21.7 C
Bengaluru
Tuesday, January 21, 2020

ಕರ್ನಾಟಕದಲ್ಲೂ ನಿಫಾ ಮುನ್ನೆಚ್ಚರಿಕೆ ಕ್ರಮ: ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ನಿಗಾವಹಿಸಲು ಸೂಚನೆ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಬೆಂಗಳೂರು: ಕೇರಳದಲ್ಲಿ ಮಹಾಮಾರಿ ನಿಫಾ ವೈರಸ್ ಸೋಂಕು ಪತ್ತೆಯಾಗಿರುವ ಶಂಕೆ ಹಿನ್ನಲೆಯಲ್ಲಿ ರಾಜ್ಯದಲ್ಲೂ ನಿಫಾ ಬಗ್ಗೆ ಹೈ ಅಲರ್ಟ್ ಘೋಷಿಸಲಾಗಿದೆ. ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.

ಕೇರಳದಲ್ಲಿ ಎರ್ನಾಕುಲಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 23 ವರ್ಷದ ವಿದ್ಯಾರ್ಥಿ ನಿಫಾ ವೈರಸ್ ಸೋಂಕಿನಿಂದ ಗುರುತಿಸಲ್ಪಟ್ಟ ನಂತರ ರಾಜ್ಯದ ಗಡಿ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಕಟ್ಟೆಚ್ಚರ ವಹಿಸುವಂತೆ ಆದೇಶ ಹೊರಡಿಸಿದೆ. ಈ ಜಿಲ್ಲೆಗಳಲ್ಲಿ ಶಂಕಿತ ಪ್ರಕರಣಗಳ ಬಗ್ಗೆ ಕಣ್ಣಿಡಲು ಸರ್ಕಾರ ಮತ್ತು ಖಾಸಗಿ ಆಸ್ಪತ್ರೆಗಳಿಗೆ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಆಸ್ಪತ್ರೆಗಳು ಪ್ರತಿದಿನ ಸರ್ಕಾರಕ್ಕೆ ವೈದ್ಯಕೀಯ ವರದಿ ನೀಡಬೇಕಿದ್ದು, ಪ್ರತ್ಯೇಕ ಹಾಸಿಗೆ ವ್ಯವಸ್ಥೆ, ವೆಂಟಿಲೇಟರ್ ಮತ್ತು ಐಸಿಯು, ವೈದ್ಯಕೀಯ ಸೌಲಭ್ಯ ಸೇರಿ ಆರೋಗ್ಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರನ್ನು ಸಂವೇದನೆಗೊಳಿಸಲು ಸೂಚಿಸಿದೆ.

ಕೇರಳ ಪ್ರವಾಸ ಬೇಡ

ಬಾವಲಿ ತಿಂದು ಬಿಟ್ಟ ಹಣ್ಣು ಸೇವಿಸುವುದರಿಂದ ಹರಡುವ ನಿಫಾ ಸೋಂಕಿನಿಂದ ಆರಂಭದಲ್ಲಿ ಜ್ವರ, ತಲೆನೋವು, ವಾಂತಿ, ಗಂಟಲು ನೋವು, ತಲೆತಿರುಗುವಿಕೆ, ತೀವ್ರವಾದ ಉಸಿರಾಟದ ತೊಂದರೆ, ಅರೆನಿದ್ರೆ, ಪ್ರಜ್ಞೆ ತಪು್ಪವುದು, ಉಸಿರಾಟದ ತೊಂದರೆ ಎದುರಾಗಲಿದೆ. ಈ ಸಮಯಲ್ಲಿ ಕೇರಳಕ್ಕೆ ಹೋಗುವುದು ಆದಷ್ಟು ಮುಂದೂಡುವುದ ಒಳಿತು ಎಂದು ತಿಳಿಸಲಾಗಿದೆ.

6 ಶಂಕಿತರಲ್ಲಿ ವೈರಸ್ ಪತ್ತೆಯಾಗಿಲ್ಲ

ತಿರುವನಂತಪುರ: ನಿಫಾಗೆ ತುತ್ತಾಗಿರುವ ವಿದ್ಯಾರ್ಥಿಗೆ ಚಿಕಿತ್ಸೆ ನೀಡುತ್ತಿದ್ದ ಇಬ್ಬರು ನರ್ಸ್ ಸೇರಿ ಒಟ್ಟು 6 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇವರಲ್ಲಿ ಸೋಂಕು ಪತ್ತೆಯಾಗಿಲ್ಲ ಎಂದು ಕೇರಳ ಆರೋಗ್ಯ ಸಚಿವೆ ಕೆ .ಕೆ. ಶೈಲಜಾ ಗುರುವಾರ ಸ್ಪಷ್ಟಪಡಿಸಿದ್ದಾರೆ. ಪುಣೆಯ ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ವೈರಾಲಜಿ ಮತ್ತು ಅಲಪು್ಪಳದ ಸರ್ಕಾರಿ ಲ್ಯಾಬ್​ಗಳಲ್ಲಿ ನಡೆಸಿದ ರಕ್ತಪರೀಕ್ಷೆಯ ವರದಿಯಲ್ಲಿ ವೈರಸ್ ಇರುವುದು ಕಂಡುಬಂದಿಲ್ಲ. ಇನ್ನೊಬ್ಬನ ರಕ್ತ ಪರೀಕ್ಷೆಯ ವರದಿ ಬಂದಿಲ್ಲ. ಆದರೂ ಇವರನ್ನು ಐಸೋಲೇಟೆಡ್ ವಾರ್ಡ್​ಗಳಿಂದ ಡಿಸ್ಚಾರ್ಜ್ ಮಾಡಿಲ್ಲ. ಕೇರಳದಲ್ಲಿ ನಿಫಾ ವೈರಸ್ ವೇಗವಾಗಿ ಹರಡುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. ನಿಫಾಗೆ ತುತ್ತಾಗಿರುವ ಕಾಲೇಜು ವಿದ್ಯಾರ್ಥಿಯ ಆರೋಗ್ಯವೂ ಸ್ಥಿರವಾಗಿದೆ. ವೈರಸ್​ಗೆ ತುತ್ತಾಗಿರುವ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ 314 ಜನರ ಮೇಲೂ ನಿಗಾ ಇರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ 6 ಜನರನ್ನೊಳಗೊಂಡ ತಜ್ಞರ ತಂಡವನ್ನು ಕೇರಳಕ್ಕೆ ಕಳುಹಿಸಿಕೊಟ್ಟಿದೆ. ಆರೋಗ್ಯ ಸಚಿವ ಹರ್ಷವರ್ಧನ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...