More

    ಅಮೆರಿಕಾದಲ್ಲಿ 8 ಕೋಟಿ ರೂ ವೆಚ್ಚದ ಕಾಲಭೈರವೇಶ್ವರ ದೇಗುಲ ನಿರ್ಮಾಣ; ನಿರ್ಮಲಾನಂದ ಶ್ರೀಗಳಿಂದ ಕಾಮಗಾರಿ ಪರಿಶೀಲನೆ

    ಅಮೆರಿಕ: ಅಮೆರಿಕದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ಶಿಪ್ ನಲ್ಲಿ ಶ್ರೀ ಆದಿ ಚುಂಚನಗಿರಿ ಮಠದ ವತಿಯಿಂದ 8 ಕೋಟಿ ರೂ ವೆಚ್ಚದಲ್ಲಿ ಶ್ರೀ ಕಾಲಭೈರವೇಶ್ವರ ದೇಗುಲ ನಿರ್ಮಾಣವಾಗುತ್ತಿದ್ದು, ಮಠಾಧಿಪತಿಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು ಕಾಮಗಾರಿ ಪರಿಶೀಲಿಸಿದ್ದಾರೆ.

    ಶ್ರೀಗಳು ದೇಗುಲ ಕಾಮಗಾರಿ ಪರಿಶೀಲನೆಗಾಗಿ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆದಿ ಚುಂಚನಗಿರಿ ಮಹಾಸಂಸ್ಥಾನ ಈ ಟೌನ್ಶಿಪ್​​ನಲ್ಲಿ 20 ಎಕರೆ ಜಮೀನು ಖರೀದಿಸಿದೆ. ಇಲ್ಲಿ ನಿರ್ಮಾಣ ಆಗುತ್ತಿರುವ 5000 ಚದರ ಮೀಟರ್ ಕಟ್ಟಡದಲ್ಲಿ ಯೋಗ, ಧ್ಯಾನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಉದ್ದೇಶ ಹೊಂದಿದೆ.

    ಇದನ್ನೂ ಓದಿ: ಮಳೆಗಾಲದಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದರೆ ಈ ಸ್ಥಳ ಬೆಸ್ಟ್

    ಮೊದಲ ಹಂತದಲ್ಲಿ ದೇವಾಲಯ, ಅರ್ಚಕರ ನಿವಾಸ ನಿರ್ಮಾಣವಾಗಲಿದೆ. ಡಾ. ಅಮರನಾಥಗೌಡ, ಡಾ. ಬಾಬು ಕಿಲಾರ ಅವರ ಮುಂದಾಳತ್ವದಲ್ಲಿ ಈ ಕಾಮಗಾರಿಗಳು ಆರಂಭವಾಗಿವೆ. ಸುಮಾರು 10 ಮಿಲಿಯನ್ ಡಾಲರ್ (8 ಕೋಟಿ ರೂ.) ಮೊತ್ತದ ಯೋಜನೆ ಇದಾಗಿದೆ. ಕಿಲಾರ ಅವರು ದೇವಾಲಯದ ವಿನ್ಯಾಸ, ಪರಿಸರ ಇಲಾಖೆ ಅನುಮತಿ ಮತ್ತು ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

    Nirmalanathananda sri

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts