More

    ನಿತ್ಯ ಯೋಗಾಭಾಸ್ಯ ಮಾಡುವುದರಿಂದ ಮನಸ್ಸಿನ ವಿಕಾಸ ಸಾಧ್ಯ

    ಹೊಸಪೇಟೆ: ಪ್ರತಿನಿತ್ಯ ಯೋಗ ಅಭ್ಯಾಸದಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಲು ಸಹಕಾರಿ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ವಿ. ಪರಮಶಿವಮೂರ್ತಿ ಅಭಿಪ್ರಾಯಪಟ್ಟರು.

    ಸ್ವಾಗತ ಸಮಾರಂಭ

    ಕನ್ನಡ ವಿವಿಯ ನುಡಿಕಟ್ಟಡದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಎಂಎಸ್ಸಿ (ಯೋಗ ವಿಜ್ಞಾನ) ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಇದನ್ನೂ ಓದಿ:ವಿಜ್ಞಾನ ಪ್ರಯೋಗಗಳನ್ನು ನೋಡಿ ಆನಂದಿಸಿದ ಮಕ್ಕಳು

    ಯೋಗ ಮತ್ತು ದೈಹಿಕ ವ್ಯಾಯಾಮ ಮಾನವನ ಮಾನಸಿಕ ಸ್ಥೈರ್ಯ ಹೆಚ್ಚಿಸುತ್ತದೆ. ಯೋಗ ಎಂಬುದು ದೇಹ ದಂಡಿಸುವ ಪ್ರಕ್ರಿಯೆಯಲ್ಲ. ಯೋಗಕ್ಕೆ ವಯಸ್ಸಿನ ಮಿತಿಯಿಲ್ಲ. ಯೋಗ ಕಲೆಯೋ, ಅಥವಾ ವಿಜ್ಞಾನವೋ ಎನ್ನುವ ಚರ್ಚೆ ನಡೆಯುತ್ತಿದೆ. ವಿಶ್ವಕ್ಕೆ ಯೋಗ ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂಬುದು ನಮ್ಮೆಲ್ಲರ ಹೆಮ್ಮೆ ಎಂದರು.
    ಯೋಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಎಫ್.ಟಿ. ಹಳ್ಳಿಕೇರಿ ಮಾತನಾಡಿ, ಯೋಗ ಶಿಸ್ತು ಮತ್ತು ಚಿಕಿತ್ಸಾ ವಿಷಯವಾಗಿ ಅಧ್ಯಯನ ನಡೆಯುತ್ತಿದೆ. ವಿಶ್ವವಿದ್ಯಾಲಯದ ಯೋಗ ಅಧ್ಯಯನ ವಿಭಾಗವು ಪಠ್ಯೇತರ ಚಟುವಟಿಕೆಗಳ ಜತೆಗೆ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ಯೋಗ ತರಬೇತಿ ಶಿಬಿರಗಳನ್ನು ನಡೆಸುತ್ತಿದೆ. ಸಾರ್ವಜನಿಕರಿಗೆ ಯೋಗದ ಮೂಲಕ ಆರೋಗ್ಯದ ತಿಳಿವಳಿಕೆ ನೀಡಲಾಗುತ್ತಿದೆ. ಸಾರ್ವಜನಿಕರು ಯೋಗ ಶಿಬಿರದ ಲಾಭ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts