ದಿಗಂತ್ ಜತೆ ನಿರೂಪ್; ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟನೆ

nirup
Published on

ಬೆಂಗಳೂರು: ದಿಗಂತ್ ನಾಯಕನಾಗಿರುವ ವಿಭಿನ್ನ ಪರಿಕಲ್ಪನೆಯ ಚಿತ್ರ ‘ಎಡಗೈಯೇ ಅಪಘಾತಕ್ಕೆ ಕಾರಣ’. ಸಮರ್ಥ್ ಬಿ. ಕಡಕೊಳ್ ಚೊಚ್ಚಲ ಬಾರಿಗೆ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ‘ಅಂಬಿ ನಿಂಗ್ ವಯಸ್ಸಾಯ್ತೋ’ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ ಜತೆ ಸೇರಿ ನಿರ್ಮಿಸುತ್ತಿದ್ದಾರೆ.

ಚಿತ್ರದಲ್ಲಿ ದಿಗಂತ್‌ಗೆ ಧನು ಹರ್ಷ ನಾಯಕಿಯಾಗಿದ್ದು, ರಾಧಿಕಾ ನಾರಾಯಣ್ ಮತ್ತು ನಿಧಿ ಸುಬ್ಬಯ್ಯ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಇದೀಗ ‘ರಂಗಿತರಂಗ’, ‘ರಾಜರಥ’, ‘ವಿಕ್ರಾಂತ್ ರೋಣ’ ಚಿತ್ರಗಳ ಖ್ಯಾತಿಯ ನಟ ನಿರೂಪ್ ಭಂಡಾರಿ ಸಹ ಚಿತ್ರತಂಡ ಸೇರಿಕೊಂಡಿದ್ದಾರೆ. ಅವರು ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಮರ್ಷಿಯಲ್ ಚಿತ್ರಗಳ ನಡುವೆ ವಿಭಿನ್ನ ಕಾನ್ಸೆಪ್ಟ್ ಚಿತ್ರದ ಕಥೆ ಕೇಳಿ ನಿರೂಪ್ ನಟಿಸಲು ಒಪ್ಪಿಕೊಂಡರಂತೆ.

ಚಿತ್ರದ ಶೀರ್ಷಿಕೆಯೇ ಹೇಳುವಂತೆ ಇದು ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಸುತ್ತುವ ಸಿನಿಮಾ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net