More

    ನಿರ್ಭಯಾ ಪ್ರಕರಣ: ಮತ್ತೊಬ್ಬ ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ರಾಮನಾಥ್​ ಕೋವಿಂದ್​

    ನವದೆಹಲಿ: ನಿರ್ಭಯಾ ಗ್ಯಾಂಗ್​ರೇಪ್​ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ಅಕ್ಷಯ್​ ಸಿಂಗ್​ ಠಾಕೂರ್​ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಬುಧವಾರ ತಿರಸ್ಕರಿಸಿದ್ದಾರೆ.

    ಅಕ್ಷಯ್​ ಸಿಂಗ್​ ಠಾಕೂರ್​ ಕಳೆದ ಶನಿವಾರ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದ. ಇಂದು ತಿರಸ್ಕೃತಗೊಂಡಿದ್ದು, ಇಲ್ಲಿಯವರೆಗೂ ಒಟ್ಟು ನಾಲ್ವರು ಅಪರಾಧಿಗಳಲ್ಲಿ ಮೂವರ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ. ಇದಕ್ಕೂ ಮುನ್ನ ಅಪರಾಧಿಗಳಾದ ಮುಕೇಶ್​ ಮತ್ತು ವಿನಯ್​ ಅರ್ಜಿಗಳನ್ನು ತಿರಸ್ಕೃತಗೊಂಡಿದ್ದವು. ಇವರ ಪೈಕಿ ಪವನ್​ ಗುಪ್ತ ಮಾತ್ರ ಅರ್ಜಿ ಸಲ್ಲಿಸಲು ಬಾಕಿ ಉಳಿದಿದೆ.

    ಇಂದು ಬೆಳಗ್ಗೆಯಷ್ಟೇ ಅಪರಾಧಿಗಳಿಗೆ ಗಲ್ಲುಶಿಕ್ಷೆಯನ್ನು ತಡೆಹಿಡಿದ ದೆಹಲಿ ಪಟಿಯಾಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ದೆಹಲಿ ಹೈಕೋರ್ಟ್​ ವಜಾಗೊಳಿಸಿ, ನಾಲ್ವರು ಅಪರಾಧಿಗಳನ್ನೂ ಒಟ್ಟಿಗೇ ಗಲ್ಲಿಗೇರಿಸಬೇಕು. ಬೇರೆಬೇರೆಯಾಗಿ ನೇಣಿಗೆ ಹಾಕುವಂತಿಲ್ಲ ಎಂದು ಸೂಚನೆ ನೀಡಿದೆ. ಅಪರಾಧಿಗಳು ಯಾವುದೇ ಕಾನೂನು ಪ್ರಕ್ರಿಯೆ ಕೈಗೊಳ್ಳುವುದಿದ್ದರೂ, ಅರ್ಜಿ ಸಲ್ಲಿಸುವುದಿದ್ದರೂ ಇನ್ನೊಂದು ವಾರದಲ್ಲಿ ಅದನ್ನೆಲ್ಲ ಪೂರ್ತಿಗೊಳಿಸಿಕೊಳ್ಳಬೇಕು ಎಂದು ಹೇಳಿದೆ.

    ಅಪರಾಧಿಗಳಾದ ಮುಕೇಶ್​ ಕುಮಾರ್​ ಸಿಂಗ್​, ಪವನ್​ ಕುಮಾರ್​ ಗುಪ್ತ, ವಿನಯ್​ ಕುಮಾರ್​ ಶರ್ಮ ಮತ್ತು ಅಕ್ಷಯ್​ ಕುಮಾರ್​ ಸಿಂಗ್​ಗೆ ಗಲ್ಲು ಶಿಕ್ಷೆ ನಿಗದಿಯಾಗಿದೆ. 23 ವರ್ಷದ ಪ್ಯಾರಾಮೆಡಿಕಲ್​ ವಿದ್ಯಾರ್ಥಿನಿಯನ್ನು ಡಿಸೆಂಬರ್​ 16, 2012ರಂದು ಬಾಲಾಪಾರಾಧಿ ಸೇರಿದಂತೆ ಒಟ್ಟು ಆರು ಮಂದಿ ಮೃಗೀಯವಾಗಿ ಅತ್ಯಾಚಾರವೆಸಗಿ, ಕೊಲೆಗೈದು ವಿಕೃತಿ ಮೆರೆದಿದ್ದರು.

    ಒಟ್ಟು ಆರು ಅಪರಾಧಿಗಳಲ್ಲಿ ರಾಮ ಸಿಂಗ್​ ತಿಹಾರ್​ ಜೈಲಿನಲ್ಲೇ 2013 ಮಾರ್ಚ್​ನಲ್ಲಿ ಪಾಪಾಪ್ರಜ್ಞೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ. ಮತ್ತೊಬ್ಬ ಬಾಲಾಪಾರಾಧಿಯನ್ನು ಅಪರಾಧ ನಡೆದ ಮೂರು ವರ್ಷಗಳ ಬಳಿಕ ಬಿಡುಗಡೆ ಮಾಡಲಾಗಿತ್ತು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts