20.4 C
Bangalore
Monday, December 9, 2019

ಎರಡು ದಿನದಲ್ಲಿ ಎನ್‌ಐಟಿಕೆ ಟೋಲ್ ದರ ಏರಿಕೆ ಸಾಧ್ಯತೆ

Latest News

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

ಮೊದಲ ಹಂತದ ಮತ ಎಣಿಕೆ ಶಿವರಾಮ ಹೆಬ್ಬಾರಗೆ 5004 ಮತ ಮುನ್ನಡೆ

ಕಾರವಾರ: ಕುತೂಹಲ ಕೆರಳಿಸಿರುವ ವಿಧಾನಸಭೆಯ 15 ಕ್ಷೇತ್ರಗಳ ಉಪಚುನಾವಣೆಯ ಪೈಕಿ ಯಲ್ಲಾಪುರ ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ. ಮೊದಲ ಹಂತದ ಮತ ಎಣಿಕೆಯಲ್ಲಿ...

«ಚಾಲ್ತಿ ದರದಿಂದ ನಿರ್ವಹಣೆ ಕಷ್ಟ ಎಂದ ಗುತ್ತಿಗೆದಾರ * ಬಸ್ ಮಾಲೀಕರಿಗೆ ದುಬಾರಿ ಆಗಲಿದೆ ಪರಿಷ್ಕರಣೆ»

ವಿಜಯವಾಣಿ ಸುದ್ದಿಜಾಲ ಮಂಗಳೂರು
ಸುರತ್ಕಲ್ ಎನ್‌ಐಟಿಕೆ ಟೋಲ್ ರದ್ದುಪಡಿಸುವ ನಿಟ್ಟಿನಲ್ಲಿ ನವದೆಹಲಿ ಮಟ್ಟದಲ್ಲಿ ಪ್ರಯತ್ನಗಳು ನಡೆಯುತ್ತಿರುವ ಬೆನ್ನಲ್ಲೇ ಇಲ್ಲಿನ ಟೋಲ್ ದರ ಒಂದೆರಡು ದಿನದಲ್ಲಿ ಏರಿಕೆಯಾಗುವ ಸೂಚನೆ ಕಂಡುಬಂದಿದೆ.
ಎನ್‌ಐಟಿಕೆ ಟೋಲ್‌ನ ಹೊಸ ಗುತ್ತಿಗೆದಾರರು ಚಾಲ್ತಿಯಲ್ಲಿರುವ ಟೋಲ್ ದರದಲ್ಲಿ ನಿರ್ವಹಣೆ ಅಸಾಧ್ಯ. ಪ್ರಸ್ತುತ ದಿನಂಪ್ರತಿ (24 ಗಂಟೆ ಅವಧಿ) 9.40 ಲಕ್ಷ ರೂ.ವನ್ನು ಇಲಾಖೆಗೆ ಪಾವತಿಸಬೇಕಿದೆ. ವಾಹನಗಳಿಂದ ಸಂಗ್ರಹವಾಗುವ ಮೊತ್ತ ಎಂಟು ಲಕ್ಷ ರೂ. ದಾಟುತ್ತಿಲ್ಲ. ಆದ್ದರಿಂದ ಟೋಲ್‌ದರ ಏರಿಕೆ ಅನಿವಾರ್ಯ ಎನ್ನುವ ಸೂಚನೆಯನ್ನು ಗುತ್ತಿಗೆದಾರರು ಇಲಾಖೆ ಹಾಗೂ ವಾಹನ ಮಾಲೀಕರ ವಿವಿಧ ಸಂಘಟನೆಗಳಿಗೆ ರವಾನಿಸಿದ್ದಾರೆ.
ಪ್ರಸ್ತುತ ಟೋಲ್ ಮೂಲಕ ಉಚಿತ ಸಂಚಾರ ಅವಕಾಶ ಪಡೆದಿದ್ದ ಸುರತ್ಕಲ್‌ನ 85 ಟೂರಿಸ್ಟ್ ವಾಹನ ಮಾಲೀಕರು ಕೂಡ ಉಚಿತ ಸೌಲಭ್ಯದಿಂದ ವಂಚಿತರಾಗಲಿದ್ದಾರೆ. ಸ್ಥಳೀಯ ಟೂರಿಸ್ಟ್ ವಾಹನ ಮಾಲೀಕರು ಕೂಡ ಇತರ ವಾಹನ ಮಾಲೀಕರಂತೆ ಟೋಲ್ ಪಾವತಿಸಬೇಕು ಎಂದು ಗುತ್ತಿಗೆದಾರರು ಸೂಚಿಸಲಿದ್ದಾರೆ. ಸ್ಥಳೀಯ ಶಾಸಕರ ನೇತೃತ್ವದಲ್ಲಿ ಸ್ಥಳೀಯ ಟೂರಿಸ್ಟ್ ವಾಹನ ಮಾಲೀಕರು ಗುತ್ತಿಗೆದಾರರ ಜತೆ ಮಾತುಕತೆ ನಡೆಯುತ್ತಿದ್ದು, ರಿಯಾಯಿತಿ ಪಾಸ್ ಪಡೆಯುವ ಪ್ರಯತ್ನ ಮುಂದುವರಿದೆ ಎಂದು ಸುರತ್ಕಲ್ ಟೂರಿಸ್ಟ್ ವಾಹನ ಮಾಲೀಕರ ಸಂಘದ ಪದಾಧಿಕಾರಿಯೊಬ್ಬರು ‘ವಿಜಯವಾಣಿ’ಗೆ ತಿಳಿಸಿದ್ದಾರೆ.
ಎಕ್ಸ್‌ಪ್ರೆಸ್ ಬಸ್‌ಗಳಿಗೆ ಪ್ರಸ್ತುತ ಮಾಸಿಕ 5,600 ಹಾಗೂ ಹೊರಗಿನ ಟೂರಿಸ್ಟ್ ವಾಹನಗಳಿಗೆ 300 ರೂ.ನಿಗದಿಪಡಿಸಲಾಗಿದ್ದು, ಇವೆರಡು ವಿಭಾಗದ ವಾಹನಗಳ ಟೋಲ್ ಕೂಡ ಏರಿಕೆಯಾಗಲಿದ್ದು, ನಿಗದಿತ ದರ ಪಟ್ಟಿ ಬಿಡುಗಡೆಯಾಗಿಲ್ಲ. ಟೋಲ್ ದರ ಏರಿಕೆ ಮಾಹಿತಿ ಇದೆ. ಈ ಕುರಿತು ಕೇಂದ್ರ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಯಬೇಕು. ಮತ್ತೆ ಟೋಲ್ ಪರಿಷ್ಕರಣೆ ಬಸ್ ಮಾಲೀಕರಿಗೆ ದುಬಾರಿ ಆಗಲಿದೆ ಎಂದು ಖಾಸಗಿ ಬಸ್ ಮಾಲೀಕರ ಸಂಘದ ರಾಜ್ಯ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಪ್ರತಿಕ್ರಿಯಿಸಿದ್ದಾರೆ.

ಎನ್‌ಐಟಿಕೆ ಟೋಲ್ ದರ ಪರಿಷ್ಕರಣೆ ಆಗುವುದಿಲ್ಲ. ಸದ್ಯ ನಾನು ಶಬರಿಮಲೆ ಯಾತ್ರೆಯಲ್ಲಿದ್ದು, ಮಂಗಳೂರಿಗೆ ಆಗಮಿಸಿದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡುತ್ತೇನೆ.
ನಳಿನ್ ಕುಮಾರ್ ಕಟೀಲ್, ದ.ಕ.ಸಂಸದ

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...