

ಮಂಗಳೂರು: ನೀರುಮಾರ್ಗ ಗ್ರಾಮ ಪಂಚಾಯಿತಿ ವತಿಯಿಂದ ಶನಿವಾರ ಗ್ರಾಮಪಂಚಾಯಿತಿ ವ್ಯಾಪ್ತಿಯ ರಸ್ತೆ ಬದಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ತ್ಯಾಜ್ಯ ಸಂಗ್ರಹಿಸಿ ಸ್ವಚ್ಚತೆ ಕಾಪಾಡುವ ದೃಷ್ಟಿಯಿಂದ ಬೃಹತ್ ಸ್ವಚ್ಚತಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸ್ವಚ್ಚತಾ ಕಾರ್ಯದ ವೇಳೆ ರಸ್ತೆ ಬದಿ ಎಸೆದ ಕಸದ ಮೂಟೆಯಲ್ಲಿ ಕೆಲವೊಂದು ಬಿಲ್ ಗಳು ಹಾಗೂ ಆನ್ ಲೈನ್ ನಿಂದ ಖರೀದಿಸಿದ ವಸ್ತುಗಳ ಕವರ್‌ಗಳು ಸಿಕ್ಕಿದ್ದು, ಅದರಲ್ಲಿನ ವಿಳಾಸವನ್ನು ಪತ್ತೆ ಹಚ್ಚಿ ಸಂಬಂಧಪಟ್ಟವರಿಂದ ಸುಮಾರು 5000 ರೂ. ದಂಡ ವಸೂಲಿ ಮಾಡಲಾಯಿತು.
ಈ ಸ್ವಚ್ಚತಾ ಕಾರ್ಯದಲ್ಲಿ ಗ್ರಾ.ಪಂ ಅಧ್ಯಕ್ಷ ಶ್ರೀಧರ್, ಗ್ರಾಮ ಪಂಚಾಯಿತಿ ಸದಸ್ಯರುಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸಿ ಅಪ್ಪಣ್ಣ, ಸಹಾಯಕ ನಿರ್ದೇಶಕ ಮಹೇಶ್ ಅಂಬೇಕಲ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬೂಬಕ್ಕರ್, ಕಾರ್ಯದರ್ಶಿ ಮತ್ತು ಗ್ರಾ.ಪಂ ಸಿಬ್ಬಂದಿ ಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.