ಟೋಲ್ ಸಮಸ್ಯೆ ಕೇಂದ್ರ ಸರ್ಕಾರ ಬಗೆಹರಿಸಲಿ

Latest News

1300 ಕೋಟಿ ರೂಪಾಯಿ ಅನುದಾನ ಕೊಟ್ಟಾಗ ಕಳ್ಳ ಬಿಲ್ ಮಾಡಿ ದುಡ್ಡು ಲಪಟಾಯಿಸಿದರು ಎಂದ ಎಚ್​ಡಿಕೆ

ಬೆಂಗಳೂರು: ಅವರು ಎರಡನೇ ಬಾರಿ ನನ್ನ ಬೆನ್ನಿಗೆ ಚೂರಿ ಹಾಕಿದ್ರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಟಿಕೆಟ್ ಕೊಡಲು ನಿರಾಕರಿಸಿದ್ದೆ. ಆದರೆ ದೇವೇಗೌಡರನ್ನು...

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ ಬಾಂಗ್ಲಾ, ಪಿಂಕ್​ ಬಣ್ಣದ ಸ್ವೀಟ್ಸ್ ಫೋಟೋ ಶೇರ್​ ಮಾಡಿದ ಗಂಗೂಲಿ!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಗಂಡಸಿ ಗ್ರಾಮದಲ್ಲಿ ಕಾರ್ತಿಕ‌ ಮಹೋತ್ಸವ

ಅರಸೀಕೆರೆ:ತಾಲೂಕಿನ ಗಂಡಸಿ ಗ್ರಾಮದಲ್ಲಿರುವ ಶ್ರೀ ಶಂಭುಲಿಂಗೇಶ್ವರ ದೇಗುಲದ ಆವರಣದಲ್ಲಿ ಕಾರ್ತಿಕ ಮಹೋತ್ಸವ ಆಯೋಜಿಸಲಾಗಿತ್ತು. ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ಶ್ರೀ ವೀರಸೋಮೇಶ್ವರ ಪ್ರಸನ್ನ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡು...

ಮಂಗಳೂರು:  ಸುರತ್ಕಲ್ ಎನ್‌ಐಟಿಕೆ ಟೋಲ್‌ಗೇಟ್‌ನಲ್ಲಿ ಸ್ಥಳೀಯರಿಂದ ಶುಲ್ಕ ಸಂಗ್ರಹ ಮಾಡದಂತೆ ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಬಂಧಪಟ್ಟ ಸಚಿವಾಲಯವನ್ನು ಕೋರಲಾಗಿದೆ. ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎನ್‌ಎಚ್‌ಎಐ ಪ್ರಾದೇಶಿಕ ಅಧಿಕಾರಿ ಮತ್ತು ಮುಖ್ಯ ಇಂಜಿನಿಯರ್‌ಗೆ ಪತ್ರ ಬರೆದು ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದರು.

30 ಕಿ.ಮೀ ಅಂತರದಲ್ಲಿ 2 ಟೋಲ್‌ಗೇಟ್ ಇದ್ದು, ಅವೈಜ್ಞಾನಿಕವಾಗಿದೆ. ಹೆಜಮಾಡಿ ಟೋಲ್ ಕೇಂದ್ರದೊಂದಿಗೆ ವಿಲೀನ ಕಾರ್ಯವೂ ನಡೆದಿಲ್ಲ. ಈಗ ಸ್ಥಳೀಯರಿಂದ ಶುಲ್ಕ ಸಂಗ್ರಹಕ್ಕೆ ಮುಂದಾಗಿರುವುದು ನಿಯಮಬಾಹಿರ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೇಂದ್ರದ ಯೋಜನೆಗಳ ಜಾರಿ ಸಂದರ್ಭ ರಾಜ್ಯ ಸರ್ಕಾರದ ಜತೆ ಕೆಲವು ವಿನಾಯಿತಿ ಸಂಬಂಧಿಸಿ ಒಪ್ಪಂದ ನಡೆಯುತ್ತದೆ. ಹೆದ್ದಾರಿ ವಿಸ್ತೀರ್ಣ ಸಂದರ್ಭ ಜಾಗ ಕಳೆದುಕೊಂಡವರಿಗೆ, ಸ್ಥಳೀಯರಿಗೆ ವಿನಾಯಿತಿ ನೀಡುವ ಅಂಶ ಅದರಲ್ಲಿ ಅಡಕವಾಗಿದೆ. ಸುರತ್ಕಲ್ ಟೋಲ್‌ಗೇಟ್ ಬಗ್ಗೆ ಇರುವ ವಿನಾಯಿತಿ ಒಪ್ಪಂದವನ್ನು ಎನ್‌ಎಚ್‌ಎಐ ತಕ್ಷಣ ಜಿಲ್ಲಾಡಳಿತಕ್ಕೆ ಒಪ್ಪಿಸಬೇಕು. ಅಲ್ಲಿವರೆಗೆ ಸ್ಥಳೀಯರಿಂದ ಶುಲ್ಕ ಸಂಗ್ರಹಿಸುವುದನ್ನು ತಡೆಯವಂತೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮಿಷನರ್‌ಗೆ ಸೂಚಿಸಲಾಗಿದೆ ಎಂದರು.

ಕೇಂದ್ರದಿಂದ ಬಾಕಿ: ಹೆದ್ದಾರಿ ಕಾಮಗಾರಿ ನಡೆಸಿದ ಇರ್ಕಾನ್ ಸಂಸ್ಥೆಗೆ ಕೇಂದ್ರ ಸರ್ಕಾರ ಹಣ ಪಾವತಿಸಲು ಬಾಕಿ ಇರುವ ಕಾರಣ ಬಿ.ಸಿ.ರೋಡ್‌ನಲ್ಲಿ ಟೋಲ್ ಸಂಗ್ರಹ ನಡೆಯುತ್ತಿದೆ. ಸುರತ್ಕಲ್ ಟೋಲ್ ಕೇಂದ್ರವನ್ನು ಹೆಜಮಾಡಿ ಕೇಂದ್ರದ ಜತೆ ವಿಲೀನ ಮಾಡಿದರೆ ಕಾಮಗಾರಿ ವಹಿಸಿದ ನವಯುಗ ಸಂಸ್ಥೆ ದುಪ್ಪಟ್ಟು ಶುಲ್ಕ ಸಂಗ್ರಹ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಸಂಸದರು, ಕರ್ನಾಟಕದ ಕೇಂದ್ರ ಸಚಿವರು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಬೇಕು. ಟೋಲ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ಶಾಶ್ವತ ಪರಿಹಾರ ರೂಪಿಸಬೇಕು ಎಂದು ಖಾದರ್ ಒತ್ತಾಯಿಸಿದರು.

ಕೇಂದ್ರಕ್ಕೆ ನಿಯೋಗ
ವಿಮಾನ ನಿಲ್ದಾಣ ಖಾಸಗೀಕರಣ, ರೈಲ್ವೆ ಅಂಡರ್ ಬ್ರಿಡ್ಜ್, ಹೆದ್ದಾರಿ ಅಭಿವೃದ್ಧಿ ಸಹಿತ ಜಿಲ್ಲೆಯ ಹಲವು ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿ ಸಂಸದ ನಳಿನ್‌ಕುಮಾರ್ ಕಟೀಲ್ ಜತೆ ಮಾತುಕತೆ ನಡೆಸಿದ್ದೇನೆ. ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರ ಸಮಯ ನಿಗದಿಪಡಿಸಿ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಭೇಟಿಗೆ ಅವಕಾಶ ಕೋರಿದ್ದೇನೆ. ಸಚಿವ ಡಿ.ವಿ.ಸದಾನಂದ ಗೌಡರ ಜತೆಗೂ ಚರ್ಚಿಸಿದ್ದೇನೆ ಎಂದು ಸಚಿವ ಖಾದರ್ ತಿಳಿಸಿದರು.

- Advertisement -

Stay connected

278,667FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...