More

    ಲಡಾಖ್‌ಗೆ ಹೊಸ ವರ್ಷದ ಉಡುಗೊರೆ ನೀಡಿದ ಗಡ್ಕರಿ: 29 ಹೊಸ ರಸ್ತೆ ಅಭಿವೃದ್ಧಿಗೆ 1352 ಕೋಟಿ ರೂ.ವೆಚ್ಚ!

    ನವದೆಹಲಿ: ಲಡಾಖ್‌ನಲ್ಲಿ 1,170 ಕೋಟಿ ರೂ. ವೆಚ್ಚದಲ್ಲಿ 29 ರಸ್ತೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ಯೋಜನೆಯು ಹೆದ್ದಾರಿ, ಪ್ರಮುಖ ಮತ್ತು ಜಿಲ್ಲಾ ರಸ್ತೆಗಳ ಅಭಿವೃದ್ಧಿಯನ್ನು ಒಳಗೊಂಡಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿ, ಲಡಾಖ್ ಅತಿದೊಡ್ಡ ಭೂಭಾಗ ಹೊಂದಿದ ಕೇಂದ್ರಾಡಳಿತ ಪ್ರದೇಶ ಮತ್ತು ಭಾರತದಲ್ಲಿ ಎರಡನೇ ಕಡಿಮೆ ಜನಸಂಖ್ಯೆಯನ್ನು ಹೊಂದಿದೆ, ಅನುಮೋದಿತ ಯೋಜನೆಗಳ ಮೂಲಕ ದೂರದ ಹಳ್ಳಿಗಳಿಗೆ ಉತ್ತಮ ಸಂಪರ್ಕವನ್ನು ಸಾಧಿಸುತ್ತದೆ ಎಂದು ಟ್ವೀಟ್​ ಮಾಡಿದ್ದಾರೆ.

    ಇದನ್ನೂ ಓದಿ: ಅಮೆರಿಕದಲ್ಲಿ ಭಾರತೀಯ ಮೂಲದ ಕುಟುಂಬ ದುರಂತ ಅಂತ್ಯ: 41 ಕೋಟಿ ರೂ.ಬಂಗಲೆಯಲ್ಲಿ ಮೂವರ ಶವ ಪತ್ತೆ!
    ಲಡಾಖ್​ನಲ್ಲಿ ಈ ಬೆಳವಣಿಗೆಯು ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುವ ನಿರೀಕ್ಷೆಯಿದೆ, ವಿಶೇಷವಾಗಿ ಕೃಷಿ ಮತ್ತು ಪ್ರವಾಸೋದ್ಯಮದಲ್ಲಿ ಬದಲಾವಣೆಗೆ ಸಹಕಾರಿಯಾಗುತ್ತದೆ. ಇದು ಲಡಾಖ್‌ನ ಒಟ್ಟಾರೆ ಮೂಲಸೌಕರ್ಯ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದು ಅವರು ಹೇಳಿದ್ದಾರೆ.

    ಹಿಂದಿನ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ರಸ್ತೆಗಳು, ಗ್ರಾಮೀಣ ರಸ್ತೆಗಳು, ರೈಲ್ವೆ ಕೆಳ ಮತ್ತು ಮೇಲ್ಸೇತುವೆಗಳ ಅಭಿವೃದ್ಧಿ ಮತ್ತು ನಿರ್ವಹಣೆಗಾಗಿ 2000-01 ರಲ್ಲಿ ಕೇಂದ್ರ ರಸ್ತೆ ನಿಧಿ ಯೋಜನೆಯನ್ನು ಪ್ರಾರಂಭಿಸಲಾಯಿತು. ಅದರಂತೆ, ನಿರ್ಮಾಣ ಮತ್ತು ನವೀಕರಣಕ್ಕಾಗಿ ಕೇಂದ್ರೀಯ ರಸ್ತೆ ಮತ್ತು ಮೂಲಸೌಕರ್ಯ ನಿಧಿಯ (ಸಿಆರ್​ಎಫ್​) ಅಡಿಯಲ್ಲಿ ಸಂಪನ್ಮೂಲಗಳನ್ನು ವಿನಿಯೋಗಿಸಲಾಗುತ್ತಿದೆ. ಹೆಚ್ಚುವರಿಯಾಗಿ, ಸಚಿವರು 2023-24ನೇ ಹಣಕಾಸು ವರ್ಷಕ್ಕೆ ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಯೋಜನೆಯಡಿ 8 ಸೇತುವೆಗಳಿಗೆ ಅಂದಾಜು 182 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ.

    ಲಡಾಖ್ ಹಸಿರು ಶಕ್ತಿ ಕಾರಿಡಾರ್:  ಅಕ್ಟೋಬರ್‌ನಲ್ಲಿ ಕೇಂದ್ರ ಸಚಿವ ಸಂಪುಟವು ಲಡಾಖ್‌ನಲ್ಲಿರುವ 13 ಜಿಡಬ್ಲ್ಯೂ ನವೀಕರಿಸಬಹುದಾದ ಇಂಧನ ಯೋಜನೆಗೆ ಅನುಕೂಲವಾಗುವಂತೆ ಗ್ರೀನ್ ಎನರ್ಜಿ ಕಾರಿಡಾರ್ (ಜಿಇಎಸ್​) ಹಂತ-II ಮತ್ತು ಅಂತರ-ರಾಜ್ಯ ಪ್ರಸರಣ ವ್ಯವಸ್ಥೆ (ಐಎಸ್​ಟಿಎಸ್​) ಅನುಷ್ಠಾನಕ್ಕೆ ಅನುಮೋದನೆ ನೀಡಿತ್ತು. 2029-30 ರ ಆರ್ಥಿಕ ವರ್ಷದಲ್ಲಿ ಇದನ್ನು ಪೂರ್ಣಗೊಳಿಸಲು ಯೋಜಿಸಲಾಗಿದ್ದು, ಅಂದಾಜು 20,773.70 ಕೋಟಿ ರೂ.ವೆಚ್ಚವಾಗಲಿದೆ.

    50ರೂ.ಗೆ ಕೋಳಿ ಬೇಕಾ? ಮೊಟ್ಟೆ ಬೇಕಾ ಆಫರ್​..ಆಸೆಗೆ ಬಿದ್ದು 50ಸಾವಿರ ಕಳೆದುಕೊಂಡ ವೃದ್ಧ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts