ಪಾಟ್ನಾ: ಬಿಹಾರ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಿದೆ. ನಿತೀಶ್ ಕುಮಾರ್ ಇದೀಗ ಒಂಬತ್ತನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಅವರು ನಂತರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.
ಇವರೊಂದಿಗೆ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಕೂಡ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿತೀಶ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ಉಪಸ್ಥಿತರಿದ್ದರು.
ಲಖಿಸಾರೈ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿರುವ ವಿಜಯ್ ಸಿನ್ಹಾ ಬಿಹಾರದ ನೂತನ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹಿಂದಿನ ಸರ್ಕಾರದಲ್ಲಿ ಇವರು ಕಾರ್ಮಿಕ ಸಂಪನ್ಮೂಲ ಸಚಿವರಾಗಿದ್ದರು.
ಇನ್ನು ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಸಹ ಬಿಹಾರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸದ್ಯ ಇವರು ಬಿಹಾರ ಬಿಜೆಪಿ ಅಧ್ಯಕ್ಷ. ಸಾಮ್ರಾಟ್ ಚೌಧರಿ ಹಿರಿಯ ನಾಯಕ ಶಕುನಿ ಚೌಧರಿ ಅವರ ಮಗ.
ನಿತೀಶ್ ಕುಮಾರ್ ರಾಜೀನಾಮೆ ನಂತರ ಬಿಹಾರದಲ್ಲಿ ಹೊಸ ಸರ್ಕಾರ ರಚನೆಯಾಗಿದ್ದರೂ, ಇವರು ಮುಖ್ಯಮಂತ್ರಿ ಹುದ್ದೆಯಲ್ಲಿಯೇ ಉಳಿದಿದ್ದಾರೆ. ನಿತೀಶ್ ಕುಮಾರ್ ಅವರು ಭಾನುವಾರ (ಜನವರಿ 28) ಸಂಜೆ ಒಂಬತ್ತನೇ ಬಾರಿಗೆ ಬಿಹಾರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಚಿರಾಗ್ ಪಾಸ್ವಾನ್, ಜಿತನ್ ರಾಮ್ ಮಾಂಝಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಅನೇಕ ದೊಡ್ಡ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.
ಬಿಹಾರದ ಕದನದ ನಡುವೆ ಲಾಲು ಯಾದವ್ ಮಗಳು ‘ಕಸ’ ಎಂದು ಕರೆದದ್ದು ಯಾರಿಗೆ, ಇತರರು ಹೇಳಿದ್ದೇನು?
ಉಪ ಮುಖ್ಯಮಂತ್ರಿ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ ಯಾರು..ಇವರ ಹಿನ್ನೆಲೆ ಏನು?