22.8 C
Bengaluru
Saturday, January 18, 2020

ವ್ಯವಸ್ಥೆಯಲ್ಲಿ ಸಂವೇದನೆ ಜಾಗೃತವಾಗಲಿ

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ಜಡತ್ವ ಮತ್ತು ಇಚ್ಛಾಶಕ್ತಿಯ ಕೊರತೆ ಎಷ್ಟೆಲ್ಲ ಹಾನಿ ಮಾಡುತ್ತದೆ, ಎಷ್ಟೊಂದು ಉತ್ತಮ ಆಶಯಗಳನ್ನು ಕೊನೆಗೊಳಿಸುತ್ತದೆ ಎಂಬುದಕ್ಕೆ ನಮ್ಮ ವ್ಯವಸ್ಥೆಯಲ್ಲಿ ನಿದರ್ಶನಗಳಿಗೆ ಕೊರತೆಯೇನಿಲ್ಲ. ಆದರೆ, ವ್ಯವಸ್ಥೆ ಈ ಪ್ರಮಾಣದಲ್ಲಿ ಸಂವೇದನಾರಹಿತವಾದರೆ, ಮಾಡಬೇಕಾದ ಅಗತ್ಯ ಕರ್ತವ್ಯಗಳನ್ನೂ ಮರೆತು ಕೂತುಬಿಟ್ಟರೆ ಸುಧಾರಣೆಯ ಹಾದಿ ತೆರೆದುಕೊಳ್ಳುವುದು ಹೇಗೆ? ಎಷ್ಟೋ ಯೋಜನೆಗಳು, ಕಾರ್ಯಕ್ರಮಗಳು ಹಾಗೆಯೇ. ಆರಂಭದಲ್ಲೇ ಕುಂಟುತ್ತ, ತೆವಳುತ್ತ ಸಾಗಿ ಕ್ರಮೇಣ ಸ್ಥಗಿತವಾಗಿ ಬಿಡುತ್ತವೆ. ಜನರ ಜೀವನವನ್ನೇ ಬದಲಿಸಬಹುದಾದ, ಸಮಾಜದ ಸ್ತರ ಎತ್ತರಿಸಬಹುದಾದ ಯೋಜನೆಗಳು ಅಕಾಲದಲ್ಲೇ ನೆಲಕಚ್ಚಿದಾಗ ನಂಬಿಕೆ, ಭರವಸೆಗಳಿಗೂ ದೊಡ್ಡ ಹೊಡೆತ ಬೀಳುತ್ತದೆ. ಸಣ್ಣಪುಟ್ಟ ಕೆಲಸಗಳು ನೆರವೇರಬೇಕಾದರೂ ನ್ಯಾಯಾಲಯಗಳು ಚಾಟಿಯೇಟು ನೀಡಬೇಕು, ಹಲವು ಬಾರಿ ಎಚ್ಚರಿಕೆ ನೀಡಬೇಕು ಎಂಬ ಪರಿಸ್ಥಿತಿ ಇತ್ತೀಚಿನ ದಿನಗಳಲ್ಲಿ ಸೃಷ್ಟಿಯಾಗುತ್ತಿರುವುದು ಖಂಡಿತವಾಗಿಯೂ ಒಳ್ಳೆಯ ಬೆಳವಣಿಗೆಯೇನಲ್ಲ.

ಸಾಮಾನ್ಯವಾಗಿ, ಯಾವುದೇ ಹೊಸ ಸುಧಾರಣಾ ಕ್ರಮಗಳಿಗೆ ತೆರೆದುಕೊಳ್ಳಬೇಕಾದರೆ ಅಧಿಕಾರಿಗಳು ಅಥವಾ ಸಂಬಂಧಿತರು ಹಣಕಾಸಿನ ಕೊರತೆಯ ಕಾರಣ ಹೇಳುತ್ತಾರೆ. ಆದರೆ, ಆರ್ಥಿಕ ಸಂಪನ್ಮೂಲವನ್ನು ಒದಗಿಸಿದ ಬಳಿಕವೂ ಯೋಜನೆ ಅಥವಾ ಕಾರ್ಯಕ್ರಮ ನನೆಗುದಿಗೆ ಬೀಳುತ್ತದೆ ಎಂದರೇನರ್ಥ? ನಿರ್ಭಯಾ ನಿಧಿ ವಿಷಯದಲ್ಲಿ ಈಗ ಆಗಿರುವುದು ಅದೇ. 2012ರಲ್ಲಿ ರಾಜಧಾನಿ ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣ ಇಡೀ ದೇಶದಲ್ಲಿ ತಲ್ಲಣ ಮೂಡಿಸುವ ಜತೆಗೆ, ಮಹಿಳಾ ಸುರಕ್ಷತೆ ನಿಟ್ಟಿನಲ್ಲಿ ಪ್ರಭುತ್ವ ಬಲವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಒತ್ತಡವನ್ನು ಸೃಷ್ಟಿಸಿತು. ಅದರ ಪರಿಣಾಮವೇ, ಕೇಂದ್ರ ಸರ್ಕಾರ ದೇಶಾದ್ಯಂತ ಮಹಿಳೆಯರ ಸುರಕ್ಷತೆ ಹೆಚ್ಚಿಸಲು ನಿರ್ಭಯಾ ನಿಧಿಯನ್ನು ಸ್ಥಾಪಿಸಿತು. ಈ ನಿಧಿಯನ್ನು ಬಳಸಿಕೊಂಡು ಮಹಿಳಾ ಸುರಕ್ಷತೆಯನ್ನು ಬಲ ಪಡಿಸಬೇಕಿದ್ದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ಉದ್ದೇಶದಲ್ಲಿ ಬಹುತೇಕ ವಿಫಲವಾಗಿದ್ದು, ಕೇಂದ್ರ ಸರ್ಕಾರ ನೀಡಿದ ಮಾಹಿತಿಯಿಂದಲೇ ಸ್ಪಷ್ಟಗೊಂಡಿದೆ.

ಮಹಾರಾಷ್ಟ್ರ, ಮಣಿಪುರ, ತ್ರಿಪುರಾ, ಮೇಘಾಲಯ, ಸಿಕ್ಕಿಂ, ಕೇಂದ್ರಾಡಳಿತ ಪ್ರದೇಶಗಳಾದ ದಮನ್ ಮತ್ತು ದಿಯು ನಿರ್ಭಯಾ ನಿಧಿಯಲ್ಲಿ 2013ರಿಂದ ಈವರೆಗೆ ಒಂದು ರೂಪಾಯಿಯನ್ನೂ ಬಳಸಿಲ್ಲ ಎಂಬುದು ಕಟುವಾಸ್ತವ. ಕರ್ನಾಟಕದ ವಿಷಯಕ್ಕೆ ಬಂದರೆ, ಮಂಜೂರು ಮಾಡಲಾದ -ಠಿ; 191.72 ಕೋಟಿಯಲ್ಲಿ ಕೇವಲ -ಠಿ; 13.62 ಕೋಟಿ ಬಳಸಲಾಗಿದೆ. ಅಲ್ಲದೆ, ಕರ್ನಾಟಕದಲ್ಲಿ ಸ್ಥಾಪಿಸಲಾಗಿದ್ದ ನಿರ್ಭಯಾ ಸಹಾಯವಾಣಿಯೂ ನಿಷ್ಕ್ರಿಯವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ದೆಹಲಿಗೆ ನೀಡಲಾಗಿದ್ದ -ಠಿ; 3.90 ಕೋಟಿ ನಿಧಿಯಲ್ಲಿ -ಠಿ; 19.41 ಲಕ್ಷ ಬಳಕೆ ಆಗಿದೆ. ಉತ್ತರಪ್ರದೇಶದಲ್ಲಿ -ಠಿ; 119.39 ಕೋಟಿ ಪೈಕಿ -ಠಿ; 1.93 ಲಕ್ಷ ಬಳಸಲಾಗಿದೆ. ನಿಧಿಯಿದ್ದರೂ ಅದನ್ನು ಬಳಸಲು ಯಾಕೆ ಉದಾಸೀನ? ಮಹಿಳಾ ಸುರಕ್ಷತೆ ನಿಟ್ಟಿನಲ್ಲಿ ಈಗ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಹೊಸ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ. ಆ ನಿಟ್ಟಿನಲ್ಲಿ ನಿಧಿ ಸದ್ಬಳಕೆ ಮಾಡಿಕೊಳ್ಳಬಹುದಿತ್ತು. ಇಂಥ ಕಾರ್ಯಕ್ರಮಗಳನ್ನೂ ಹತ್ತರಲ್ಲಿ ಒಂದು ಯೋಜನೆ ಎಂಬಂತೆ ಪರಿಗಣಿಸಿದ ಪರಿಣಾಮವೇ ಇಂದಿನ ಸ್ಥಿತಿ. ಹೈದರಾಬಾದ್​ನಲ್ಲಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಬೆಚ್ಚಿಬೀಳಿಸಿದೆ. ಇನ್ನಾದರೂ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಎಚ್ಚೆತ್ತುಕೊಂಡು, ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ. ನಿರ್ಭಯಾ ನಿಧಿ ಸದ್ಬಳಕೆಯಾಗಲಿ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...