More

    ಕಳೆದ ಆರು ವರ್ಷಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗಾಗಿ ಮೋದಿ ಸರ್ಕಾರ ಖರ್ಚು ಮಾಡಿದ್ದು 50 ಲಕ್ಷ ಕೋಟಿ ರೂ.: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​

    ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 6 ವರ್ಷಗಳಲ್ಲಿ ಮೂಲಸೌಕರ್ಯಗಳಿಗಾಗಿಯೇ 50 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಸುದ್ದಿಗೋಷ್ಠಿಯಲ್ಲಿ ಹೇಳಿದರು.

    ಪ್ರಧಾನಿ ನರೇಂದ್ರ ಮೋದಿಯವರು ಸ್ವಾತಂತ್ರ್ಯೋತ್ಸವದಂದು ದೇಶದ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಕಾರ್ಯಪಡೆ ರಚಿಸುವ ಬಗ್ಗೆ ಮಾತನಾಡಿದ್ದನ್ನು ಉಲ್ಲೇಖಿಸಿ, ಮೂಲಸೌಕರ್ಯ ಅಭಿವೃದ್ಧಿಗಾಗಿ ರಚಿಸಲಾಗಿದ್ದ ಕಾರ್ಯಪಡೆ ನಾಲ್ಕು ತಿಂಗಳ ಅಲ್ಪಾವಧಿಯಲ್ಲಿ 70 ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಇಂದು 102 ಲಕ್ಷ ಕೋಟಿ ರೂಪಾಯಿ ಮೌಲ್ಯದ ಯೋಜನೆಯನ್ನು ಗುರುತಿಸಿದೆ. ಇನ್ನು ಕೆಲವೇ ವಾರಗಳಲ್ಲಿ ಮತ್ತೆ 3 ಲಕ್ಷ ಕೋಟಿ ರೂಪಾಯಿಯ ಯೋಜನೆಯೊಂದು ಇದಕ್ಕೆ ಸೇರಲಿದೆ. 18 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ವ್ಯಾಪಿಸಿರುವ ಈ ಯೋಜನೆಗಳು 21 ಸಚಿವಾಲಯಕ್ಕೆ ಸಂಬಂಧಪಟ್ಟಿವೆ ಎಂದು ತಿಳಿಸಿದ್ದಾರೆ.

    ಅಲ್ಲದೆ ಈ 102 ಲಕ್ಷ ಕೋಟಿ ರೂಪಾಯಿ ವೆಚ್ಚದ ರಾಷ್ಟ್ರೀಯ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳು 2025ರ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್​ ಡಾಲರ್​​ಗೆ ತಲುಪಲು ಸಹಕಾರಿಯಾಗುತ್ತವೆ ಎಂದಿದ್ದಾರೆ.​

    ವಿದೇಶೀ ಹೂಡಿಕೆಯನ್ನು ಉತ್ತೇಜನ ಮಾಡುವ ಬಗ್ಗೆ ಮಾತನಾಡಿದ ನಿರ್ಮಲಾ ಸೀತಾರಾಮನ್​, 2020ನೇ ವರ್ಷದ ದ್ವಿತೀಯಾರ್ಧದಲ್ಲಿ ಜಾಗತಿಕ ಹೂಡಿಕೆದಾರರ ಸಭೆಯನ್ನು ಆಯೋಜಿಸಲಾಗುವುದು ಎಂದು ಹೇಳಿದರು.

    ರಾಷ್ಟ್ರೀಯ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳು ಮುಂದಿನ ಐದು ವರ್ಷಗಳಲ್ಲಿ ಪೂರ್ತಿಯಾಗಿ ಅನುಷ್ಠಾನಗೊಳ್ಳುತ್ತವೆ. ದೇಶದಲ್ಲಿ ಇದೇ ಮೊದಲಬಾರಿಗೆ ಇನ್​ಫ್ರಾಸ್ಟ್ರಕ್ಚರ್​ ಅಭಿವೃದ್ಧಿ ಚಾಲನೆಯಲ್ಲಿರುವುದು ಎಂದು ನಿರ್ಮಲಾ ಸೀತಾರಾಮನ್​ ಹೇಳಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts