗಿ ಬರುತ್ತಿದ್ದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ.

    Road Accident

    ಇದನ್ನೂ ಓದಿ: VIDEO| ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನು ಇರಿದು ಕೊಂದ ಪಾಗಲ್​ ಪ್ರೇಮಿ

    ಲಾರಿ ಆಟೋಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಓರ್ವ ಮಗು, ಇಬ್ಬರು ಮಹಿಳೆಯರು ಸೇರಿದಂತೆ 9 ಮಂದಿ ಮೃತಪಟ್ಟು, 6ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುಗಲ ನೆರವಿಗೆ ಧಾವಿಸಿದ ಸ್ಥಳೀಯರು ತಕ್ಷಣವೇ ಅವರೆಲ್ಲರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ ಎಂದು ಜೇತ್ವಾರಾ ಪೊಲೀಸ್ ಠಾಣೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

    ಅಪಘಾತದ ಕುರಿತು ಟ್ವೀಟ್​ ಮಾಡಿ ಸಂತಾಪ ಸೂಚಿಸಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ಹಾಗೂ ಗಾಯಾಳುಗಳಿಗೆ ಐವತ್ತು ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts