ಆಸ್ಪತ್ರೆಗೆ ತೆರಳಿ ಮಾಜಿ ಸಿಎಂ ಕುಮಾರಸ್ವಾಮಿಯ ಯೋಗಕ್ಷೇಮ ವಿಚಾರಿಸಿದ್ರು ನಿರ್ಮಲಾನಂದನಾಥ ಸ್ವಾಮೀಜಿ

HDK Nirmalanandanatha
Published on

ಬೆಂಗಳೂರು: ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿಯವರನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ, ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದಾರೆ.

ಇಂದು ಮಣಿಪಾಲ್ ಆಸ್ಪತ್ರೆಯಲ್ಲಿ ಕುಮಾರಸ್ವಾಮಿಯವರನ್ನು ಭೇಟಿಯಾದ ಸ್ವಾಮೀಜಿ, ಶೀಘ್ರ ಗುಣಮುಖರಾಗಿ ಮತ್ತೆ ಎಂದಿನಂತೆ ಜನಸೇವೆಯಲ್ಲಿ ತೊಡಗಿಕೊಳ್ಳುವಂತಾಗಲಿ ಎಂದು ಎಚ್​ಡಿಕೆಗೆ ಹಾರೈಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುರುಕಿನ ಚಟುವಟಿಕೆ ಹಾಗೂ ಪ್ರಚಾರಾರ್ಥವಾಗಿ ಭಾರಿ ಸುತ್ತಾಟದಲ್ಲಿ ತೊಡಗಿಕೊಂಡಿದ್ದ ಕುಮಾರಸ್ವಾಮಿಯವರಿಗೆ ಜ್ವರ ಹಾಗೂ ಬಳಲಿಕೆ ಕಂಡುಬಂದ ಹಿನ್ನೆಲೆಯಲ್ಲಿ ಅವರು ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net