21.7 C
Bengaluru
Tuesday, January 21, 2020

ನಿಂತಿಕಲ್ಲು ಜಂಕ್ಷನಿನಲ್ಲಿ ಕೊರತೆಗಳದ್ದೇ ಕಾರುಬಾರು

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

< ಬಸ್‌ನಿಲ್ದಾಣವಿಲ್ಲ, ಉಪಯೋಗಕ್ಕೆ ಬಾರದ ಶೌಚಗೃಹ, ಕುಡಿಯುವ ನೀರಿಲ್ಲ> 

ಬಾಲಚಂದ್ರ ಕೋಟೆ ಬೆಳ್ಳಾರೆ

ಅನೇಕ ಊರುಗಳಿಗೆ ಸಂಪರ್ಕದ ಕೊಂಡಿಯಾದ ಜಂಕ್ಷನ್ ಇದು. ಮೇಲ್ನೋಟಕ್ಕೆ ಎಲ್ಲ ಸುಸಜ್ಜಿತ ವ್ಯವಸ್ಥೆಗಳಿರುವಂತೆ ಕಂಡರೂ, ನಿತ್ಯವೂ ಸನಿಹದಿಂದ ಬಲ್ಲವರಿಗೆ ಮಾತ್ರ ಗೊತ್ತು ಈ ಊರಿನ ಗೋಳುಗಳ ಸಂಖ್ಯೆ. ಇದು ಸುಳ್ಯ ತಾಲೂಕಿನ ನಿಂತಿಕಲ್ಲಿನ ವಸ್ತು ಸ್ಥಿತಿ.

ಎಣ್ಮೂರಿನ ಗ್ರಾಮ ಪಂಚಾಯಿತಿಗೆ ಸೇರಿದ ನಿಂತಿಕಲ್ಲು ಪುತ್ತೂರು -ಸುಳ್ಯ ಸಂಪರ್ಕಿಸುವ ಗಡಿಭಾಗವಾಗಿದ್ದು, ಕಾಣಿಯೂರು-ಪುತ್ತೂರು, ಬೆಳ್ಳಾರೆ-ಪುತ್ತೂರನ್ನು ಸಂಪರ್ಕಿಸುವ ಮುಖ್ಯ ಜಂಕ್ಷನ್ ಇದಾಗಿದೆ. ಈ ಜಂಕ್ಷನ್ ರಸ್ತೆ ಕಾಣಿಯೂರು ಹಾಗು ಬೆಳ್ಳಾರೆ ಮಾರ್ಗವಾಗಿ ಪುತ್ತೂರಿಂದ ಬರುವಾಗ ಕೊನೆಯಾಗುವುದೇ ಪುರಾಣ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯಕ್ಕೆ. ಪಂಜ ಕೊಡಿಂಬಳವಾಗಿ ಧರ್ಮಸ್ಥಳಕ್ಕೆ ಹೋಗುವ ನೂರಾರು ಪ್ರಯಾಣಿಕರು ನಿತ್ಯವೂ ಸಮಾಗಮಗೊಳ್ಳುತ್ತಿರುತ್ತಾರೆ. ಅಂತಹ ನಿಂತಿಕಲ್ಲಿನಲ್ಲಿ ಸಮರ್ಪಕ ಮೂಲಸೌಕರ್ಯಗಳಿಲ್ಲ.

ಬಹಳ ವರ್ಷಗಳಿಂದಲೂ ಇಲ್ಲಿಗೆ ಸುಸಜ್ಜಿತ ಬಸ್ ನಿಲ್ದಾಣಕ್ಕೆ ಸಾರ್ವಜನಿಕರು ಬೇಡಿಕೆಯಿಡುತ್ತಾ ಬಂದಿದ್ದು, ಕಣ್ಣಿಗೆ ಮಣ್ಣೆರೆಚಲು ಪ್ರಯತ್ನಿಸುವ ಸಲುವಾಗಿ ಉಪಯೋಗಕ್ಕೆ ಬಾರದ ಬಸ್ ನಿಲ್ದಾಣ ನಿರ್ಮಿಸಿಕೊಡಲಾಗಿದೆ. ಮಳೆ ಬಂದ ಸಂದರ್ಭ ಬಹಳಷ್ಟು ಮಂದಿ ಒದ್ದೆಯಾಗುತ್ತಿರುತ್ತಾರೆ. ಕುಡಿಯುವ ನೀರಿನ ಸೌಲಭ್ಯವೂ ಇಲ್ಲಿಲ್ಲ. ಪ್ರಯಾಣಿಕರೆಲ್ಲರೂ ನೀರಿಗಾಗಿ ಸುತ್ತಮುತ್ತಲಿನ ಮಿನಿಕ್ಯಾಂಟಿನ್,ಬೇಕರಿಗಳನ್ನು ಅವಲಂಬಿತರಾಗಿದ್ದಾರೆ.

ಶೌಚಗೃಹಕ್ಕೆ ಸದಾ ಬೀಗ: ಇಲ್ಲಿನ ಸಾರ್ವಜನಿಕ ಶೌಚಗೃಹದ ಸ್ಥಿತಿ ಶೋಚನೀಯ. ಗ್ರಾಪಂ ಆಡಳಿತಕ್ಕೊಳಪಡುವ ಶೌಚಗೃಹ ನಾಮ್‌ಕೆವಾಸ್ತೆಗೆ ಮಾತ್ರ. ಒಂದೇ ಕಟ್ಟಡದಲ್ಲಿ ಐದು ಶೌಚಗೃಹವಿದ್ದರೂ ನಾಲ್ಕಕ್ಕೆ ಸದಾ ಬೀಗ ಜಡಿದಿರಲಾಗುತ್ತಿದೆ. ಉಳಿದಿರುವ ಒಂದು ಸಹ ದುರ್ನಾತ ಬೀರುತ್ತಿದೆ. ಮೇಲ್ನೋಟಕ್ಕೆ ಶುಚಿತ್ವವಿದ್ದಂತೆ ಕಂಡರೂ, ಸರಿಯಾದ ನೀರಿನ ವ್ಯವಸ್ಥೆ ಇಲ್ಲದೆ ಸಾರ್ವಜನಿಕರಿಗೆ ಉಪಯೋಗಕ್ಕೆ ದೊರೆಯುತ್ತಿಲ್ಲ. ಮುಖ್ಯವಾಗಿ ಮಹಿಳೆಯರ ಗೋಳು ಕೇಳುವವರಿಲ್ಲ.

ದೂರು ನೀಡಿದರೂ ಪ್ರಯೋಜನವಿಲ್ಲ: ನಿಂತಿಕಲ್ಲು ಭಾಗದ ಸಾರ್ವಜನಿಕರು, ಆಟೋ ಚಾಲಕರು ಸೇರಿ ಹಲವು ಸಂಘಸಂಸ್ಥೆಗಳು ಒಟ್ಟಾಗಿ ಲಿಖಿತ ಹಾಗೂ ಮೌಖಿಕ ದೂರು ನೀಡಿದ್ದರೂ, ದೂರುದಾರರಿಗೆ ಪೊಳ್ಳು ಭರವಸೆ ನೀಡುತ್ತಾ ಎಣ್ಮೂರು ಗ್ರಾಪಂ ಸಾಗಹಾಕುತ್ತಲೇ ಇದೆ. ತಮ್ಮ ಅಳಲನ್ನು ಇನ್ನಾವ ಸಚಿವ, ಜನಪ್ರತಿನಿಧಿ ಬಳಿ ಹೇಳಿದರೂ ಪ್ರಯೋಜನವಿಲ್ಲವೆಂದು ಸ್ಥಳಿಯರು ಬೇಸತ್ತು ನುಡಿಯುತ್ತಾರೆ.

ಎಣ್ಮೂರಿನ ಗ್ರಾಪಂ ಕೇವಲ ಬಾಯಲ್ಲಿ ಮಾತ್ರ ಅಭಿವೃದ್ಧಿ ಎನ್ನುತ್ತಿದೆ,ಆದರೆ ಕೆಲಸಗಳು ಮಾತ್ರ ಎಲ್ಲಿಯೂ ಗೋಚರವಾಗುವುದಿಲ್ಲ. ಅನೇಕ ವರ್ಷಗಳಿಂದ ಸುಸಜ್ಜಿತ ಬಸ್‌ನಿಲ್ದಾಣ ಹಾಗೂ ರಿಕ್ಷಾ ನಿಲುಗಡೆಗೆ ವ್ಯವಸ್ಥೆಗೆ ಮನವಿ ಮಾಡಿದರೂ ಸ್ಪಂದಿಸಿಲ್ಲ. ಸಾರ್ವಜನಿಕರು ನೆನಪಾಗುವುದು ಚುನಾವಣೆಗೆ ಮಾತ್ರ.
ಅಬ್ದುಲ್ ರಝಾಕ್, ರಿಕ್ಷಾ ಚಾಲಕರು

ಶೌಚಗೃಹದ ಕುರಿತು ಹಲವು ದೂರುಗಳು ಬಂದಿದ್ದು, ಶೀಘ್ರವಾಗಿ ಬಗೆಹರಿಸುತ್ತೇವೆ. ನೂತನ ಬಸ್‌ನಿಲ್ದಾಣವನ್ನು ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಕುಡಿಯುವ ನೀರಿಗೆ ಶೀಘ್ರವಾಗಿ ವ್ಯವಸ್ಥೆ ಕಲ್ಪಿಸಲಾಗುವುದು
ಜಾನಕಿ, ಎಣ್ಮೂರು ಗ್ರಾಪಂ ಅಧ್ಯಕ್ಷೆ

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...