

ಆಂಧ್ರಪ್ರದೇಶ: ತೆಲುಗು ಚಿತ್ರರಂಗದ ನಟ ನಿತಿನ್ ಮತ್ತು ಶ್ರೀಲೀಲಾ ಜೋಡಿಯಾಗಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ 'ಎಕ್ಸ್ಟ್ರಾ ಆರ್ಡಿನರಿ ಮ್ಯಾನ್' ಚಿತ್ರದ ಫಸ್ಟ್ ಸಿಂಗಲ್ ಪ್ರೋಮೋ ಬಿಡುಗಡೆಗೊಂಡಿದ್ದು, ಸಿನಿಪ್ರಿಯರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.
'ಎಕ್ಸ್ಟ್ರಾ ಆರ್ಡಿನರಿ ಮ್ಯಾನ್' ಚಿತ್ರವನ್ನು ವಕ್ಕಂತಂ ವಂಶಿ ನಿರ್ದೇಶಿಸಿದ್ದು, ಸ್ಯಾಂಡಲ್ವುಡ್ ನಟಿ ಶ್ರೀಲೀಲಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಇತ್ತೀಚೆಗಷ್ಟೇ ನಿರ್ಮಾಪಕರು ಚಿತ್ರದ ಮೊದಲ ಸಿಂಗಲ್ 'ಡೇಂಜರ್ ಪಿಲ್ಲಾ' ಸಾಂಗ್ನ ಪ್ರೋಮೋವನ್ನು ಬಿಡುಗಡೆಗೊಳಿಸಿದ್ದಾರೆ. ಹಾಡಿಗೆ ಸಾಹಿತ್ಯವನ್ನು ಕೃಷ್ಣಕಾಂತ್ ಬರೆದಿದ್ದು, ಬಾಲಿವುಡ್ ಗಾಯಕ ಅರ್ಮಾನ್ ಮಲಿಕ್ ಹಾಡಿದ್ದಾರೆ. ಸಾಂಗ್ನಲ್ಲಿ ನಿತಿನ್-ಶ್ರೀಲೀಲಾ ಜೋಡಿ ಪ್ರೇಕ್ಷಕರನ್ನು ಮೋಡಿ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಆದಿತ್ಯ ಮೂವೀಸ್ ಮತ್ತು ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ಎಕ್ಸ್ಟಾ ಆರ್ಡಿನರಿ ಮ್ಯಾನ್ ಚಿತ್ರ ತೆರೆ ಮೇಲೆ ಬರಲು ಸಜ್ಜಾಗಿದ್ದು, ಚಿತ್ರವನ್ನು ಡಿಸೆಂಬರ್ 23, 2023 ರಂದು ಬಹುತೇಕ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ಧರಿಸಿದೆ ಎಂದು ಹೇಳಲಾಗಿದೆ,(ಏಜೆನ್ಸೀಸ್).