More

    ನಿರ್ಭಯಾ ಕೇಸ್​: ದೆಹಲಿ ಹೈಕೋರ್ಟ್​ ತೀರ್ಪು ಪ್ರಶ್ನಿಸಿರುವ ಕೇಂದ್ರದ ಅರ್ಜಿಯನ್ನು ಫೆ.11ರಂದು ಕೈಗೆತ್ತಿಕೊಳ್ಳಲಿರುವ ಸುಪ್ರೀಂಕೋರ್ಟ್​

    ನವದೆಹಲಿ: ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅಪರಾಧಿಗಳ ಗಲ್ಲುಶಿಕ್ಷೆಗೆ ತಡೆನೀಡಿದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್​ ಕ್ರಮವನ್ನು ಪ್ರಶ್ನಿಸಿ ಕೇಂದ್ರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಫೆ.11 ರಂದು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.

    ಗಲ್ಲುಶಿಕ್ಷೆ ವಿಚಾರದಲ್ಲಿ ಮತ್ತಷ್ಟು ವಿಳಂಬವಾಗಬಹುದು. ಹೀಗಾಗಿ ಕೇಂದ್ರದ ಅರ್ಜಿಯ ಮೇಲೆ ನಾಲ್ವರು ಅಪರಾಧಿಗಳಿಗೆ ನೋಟಿಸ್​​ ಹೊರಡಿಸಬೇಕು ಎಂದು ಕೇಂದ್ರದ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ ಅವರು ಮನವಿ ಮಾಡಿಕೊಂಡಿದ್ದಾರೆ.

    ಇದನ್ನು ಗಂಭೀರವಾಗಿ ಪರಿಗಣಿಸದೇ ಇರುವ ನ್ಯಾಯಮೂರ್ತಿ ಆರ್​. ಭಾನುಮತಿ ನೇತೃತ್ವದ ತ್ರಿಸದಸ್ಯ ಪೀಠವು ಫೆ. 11ರಂದು ವಿಚಾರಣೆಯನ್ನು ಕೈತ್ತಿಕೊಳ್ಳಲಾಗುವುದು. ನೋಟಿಸ್​ ನೀಡಬೇಕೋ ಅಥವಾ ಬೇಡವೋ ಎಂದು ನಿರ್ಧರಿಸಲಾಗುವುದು ಎಂದು ಮೆಹ್ತಾ ಅವರಿಗೆ ತಿಳಿಸಿದೆ. ತ್ರಿಸದಸ್ಯ ಪೀಠವು ನ್ಯಾಯಮೂರ್ತಿಗಳಾದ ಅಶೋಕ್​ ಭೂಷಣ್​ ಮತ್ತು ಎ.ಎಸ್.ಬೋಪಣ್ಣ ಅವರನ್ನು ಒಳಗೊಂಡಿದೆ.

    ಈ ಪ್ರಕರಣದಲ್ಲಿ ದೇಶದ ಜನತೆಯ ತಾಳ್ಮೆಯನ್ನು ಪರೀಕ್ಷಿಸಲಾಗುತ್ತಿದೆ. ಈ ವಿಚಾರದಲ್ಲಿ ಪೀಠವು ಕೂಡ ಕಾನೂನನ್ನು ಬಿಟ್ಟುಕೊಡುತ್ತಿದೆ ಎಂದು ಮೆಹ್ತಾ ಅವರು ನ್ಯಾಯಾಲಯದ ಮುಂದೆ ಹೇಳಿಕೊಂಡಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts