More

    ಪೆಟ್ರೋಲ್, ಡಿಸೇಲ್ ಬೆಲೆ ಇಳಿಯಬೇಕಾದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಚರ್ಚಿಸಬೇಕಿದೆ: ನಿರ್ಮಲಾ ಸೀತಾರಾಮನ್

    ನವದೆಹಲಿ: ತೈಲ ಬೆಲೆ ಇಳಿಕೆ ಸಂಬಂಧ ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ‘ಈ ವಿಷಯದಲ್ಲಿ ನಾವು ಧರ್ಮ ಸಂಕಟಕ್ಕೆ ಸಿಲುಕಿದ್ದೇವೆ’ ಎಂದು ಹೇಳಿದ್ದರು. ಈ ಬಗ್ಗೆ ಸಾಕಷ್ಟು ಪರ ವಿರೋಧದ ಚರ್ಚೆ ನಡೆದಿತ್ತು.

    ತೈಲ ಬೆಲೆ ಇಳಿಕೆ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮತ್ತೆ ಮಾತನಾಡಿರುವ ಸೀತಾರಾಮನ್ ಅವರು, ‘ಬೆಲೆ ಇಳಿಕೆ ವಿಚಾರದಲ್ಲಿ ಕೆಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಮುಕ್ತ ಚರ್ಚೆ ನಡೆಸಬೇಕು’ ಎಂದು ಸಲಹೆ ನೀಡಿದ್ದಾರೆ. ‘ಪೆಟ್ರೋಲ್, ಡಿಸೇಲ್ ಮೇಲೆ ಕೇವಲ ಕೇಂದ್ರ ಸರ್ಕಾರ ಮಾತ್ರ ತೆರಿಗೆ ವಿಧಿಸುವುದಿಲ್ಲ. ರಾಜ್ಯ ಸರ್ಕಾರಗಳೂ ವಿಧಿಸುತ್ತವೆ. ಶೇ 41 ರಷ್ಟು ಪಾಲು ತೆರಿಗೆ ಸಂಗ್ರಹ ರಾಜ್ಯಗಳಿಗೆ ಹೋಗುತ್ತದೆ’ ಎಂದಿದ್ದಾರೆ.

    ಆದರೆ ಈ ವಿಷಯದ ಬಗ್ಗೆ ರಾಜ್ಯ ಸರ್ಕಾರಗಳೊಂದಿಗೆ ಯಾವುದೇ ಮಾತುಕತೆ ಅಥವಾ ಚರ್ಚೆಯಾಗಿಲ್ಲ ಎಂಬೂದನ್ನೂ ಅವರು ಹೇಳಿದ್ದಾರೆ.

    ಈ ಹಿಂದೆ ‘ಪೆಟ್ರೋಲ್, ಡಿಸೇಲ್ ದರ ಏರಿಕೆ ಬಗ್ಗೆ ಜನರಿಗೆ ಎಷ್ಟೇ ಸತ್ಯಾಂಶಗಳನ್ನು ಹೇಳಿದರೂ ಸದ್ಯ ಅದು ಯಾರಿಗೂ ಮನವರಿಕೆಯಾಗುವುದಿಲ್ಲ. ಆದರೆ, ಇಂಧನ ದರ ಇಷ್ಟು ಪ್ರಮಾಣದಲ್ಲಿ ಏರಿಕೆ ಕಂಡಿರುವುದು ಬೇಸರದ ಸಂಗತಿಯಾಗಿದೆ. ಮುಂದಿನದ ದಿನಗಳಲ್ಲಿ ಬೆಲೆ ಕುಸಿತವೇ ಇದಕ್ಕೆ ಉತ್ತರವಾಗಬೇಕಿದೆ. ಸದ್ಯ ನಾವು ಧರ್ಮಸಂಕಟದಲ್ಲಿ ಸಿಲುಕಿದ್ದೇವೆ’ ಎಂದು ಹಣಕಾಸು ಸಚಿವೆ ಹೇಳಿದ್ದರು.

    10 ಲಕ್ಷ ಜನರಿಗೆ ಒಟ್ಟು 1,500 ಕೋಟಿ ರೂ. ಮೋಸ; ಬೆಂಗಳೂರಿನ ಕಂಪನಿಯ 24 ಜನರನ್ನು ಬಂಧಿಸಿದ ಸೈಬರಾಬಾದ್ ಪೊಲೀಸರು

    ಆತಂಕವಾದ, ಹಿಂಸಾಚಾರ ಹರಡುತ್ತಿರುವವರಲ್ಲಿ ಸುಶಿಕ್ಷಿತರೂ ಇದ್ದಾರೆ : ಮೋದಿ ಕಳವಳ

    ಪೆಟ್ರೋಲ್ ದರ ಏರಿಕೆ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏನ್ ಹೇಳಿದ್ದಾರೆ ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts