More

    ಉದ್ಯೋಗ ಸೃಷ್ಟಿಗೆ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಸಹಕಾರಿಯಾಗಲಿದೆ; ನಿತಿನ್ ಗಡ್ಕರಿ

    ಮಂಡ್ಯ: ಹೆದ್ದಾರಿ ನಿರ್ಮಾಣದ ವೇಳೆ ಹಳೆ ರಸ್ತೆಗಳನ್ನು ದುರಸ್ತಿಗೊಳಿಸುವ ಕೆಲಸ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ತಮಿಳುನಾಡಿನ ವರೆಗೂ ಹೆದ್ದಾರಿ ನಿರ್ಮಾಣವಾಗಲಿದೆ. 8 ಕಿ.ಮೀ. ಎಲಿವೇಟೆಡ್ ನಿರ್ಮಾಣ ಮಾಡಿದ್ದೇವೆ. ಉದ್ಯೋಗ ಸೃಷ್ಟಿಗೆ ಈ ಹೆದ್ದಾರಿ ಸಹಕಾರಿಯಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು.

    ಇದನ್ನೂ ಓದಿ: ಮೈ-ಬೆಂ ಹೆದ್ದಾರಿ ನಿರ್ಮಾಣದ ಕ್ರೆಡಿಟ್ ಪಾಲಿಟಿಕ್ಸ್ ವಿಚಾರ: ಜ್ಯೋತಿಷಿ ಕತೆ ಹೇಳಿ ಸುಮಲತಾ ತಿರುಗೇಟು

    ನೂತನವಾಗಿ ನಿರ್ಮಾಣವಾಗಿರುವ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ಮೋದಿ ಇಂದು ಲೋಕಾರ್ಪಣೆಗೊಳಿಸಿದ್ದಾರೆ. 8,479 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸುಮಾರು 118 ಕಿ.ಮೀ ಉದ್ದದ ಮೈ-ಬೆಂ ದಶಪಥ ಹೆದ್ದಾರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾತನಾಡುತ್ತಾ, ಈ ಹೊಸ ರಸ್ತೆಯಿಂದ ಬೆಂಗಳೂರಿನಿಂದ ಮೈಸೂರಿಗೆ 1 ಗಂಟೆಯಲ್ಲಿ ಪ್ರಯಾಣ ಸಾಧ್ಯವಾಗಲಿದೆ. ಬೆಂಗಳೂರಿನಲ್ಲಿ 17,000 ಕೋಟಿ ರೂ.ಗಳ ವರ್ತುಲ ರಸ್ತೆ ನಿರ್ಮಾಣವಾಗಲಿದ್ದು, ಇದು ಮೈಸೂರಿಗೆ ನೇರ ಪ್ರಯಾಣಕ್ಕೆ ನೆರವಾಗಲಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts