26.8 C
Bangalore
Friday, December 13, 2019

ಸ್ಥಳೀಯರಿಗೆ ಸುಂಕ ಮೂರು ದಿನ ತಡೆ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಸುರತ್ಕಲ್:  ರಾಷ್ಟ್ರೀಯ ಹೆದ್ದಾರಿ 66ರ ಎನ್‌ಐಟಿಕೆ ಟೋಲ್ ಕೇಂದ್ರದಲ್ಲಿ ಸ್ಥಳೀಯ ವಾಹನಗಳ ಮಾಲೀಕರಿಂದ ಸುಂಕ ವಸೂಲಿ ಪ್ರಯತ್ನವನ್ನು ಮೂರು ದಿನ ಮುಂದೂಡಲಾಗಿದೆ.
ಸ್ಥಳೀಯ ವಾಹನಗಳಿಗೆ ನೀಡಲಾಗಿದ್ದ ಟೋಲ್ ವಿನಾಯಿತಿ ರದ್ದುಗೊಳಿಸಿದ್ದ ಗುತ್ತಿಗೆದಾರರು ಮಂಗಳವಾರದಿಂದ ಸುಂಕ ಸಂಗ್ರಹಕ್ಕೆ ನಿರ್ಧರಿಸಿದ್ದರು. ಇದರ ವಿರುದ್ಧ ಹೋರಾಟ ತೀವ್ರ ಸ್ವರೂಪ ಪಡೆಯುವುದನ್ನು ಅರಿತ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಜುಲೈ 18ರವರೆಗೆ ಸ್ಥಳೀಯ ವಾಹನಗಳಿಂದ ಟೋಲ್ ಸಂಗ್ರಹಿಸದಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ದೇಶಿತ ಪ್ರತಿಭಟನೆಯನ್ನೂ ಮುಂದೂಡಲಾಯಿತು.

ಜೈಲಿಗೆ ಹೋಗಲೂ ಸಿದ್ಧ: ಮತ್ತೆ ಟೋಲ್ ಸಂಗ್ರಹ ಆರಂಭಿಸಿದಲ್ಲಿ ಜೈಲಿಗೆ ಹೋಗಲು ಸಿದ್ಧ ಎಂದು ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದರು. ಟೋಲ್ ಸ್ಥಳಾಂತರಕ್ಕೆ ಮಾಜಿ ಸಚಿವ ಕೆ ಅಭಯಚಂದ್ರ ಜೈನ್ ಆಗ್ರಹಿಸಿದರು. ಮಾಜಿ ಶಾಸಕ ಕೆ.ವಿಜಯಕುಮಾರ್ ಶೆಟ್ಟಿ, ಮುಖಂಡರಾದ ಮಿಥುನ್ ರೈ, ಶಾಲೆಟ್ ಪಿಂಟೊ, ಕೆ.ಸದಾಶಿವ ಶೆಟ್ಟಿ, ಪುರುಷೋತ್ತಮ ಚಿತ್ರಾಪುರ, ರೇವತಿ ಪುತ್ರನ್, ಬಿ.ಕೆ ಇಮ್ತಿಯಾಜ್, ಶ್ರೀನಾಥ್ ಕುಲಾಲ್, ಅಬ್ದುಲ್ ಅಜ್ಮಲ್, ಮಕ್ಸೂದ್ ಬಿ.ಕೆ, ಹರೀಶ್ ಪುತ್ರನ್ ಮೂಲ್ಕಿ, ಧನಂಜಯ ಮಟ್ಟು, ವಸಂತ್ ಬೆರ್ನಾಡ್, ಶಶಿಕಾಂತ್ ಶೆಟ್ಟಿ, ಸದಾಶಿವ ಅಮೀನ್ ಉದಯ ಶೆಟ್ಟಿ, ಸುನೀಲ್ ಆಳ್ವ, ಮ್ಯಾಕ್ಸಿ ಕ್ಯಾಬ್ ಟ್ಯಾಕ್ಸಿಮೆನ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷ ದಿನೇಶ್ ಕುಂಪಲ, ಟಿ.ಎನ್.ರಮೇಶ್, ರಾಜೇಶ್ ಶೆಟ್ಟಿಪಡ್ರೆ, ಲಾರಿ ಮಾಲೀಕರ ಸಂಘದ ಮೂಸಬ್ಬ ಪಕ್ಷಿಕೆರೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಮಂಗಳೂರು ಉತ್ತರ ಪ್ರಧಾನ ಕಾರ್ಯದರ್ಶಿ ಅಶೋಕ್ ಕೃಷ್ಣಾಪುರ, ಸ್ಥಳೀಯರಿಂದ ಟೋಲ್ ಸಂಗ್ರಹಕ್ಕೆ ಬಿಜೆಪಿ ವಿರೋಧವಿದೆ. ಟೋಲ್‌ಗೇಟ್ ಸ್ಥಳಾಂತರಿಸಲು ಪತ್ರ ವ್ಯವಹಾರ ನಡೆಸಲಾಗುತ್ತಿದೆ ಎಂದರು.

ಪಕ್ಷದ ಪ್ರಮುಖರಾದ ಈಶ್ವರ್ ಕಟೀಲು ಕಸ್ತೂರಿ ಪಂಜ, ಬೃಜೇಶ್ ಚೌಟ, ರಜನಿ ದುಗ್ಗಣ್ಣ, ತಿಲಕ್ ರಾಜ್ ಕೃಷ್ಣಾಪುರ, ಗಣೇಶ್ ಹೊಸಬೆಟ್ಟು, ಗುರುಚಂದ್ರ ಹೆಗ್ಡೆ, ಗಂಗಾರಿ ವಿಠಲ ಸಾಲ್ಯಾನ್, ನಯನಾ ಕೋಟ್ಯಾನ್, ಜಯಾನಂದ ಚೇಳಾರು, ರಘುವೀರ್ ಪಣಂಬೂರು, ಸುಮಿತ್ರಾ ಕೆ, ಭರತ್ ರಾಜ್ ಕೃಷ್ಣಾಪುರ, ಯೋಗೀಶ್ ಸನಿಲ್ ಕುಳಾಯಿ, ರಮೇಶ್ ಅಳಪೆ, ಉದಯ ಆಳ್ವ, ಸಂತೋಷ್ ಶೆಟ್ಟಿ, ಮಧುಸೂಧನ್ ಮತ್ತಿತರರಿದ್ದರು.

ಬಿಜೆಪಿ ಖಂಡನೆ: ಪ್ರತಿಭಟನೆ ವೇಳೆ ಸುದ್ದಿವಾಹಿನಿಯೊಂದಕ್ಕೆ ಹೇಳಿಕೆ ನೀಡುವ ಸಂದರ್ಭ ಕಾಂಗ್ರೆಸ್ ಮುಖಂಡ ಮಿಥುನ್ ರೈ ಸಂಸದ ನಳಿನ್‌ಕುಮಾರ್ ಕಟೀಲು ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಬಿಜೆಪಿ ಮುಖಂಡ ಅಶೋಕ್ ಕೃಷ್ಣಾಪುರ ಅಸಮಾಧಾನ ವ್ಯಕ್ತಪಡಿಸಿದ್ದು, ಖಂಡಿಸಿದರು.

ಭಾರಿ ಸಂಖ್ಯೆಯಲ್ಲಿ ಪೊಲೀಸರು..!
ಪ್ರತಿಭಟನೆ ತಾತ್ಕಾಲಿಕವಾಗಿ ಹಿಂಪಡೆದರೂ ಟೋಲ್ ಕೇಂದ್ರಕ್ಕೆ ಬಿಗುಪೊಲೀಸ್ ಬಂದೋಬಸ್ತ್ ಮುಂದುವರಿಸಲಾಗಿದೆ. ಪ್ರತಿಭಟನೆಗೆ ಪ್ರತಿಭಟನಾಕಾರರಷ್ಟೇ (ಸುಮಾರು 150) ಪೊಲೀಸರನ್ನು ನಿಯೋಜಿಸಲಾಗಿತ್ತು. ಅಗತ್ಯವಾದಲ್ಲಿ ಪ್ರತಿಭಟನಾಕಾರರನ್ನು ಬಂಧಿಸಿ ಕೊಂಡೊಯ್ಯಲು ಸಿದ್ಧತೆ ನಡೆದಿತ್ತು. ಪಣಂಬೂರು ಎಸಿಪಿ ಶ್ರೀನಿವಾಸ ಗೌಡ ಬಂದೋಬಸ್ತ್ ನೇತೃತ್ವ ವಹಿಸಿದ್ದು, ಸುರತ್ಕಲ್ ಪಿಐ ರಾಮಕೃಷ್ಣ ಕೆ.ಜಿ, ಮೂಲ್ಲಿ ಪಿಐ ಅನಂತಪದ್ಮನಾಭ, ಸುರತ್ಕಲ್ ಎಸ್‌ಐ ಸುಂದರಿ, ಹರೀಶ್ ಉಸ್ತುವಾರಿ ವಹಿಸಿದ್ದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....