ಬ್ಯಾಂಕ್‌ಗೆ ಬಹುಕೋಟಿ ವಂಚಿಸಿ ಪರಾರಿಯಾಗಿದ್ದ ನೀರವ್‌ ಮೋದಿ ಲಂಡನ್‌ನಲ್ಲಿ ಬಂಧನ

ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ಕೋಟ್ಯಂತರ ರೂಪಾಯಿಗಳನ್ನು ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ವಜ್ರದ ಉದ್ಯಮಿ ನೀರವ್ ಮೋದಿಯನ್ನು ಲಂಡನ್‌ ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನೀರವ್ ಮೋದಿಯನ್ನು ಗಡಿಪಾರು ಮಾಡುವುದಕ್ಕೆ ಭಾರತದ ಜಾರಿ ನಿರ್ದೇಶನಾಲಯ ಮನವಿ ಮಾಡಿದ ಹಿನ್ನೆಲೆಯಲ್ಲಿ ಲಂಡನ್ ಕೋರ್ಟ್ ನೀರವ್ ಮೋದಿ ವಿರುದ್ಧ ಮೊನ್ನೆಯಷ್ಟೇ ಬಂಧನ ವಾರಂಟ್ ಜಾರಿಗೊಳಿಸಿತ್ತು.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸುಮಾರು 13,000 ಕೋಟಿ ರೂಪಾಯಿಗಳನ್ನು ವಂಚಿಸಿದ್ದ ನೀರವ್ ಮೋದಿ ತಲೆಮರೆಸಿಕೊಂಡು ಲಂಡನ್‌ಗೆ ಪರಾರಿಯಾಗಿದ್ದರು. (ಏಜೆನ್ಸೀಸ್)