PHOTO: ಪ್ರವಾಹಪೀಡಿತ ಪ್ರದೇಶಗಳಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಪರಿಶೀಲನೆ: ಸ್ಥಳೀಯರಿಂದ ಅಹವಾಲು ಸ್ವೀಕಾರ

ಬೆಳಗಾವಿ: ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ಬೆಳಗಾವಿಗೆ ಆಗಮಿಸಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಪ್ರವಾಹಪೀಡಿತ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿದ್ದರು.

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಹಾಗೂ ಜಿಲ್ಲಾಧಿಕಾರಿ ಡಾ. ಎಸ್​.ಬಿ. ಬೊಮ್ಮನಹಳ್ಳಿ ಅವರ ಜತೆ ಕಾಲ್ನಡಿಗೆಯಲ್ಲಿ ಸಾಗಿ ಹೋದ ಕೇಂದ್ರ ಸಚಿವರು ಸ್ಥಳೀಯರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ದಾಮಣೆ ರಸ್ತೆಯಲ್ಲಿ ಸೇರಿದ್ದ ನೂರಾರು ಜನರು ಕೇಂದ್ರ ಸಚಿವರಿಗೆ ನೇರವಾಗಿ ತಮ್ಮ ಸಮಸ್ಯೆಗಳನ್ನು ತೊಂದರೆಗಳನ್ನು ಹೇಳಿಕೊಂಡರು. ತಮಗೆ ಸೂಕ್ತ ಪರಿಹಾರ ಕೊಡಿಸುವಂತೆ ಮನವಿ ಮಾಡಿಕೊಂಡರು.

Leave a Reply

Your email address will not be published. Required fields are marked *