25.7 C
Bangalore
Sunday, December 15, 2019

ಇನ್ನು ರೈಲು ನಿಲ್ದಾಣ, ಏರ್​ಪೋರ್ಟ್​ಗಳಲ್ಲಿ ಮಣ್ಣಿನ ಲೋಟದಲ್ಲಿ ಚಹಾ ಮಾರಾಟ: ನಿತಿನ್​ ಗಡ್ಕರಿ

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ನವದೆಹಲಿ: ಕುಂಬಾರರಿಗೆ ನೆರವಾಗುವ ಉದ್ದೇಶದಿಂದ ಇನ್ನು ದೇಶದ 100 ರೈಲು ನಿಲ್ದಾಣಗಳಲ್ಲಿ ಮಣ್ಣಿನ ಲೋಟ (ಕುಲ್ಹಾಡ್​)ದಲ್ಲಿ ಚಹಾ ಮತ್ತು ಕಾಫಿ ಮಾರಾಟ ಮಾಡುವುದನ್ನು ಕಡ್ಡಾಯ ಮಾಡಬೇಕು ಕೇಂದ್ರ ಸಚಿವ ನಿತಿನ್​ ಗಡ್ಕರಿ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ.

ರೈಲ್ವೆ ಸಚಿವ ಪಿಯೂಷ್​ ಗೋಯಲ್​ಗೆ ಪತ್ರ ಬರೆದು 100 ರೈಲು ನಿಲ್ದಾಣಗಳಲ್ಲಿ ಮಣ್ಣಿನ ಲೋಟದಲ್ಲಿ ಚಹಾ ನೀಡುವುದನ್ನು ಕಡ್ಡಾಯಗೊಳಿಸಬೇಕು ಎಂದು ಕೋರಿದ್ದೇನೆ. ಭವಿಷ್ಯದಲ್ಲಿ ವಿಮಾನ ನಿಲ್ದಾಣಗಳು, ಬಸ್​ ನಿಲ್ದಾಣಗಳಲ್ಲಿ ರಾಜ್ಯ ಸರ್ಕಾರಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಟೀ ಸ್ಟಾಲ್​ಗಳಲ್ಲಿ ಮಣ್ಣಿನ ಲೋಟದ ಬಳಕೆಯನ್ನು ಕಡ್ಡಾಯಗೊಳಿಸಲು ನಾನು ಸಲಹೆ ನೀಡಿದ್ದೇನೆ. ಇನ್ನು ಮಾಲ್​ಗಳಲ್ಲೂ ಟೀ ಸ್ಟಾಲ್​ಗಳಲ್ಲಿ ಮಣ್ಣಿನ ಲೋಟದಲ್ಲಿ ಟೀ ವಿತರಿಸಲು ಸೂಚಿಸಲಾಗುವುದು ಎಂದು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ನಿತಿನ್​ ಗಡ್ಕರಿ ತಿಳಿಸಿದ್ದಾರೆ.

ಪ್ರಸ್ತುತ ವಾರಾಣಸಿ ಮತ್ತು ರಾಯ್​ಬರೇಲಿ ರೈಲು ನಿಲ್ದಾಣಗಳಲ್ಲಿ ಟೆರ್ರಾಕೋಟದಿಂದ ಮಾಡಿದ ಕುಲ್ಹಾಡ್​, ಲೋಟಗಳು ಮತ್ತು ತಟ್ಟೆಗಳನ್ನು ಬಳಕೆ ಮಾಡಲಾಗುತ್ತಿದೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವಾಲಯ ಕುಂಬಾರಿಕೆಗೆ ಉತ್ತಜೇನ ನೀಡಲು ಸಾಕಷ್ಟು ಯೋಜನೆಗಳನ್ನು ರೂಪಿಸಿಕೊಂಡಿದೆ. ಅದರ ಭಾಗವಾಗಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ (ಕೆವಿಐಸಿ) ವತಿಯಿಂದ ಕಳೆದ ವರ್ಷ 10 ಸಾವಿರ ವಿದ್ಯುತ್​ ಚಕ್ರಗಳನ್ನು ಕುಂಬಾರರಿಗೆ ವಿತರಿಸಲಾಗಿತ್ತು. ಈ ವರ್ಷ 25 ಸಾವಿರ ವಿದ್ಯುತ್​ ಚಕ್ರಗಳನ್ನು ವಿತರಣೆ ಮಾಡುವ ಗುರಿ ಹೊಂದಲಾಗಿದೆ.

ಮಣ್ಣಿನ ಲೋಟಗಳ ಬಳಕೆಯನ್ನು ಕಡ್ಡಾಯಗೊಳಿಸುವುದರಿಂದ ಸ್ಥಳೀಯ ಕುಂಬಾರರಿಗೆ ಉದ್ಯೋಗ ದೊರೆಯಲಿದೆ ಮತ್ತು ಪ್ಲಾಸ್ಟಿಕ್​ ಕಪ್​ಗಳಿಗೆ ಬದಲು ಪರಿಸರ ಸ್ನೇಹಿಯಾದ ಇವುಗಳನ್ನು ಬಳಕೆ ಮಾಡಬಹುದಾಗಿದೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಆರ್​ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್​ ಯಾದವ್​ ರೈಲ್ವೆ ಸಚಿವರಾಗಿದ್ದಾಗ ರೈಲು ನಿಲ್ದಾಣ ಮತ್ತು ರೈಲುಗಳಲ್ಲಿ ಮಣ್ಣಿನ ಲೋಟಗಳ ಬಳಕೆಯನ್ನು ಕಡ್ಡಾಯಗೊಳಿಸಿದ್ದರು. ಲೂಲೂ ಯೋಜನೆಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿತ್ತು. (ಏಜೆನ್ಸೀಸ್​)

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...